AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್

ಸಂಭಾವನೆ ವಿವಾದ ಹಾಗೂ ಡಬ್ಬಿಂಗ್ ಗದ್ದಲದ ನಡುವೆಯೂ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಒಳ್ಳೆಯ ಕಲೆಕ್ಷನ್ ಮಾಡಿರುವ ಚಿತ್ರಕ್ಕೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಬುಕ್ ಮೈ ಶೋನಲ್ಲೂ ಭರ್ಜರಿ ಟಿಕೆಟ್ ಬುಕಿಂಗ್ ಆಗುತ್ತಿದೆ.

‘ಕರಾವಳಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್
ಪ್ರಜ್ವಲ್
ರಾಜೇಶ್ ದುಗ್ಗುಮನೆ
|

Updated on: Jul 25, 2026 | 7:12 AM

Share

ಮುಖ್ಯಾಂಶಗಳು

  • ವಿವಾದಗಳ ನಡುವೆ ಬಂದ 'ಕರಾವಳಿ'
  • ಮೊದಲ ದಿನವೇ 77 ಲಕ್ಷ ರೂಪಾಯಿ ಕಲೆಕ್ಷನ್
  • ನೆಗೆಟಿವಿಟಿ ಮೆಟ್ಟಿ ನಿಂತ ಕರಾವಳಿ ಕಂಟೆಂಟ್

ಭಾರೀ ಕುತೂಹಲ ಮೂಡಿಸಿದ್ದ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ವಿವಾದಗಳ ಬೆನ್ನಲ್ಲೇ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದೆ. ಚಿತ್ರತಂಡಕ್ಕೆ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಆಸೆ ಇರಲಿಲ್ಲ. ಆದರೆ, ನಟ ಪ್ರಜ್ವಲ್ ಅವರ ಸಂಭಾವನೆ ವಿಷಯಕ್ಕೆ ಸಂಬಂಧಿಸಿದಂತೆ ಈ ಚಿತ್ರ ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಸಮಸ್ಯೆಯನ್ನೇ ಎದುರಿಸಬೇಕಾಗಿ ಬಂತು. ಸದ್ಯ ಈ ಎಲ್ಲಾ ಅಡೆತಡೆಗಳನ್ನು ಮೀರಿ ರಿಲೀಸ್ ಆಗಿರುವ ಸಿನಿಮಾದ ಮೊದಲ ದಿನದ ಗಳಿಕೆಯ ವಿವರ ಹೊರಬಿದ್ದಿದೆ. ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆಗಳು ಸಿಗುತ್ತಿರುವುದರಿಂದ ಮೊದಲ ದಿನದ ಕಲೆಕ್ಷನ್ ಉತ್ತಮವಾಗಿಯೇ ಇದೆ ಎನ್ನಬಹುದು.

ಸಾಸ್ನಿಲ್ಕ್​ ವರದಿ ಪ್ರಕಾರ ‘ಕರಾವಳಿ’ ಸಿನಿಮಾ ಮೊದಲ ದಿನ ದೇಶಾದ್ಯಂತ 77 ಲಕ್ಷ ರೂಪಾಯಿ ಗಳಿಕೆ ಮಾಡುವ ಮೂಲಕ ಭರವಸೆ ಮೂಡಿಸಿದೆ. ಪ್ರಮುಖ ಟಿಕೆಟ್ ಬುಕಿಂಗ್ ಆ್ಯಪ್ ಆದ ‘ಬುಕ್ ಮೈ ಶೋ’ನಲ್ಲಿ ಈ ಚಿತ್ರಕ್ಕೆ ಗರಿಷ್ಠ ಮಟ್ಟದ ರೆಸ್ಪಾನ್ಸ್ ಸಿಗುತ್ತಿರುವುದು ಕಲೆಕ್ಷನ್‌ಗೆ ಪ್ಲಸ್ ಪಾಯಿಂಟ್ ಆಗಿದೆ. ಬುಕ್ ಮೈ ಶೋ ಅಪ್ಲಿಕೇಶನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14.9 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಬುಕ್ ಆಗಿರುವುದು ಚಿತ್ರಕ್ಕೆ ಸಿಗುತ್ತಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಸಿನಿಮಾ ನೋಡಿದ ಪ್ರೇಕ್ಷಕರು ಮತ್ತು ವಿಮರ್ಶಕರು ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಎಲ್ಲೆಡೆ ಉತ್ತಮವಾದ ಮೌತ್ ಟಾಕ್ ಕೇಳಿಬರುತ್ತಿದೆ. ಹೀಗಾಗಿ, ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ಈ ಸಿನಿಮಾದ ಕಲೆಕ್ಷನ್ ಗ್ರಾಫ್ ಇನ್ನು ದೊಡ್ಡ ಮಟ್ಟದಲ್ಲಿ ಏರಿಕೆಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಮುಂಬರುವ ದಿನಗಳಲ್ಲಿ ಚಿತ್ರ ಮತ್ತಷ್ಟು ಭರ್ಜರಿ ಗಳಿಕೆ ಕಾಣುವ ವಿಶ್ವಾಸದಲ್ಲಿದೆ ಚಿತ್ರತಂಡ.

ಇದನ್ನೂ ಓದಿ: ಕಂಬಳದ ಓಟದ ಮಧ್ಯೆ ಸೇಡಿನ ಸುಳಿ; ಹೀಗಿದೆ ‘ಕರಾವಳಿ’

ಇನ್ನು ಸಿನಿಮಾದ ವಿವಾದದ ವಿಷಯಕ್ಕೆ ಬರುವುದಾದರೆ, ಈ ಹಿಂದೆ ನಡೆದ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದ ಸಮಯದಲ್ಲೇ ದೊಡ್ಡ ಗದ್ದಲ ಸೃಷ್ಟಿಯಾಗಿತ್ತು. ಪ್ರಜ್ವಲ್ ದೇವರಾಜ್ ಸಂಭಾವನೆ ಬಾಕಿ ಉಳಿಸಿಕೊಂಡಿದ್ದಕ್ಕೆ ಡಬ್ಬಿಂಗ್ ಮಾಡಲ್ಲ ಎಂದಿದ್ದರು. ಹೀಗಾಗಿ, ಅವರಿಗೆ ಬೇರೆಯವರಿಂದ ಡಬ್ ಮಾಡಿಸಿ, ಸಿನಿಮಾ ರಿಲೀಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಬಿಗ್ ಬಾಸ್ ಬಿಟ್ಟು ಬಂದ ಬಳಿಕ ಮಂಜುಗೆ ಕಾಡುತ್ತಿದೆ ಪಶ್ಚಾತ್ತಾಪ
ಬಿಗ್ ಬಾಸ್ ಬಿಟ್ಟು ಬಂದ ಬಳಿಕ ಮಂಜುಗೆ ಕಾಡುತ್ತಿದೆ ಪಶ್ಚಾತ್ತಾಪ