AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಸಿನಿಮಾ ಟ್ರೇಲರ್ ಗಲಾಟೆ: ಪ್ರಜ್ವಲ್ ದೇವರಾಜ್ ಸಹಾಯಕರ ವಿರುದ್ಧವೇ ಎಫ್‌ಐಆರ್

Karavali Movie Trailer Controversy: ಕರಾವಳಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಾಕಿ ಸಂಭಾವನೆ ವಿಚಾರವಾಗಿ ನಟನ ಪ್ರಚೋದನೆಯಿಂದಲೇ ಈ ರಾದ್ಧಾಂತ ನಡೆದಿದೆ ಎಂದು ಆರೋಪಿಸಲಾಗಿದ್ದು, ಉಪ್ಪಾರಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

'ಕರಾವಳಿ' ಸಿನಿಮಾ ಟ್ರೇಲರ್ ಗಲಾಟೆ: ಪ್ರಜ್ವಲ್ ದೇವರಾಜ್ ಸಹಾಯಕರ ವಿರುದ್ಧವೇ ಎಫ್‌ಐಆರ್
ಪ್ರಜ್ವಲ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 10, 2026 | 10:23 AM

Share

ಮುಖ್ಯಾಂಶಗಳು

  • ‘ಕರಾವಳಿ’ ಟ್ರೇಲರ್ ಲಾಂಚ್‌ನಲ್ಲಿ ಗಲಾಟೆ
  • ಚಿತ್ರದ ಕಾರ್ಯಕಾರಿ ನಿರ್ಮಾಪಕರಿಂದ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು
  • ಗಲಾಟೆ ಎಬ್ಬಿಸಿದ ಪ್ರಜ್ವಲ್ ದೇವರಾಜ್ ಸಹಾಯಕರು ಎಂಬ ಮಾಹಿತಿ ರಿವೀಲ್

‘ಕರಾವಳಿ’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಈವೆಂಟ್ ಹಲವು ಡ್ರಾಮಾಗಳಿಗೆ ಸಾಕ್ಷಿ ಆಯಿತು. ಪ್ರಜ್ವಲ್ (Prajwal Devaraj) ಅಭಿಮಾನಿಗಳು ಗಲಾಟೆ ಮಾಡಿದ್ದರು. ಈ ಗಲಾಟೆ ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಉದ್ದೇಶಪೂರ್ವಕವಾಗಿ ಗುಂಪು ಕಟ್ಟಿಕೊಂಡು ಬಂದು ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಆಪ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾರ್ಯಕಾರಿ ನಿರ್ಮಾಪಕನಿಂದ ದೂರು

ಚಿತ್ರದ ಕಾರ್ಯಕಾರಿ ನಿರ್ಮಾಪಕ ಅಂಕಿತ್ ಅವರು ನೀಡಿದ ದೂರಿನ ಆಧಾರದ ಮೇಲೆ ದಿಲೀಪ್, ಅವಿನಾಶ್ ಮತ್ತು ನಂದಕುಮಾರ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಆರೋಪಿಗಳು ಉದ್ದೇಶಪೂರ್ವಕವಾಗಿಯೇ ಟ್ರೇಲರ್ ರಿಲೀಸ್ ಆಗುವ ಸ್ಥಳಕ್ಕೆ ನುಗ್ಗಿದ್ದಾರೆ. ಗುಂಪು ಸೇರಿಕೊಂಡು ನಿರ್ದೇಶಕ, ನಿರ್ಮಾಪಕ ಹಾಗೂ ಅಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ ತೊಂದರೆ ಕೊಟ್ಟಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಅಭಿಮಾನಿಗಳ ಸೋಗಿನಲ್ಲಿ ಬಂದಿದ್ದು ಪ್ರಜ್ವಲ್ ಸಹಾಯಕರು

ಆರಂಭದಲ್ಲಿ, ಗಲಾಟೆ ಮಾಡಿದವರು ನಟ ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳು ಎಂದು ಹೇಳಲಾಗಿತ್ತು. ಆದರೆ, ಈಗ ಅಚ್ಚರಿಯ ಸತ್ಯವೊಂದು ಬಯಲಾಗಿದೆ. ಗಲಾಟೆ ಮಾಡಿದ ದಿಲೀಪ್, ಅವಿನಾಶ್ ಮತ್ತು ನಂದಕುಮಾರ್ ಕೇವಲ ಅಭಿಮಾನಿಗಳಲ್ಲ, ಬದಲಾಗಿ ಅವರು ಪ್ರಜ್ವಲ್ ದೇವರಾಜ್ ಅವರ ಜೊತೆಯಲ್ಲೇ ಕೆಲಸ ಮಾಡುವ ಸಹಾಯಕರು ಎಂಬುದು ಪತ್ತೆಯಾಗಿದೆ. ಇವರು ‘ಕರಾವಳಿ’ ಸಿನಿಮಾದ ಶೂಟಿಂಗ್ ಸಮಯದಲ್ಲೂ ಪ್ರಜ್ವಲ್ ಅವರಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಜ್​ ಬಿ. ಶೆಟ್ಟಿ ಮೇಲೆ ಅಸಮಾಧಾನವೇ? ಪ್ರಜ್ವಲ್ ದೇವರಾಜ್ ಉತ್ತರ ಏನು?

ಗಲಾಟೆಗೆ ಕುಮ್ಮಕ್ಕು ನೀಡಿದರಾ ಪ್ರಜ್ವಲ್ ದೇವರಾಜ್?

ಸಂಭಾವನೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಕಾರಣಕ್ಕೆ ಸ್ವತಃ ನಟ ಪ್ರಜ್ವಲ್ ದೇವರಾಜ್ ಅವರೇ ತಮ್ಮ ಸಹಾಯಕರನ್ನು ಎತ್ತಿಕಟ್ಟಿ ಈ ಗಲಾಟೆ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ಗಲಾಟೆ ಮಾಡಿದವರು ಪ್ರಜ್ವಲ್ ಸಹಾಯಕರೇ ಎಂಬುದಕ್ಕೆ ಪೂರಕ ಸಾಕ್ಷ್ಯಗಳನ್ನು ಕಲೆಹಾಕಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:22 am, Fri, 10 July 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ