ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ

ಮಾರ್ಚ್ 8ರಂದು ‘ಕರಟಕ ದಮನಕ’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ.

ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ
ಪ್ರಭುದೇವ-ಶಿವಣ್ಣ
Follow us
ರಾಜೇಶ್ ದುಗ್ಗುಮನೆ
|

Updated on: Feb 28, 2024 | 10:55 AM

ನಟ ಶಿವರಾಜ್​ಕುಮಾರ್ (Shivarajkumar) ಹಾಗೂ ಪ್ರಭುದೇವ ಅವರು ಇದೇ ಮೊದಲ ಬಾರಿಗೆ ‘ಕರಟಕ ದಮನಕ’ ಸಿನಿಮಾಗಾಗಿ ಒಂದಾಗಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾ ಸಾಕಷ್ಟು ಭಿನ್ನವಾಗಿ ಮೂಡಿ ಬರಲಿದೆ ಎಂಬುದಕ್ಕೆ ಈ ಟೀಸರ್ ಸಾಕ್ಷಿ ನೀಡಿದೆ. ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

‘ಕಾಟೇರ’ ಸಿನಿಮಾ ಮೂಲಕ ರಾಕ್​ಲೈನ್ ವೆಂಕಟೇಶ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರ ನಿರ್ಮಾಣದಲ್ಲಿ ‘ಕರಟಕ ದಮನಕ’ ಸಿನಿಮಾ ಮೂಡಿ ಬಂದಿದೆ. ಮಾರ್ಚ್ 8ರಂದು ರಿಲೀಸ್ ಆಗಲಿರುವ ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ. ಯೋಗರಾಜ್ ಭಟ್ ಅವರು ಹೊಸ ರೀತಿಯಲ್ಲಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ.

ಆನಂದ್ ಆಡಿಯೋ ಟ್ವೀಟ್..

‘ಕರಟಕ ದಮನಕ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಒಟ್ಟಾಗಿ ನಟಿಸಿದ್ದಾರೆ. ಅವರ ಪಾತ್ರಗಳು ಗಮನ ಸೆಳೆದಿವೆ. ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್​​ ಮಾಡುವುದರಲ್ಲಿ ಕಿಂಗ್. ಈ ಸಿನಿಮಾದಲ್ಲಿ ಇವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾ ಆನಂದ್ ಹಾಗೂ ನಿಶ್ವಿಕಾ ನಾಯ್ಡು ನಾಯಕಿ ಪಾತ್ರ ಮಾಡಿದ್ದಾರೆ. ಪ್ರಿಯಾ ಆನಂದ್ ಅವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕನ್ನು ವಂಚಿಸಿರುವ ಆರೋಪದಲ್ಲಿ ಸಿಸಿಬಿಯಿಂದ ರಾಕ್​ಲೈನ್ ವೆಂಕಟೇಶ್ ಮಗನ ವಿಚಾರಣೆ!

ರಾಕ್​ಲೈನ್ ವೆಂಕಟೇಶ್ ಅವರು ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಒಂದು ಪಾತ್ರವನ್ನೂ ಮಾಡಿದ್ದಾರೆ. ಪೊಲೀಸ್ ಗೆಟಪ್​ನಲ್ಲಿ ಅವರು ಎಂಟ್ರಿ ಕೊಟ್ಟಿದ್ದಾರೆ. ರಂಗಾಯಣ ರಘು, ರವಿಶಂಕರ್ ಹಾಗೂ ದೊಡ್ಡಣ್ಣ ಭಿನ್ನ ಗೆಟಪ್​​ಗಳಲ್ಲಿ ಮಿಂಚಿದ್ದಾರೆ. ‘ಕರಟಕ ದಮನಕ’ ಸಿನಿಮಾಗೆ ಈ ಕಿಚ್ಚ ಸುದೀಪ್ ಅವರು ಬೆಂಬಲ ನೀಡಿರುವುದು ತಂಡದ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ