ಕರಣ್ ಜೋಹರ್ ಮನೆಗೆಲಸದವರಿಗೆ ಕೊರೊನಾ, ಕುಟುಂಬ ಸಮೇತ ಕ್ವಾರಂಟೈನ್

|

Updated on: May 26, 2020 | 2:26 PM

ದೆಹಲಿ: ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಅವರ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಕರಣ್ ಜೋಹರ್ ಸ್ವಯಂ ಕೊರೊನಾ ಪರೀಕ್ಷೆಗೊಳಗಾಗಿದ್ದಾರೆ. ಕರಣ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ ಸ್ವಯಂ ಪ್ರೇರಿತರಾಗಿ ಪರೀಕ್ಷೆಗೊಳಗಾಗಿರುವ ಕರಣ್ ತಮಗೆ ಕೊರೊನಾ ನೆಗೆಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಹಾಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಕರಣ್ ಹಾಗೂ ಕುಟುಂಬಸ್ಥರೆಲ್ಲರೂ ಸ್ವಯಂ ಪರೀಕ್ಷೆ ಮಾಡಿಸಿಕೊಂಡಿದ್ದಲ್ಲದೆ, ಮುಂದಿನ 14 ದಿನಗಳವರೆಗೆ ಕ್ವಾರಂಟೈನ್​ನಲ್ಲಿ ಕಳೆಯಲಿದ್ದಾರೆ.

ಕರಣ್ ಜೋಹರ್ ಮನೆಗೆಲಸದವರಿಗೆ ಕೊರೊನಾ, ಕುಟುಂಬ ಸಮೇತ ಕ್ವಾರಂಟೈನ್
ಕರಣ್​ ಜೋಹರ್
Follow us on

ದೆಹಲಿ: ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಅವರ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಕರಣ್ ಜೋಹರ್ ಸ್ವಯಂ ಕೊರೊನಾ ಪರೀಕ್ಷೆಗೊಳಗಾಗಿದ್ದಾರೆ.

ಕರಣ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ ಸ್ವಯಂ ಪ್ರೇರಿತರಾಗಿ ಪರೀಕ್ಷೆಗೊಳಗಾಗಿರುವ ಕರಣ್ ತಮಗೆ ಕೊರೊನಾ ನೆಗೆಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಹಾಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಕರಣ್ ಹಾಗೂ ಕುಟುಂಬಸ್ಥರೆಲ್ಲರೂ ಸ್ವಯಂ ಪರೀಕ್ಷೆ ಮಾಡಿಸಿಕೊಂಡಿದ್ದಲ್ಲದೆ, ಮುಂದಿನ 14 ದಿನಗಳವರೆಗೆ ಕ್ವಾರಂಟೈನ್​ನಲ್ಲಿ ಕಳೆಯಲಿದ್ದಾರೆ.

Published On - 12:15 pm, Tue, 26 May 20