ಯಶ್​ ಸಹೋದರಿ ಪಾತ್ರದಲ್ಲಿ ಕರೀನಾ ಕಪೂರ್​? ‘ಟಾಕ್ಸಿಕ್​’ ಚಿತ್ರದ ಬಗ್ಗೆ ಬಿಗ್ ನ್ಯೂಸ್​

ಕರೀನಾ ಕಪೂರ್​ ಖಾನ್​ ಅವರಿಗೆ ಸಖತ್​ ಬೇಡಿಕೆ ಇದೆ. ಮದುವೆ ಬಳಿಕವೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಟಾಕ್ಸಿಕ್​’ ಸಿನಿಮಾದಲ್ಲಿ ಕರೀನಾ ಕಪೂರ್ ಅವರ ಪಾತ್ರ ಏನು ಎಂಬ ಬಗ್ಗೆ ಈಗ ಹೊಸ ಸುದ್ದಿ ಕೇಳಿಬಂದಿದೆ. ಇಷ್ಟು ದಿನ ಅವರೇ ನಾಯಕಿ ಎನ್ನುವ ಗಾಸಿಪ್​ ಹರಿದಾಡುತ್ತಿತ್ತು. ಆದರೆ ಈಗ ಹೊಸ ವಿಚಾರ ಬಹಿರಂಗ ಆಗಿದೆ.

ಯಶ್​ ಸಹೋದರಿ ಪಾತ್ರದಲ್ಲಿ ಕರೀನಾ ಕಪೂರ್​? ‘ಟಾಕ್ಸಿಕ್​’ ಚಿತ್ರದ ಬಗ್ಗೆ ಬಿಗ್ ನ್ಯೂಸ್​
ಯಶ್​, ಕರೀನಾ ಕಪೂರ್​

Updated on: Mar 27, 2024 | 9:04 PM

ಅನೌನ್ಸ್​ ಆದ ದಿನದಿಂದಲೂ ‘ಟಾಕ್ಸಿಕ್​’ ಸಿನಿಮಾ (Toxic Movie) ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಈ ಸಿನಿಮಾದಲ್ಲಿ ಯಶ್​ (Yash) ಹೀರೋ ಆಗಿ ನಟಿಸುತ್ತಿದ್ದು, ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಟೈಟಲ್​ ಟೀಸರ್​ ಬಿಡುಗಡೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಪ್​ಡೇಟ್​ ಕೂಡ ಈ ಚಿತ್ರತಂಡದಿಂದ ಸಿಕ್ಕಿಲ್ಲ. ಹಾಗಿದ್ದರೂ ಸಹ ಗಾಸಿಪ್​ಗಳು ಜೋರಾಗಿಯೇ ಕೇಳಿಬರುತ್ತಿವೆ. ಪಾತ್ರವರ್ಗದ ಬಗ್ಗೆ ಒಂದಷ್ಟು ಮಾಹಿತಿಗಳು ಹರಿದಾಡುತ್ತಿವೆ. ಕರೀನಾ ಕಪೂರ್​ ಖಾನ್​ (Kareena Kapoor Khan) ಅವರು ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಆದರೆ ಆ ಸುದ್ದಿಗೆ ಈಗ ದೊಡ್ಡ ಟ್ವಿಸ್ಟ್​ ಸಿಕ್ಕಿದೆ.

‘ಟಾಕ್ಸಿಕ್​’ ಸಿನಿಮಾದ ಪಾತ್ರವರ್ಗದ ಬಗ್ಗೆ ‘ಟೈಮ್ಸ್​ ನೌ’ ವರದಿ ಮಾಡಿದೆ. ಅದರ ಪ್ರಕಾರ, ಈ ಸಿನಿಮಾದಲ್ಲಿ ಕರೀನಾ ಕಪೂರ್​ ಅವರು ನಟಿಸಲಿರುವುದು ನಿಜ. ಆದರೆ ಅವರದ್ದು ನಾಯಕಿಯ ಪಾತ್ರ ಅಲ್ಲ. ಕಥಾನಾಯಕನ ಅಕ್ಕನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ಯಶ್​ ಅವರ ಸಹೋದರಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಲಿದ್ದಾರೆ ಎಂದು ವರದಿ ಆಗಿದೆ. ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಇದನ್ನೂ ಓದಿ: ಪ್ರತಿ ರಾತ್ರಿ ಅಳುತ್ತಿದ್ದೆ, ತಿಂಗಳುಗಳ ಕಾಲ ನಿದ್ದೆ ಇರಲಿಲ್ಲ: ಕೆಟ್ಟ ದಿನ ನೆನೆದ ಕರೀನಾ

ಇನ್ನು, ಯಶ್​ ಅವರಿಗೆ ‘ಟಾಕ್ಸಿಕ್​’ ಸಿನಿಮಾದಲ್ಲಿ ಯಾರು ಜೋಡಿ ಆಗುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಬಾಲಿವುಡ್​ನ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಾರೆ ಎಂದು ಕೂಡ ‘ಟೈಮ್ಸ್​ ನೌ’ ಸುದ್ದಿ ಪ್ರಕಟ ಮಾಡಿದೆ. ಸದ್ಯಕ್ಕಂತೂ ಚಿತ್ರತಂಡದವರು ಪಾತ್ರವರ್ಗದ ಆಯ್ಕೆ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಅಫೀಶಿಯಲ್​ ಅನೌನ್ಸ್​ಮೆಂಟ್​ ಆಗಲಿ ಎಂದು ಎಲ್ಲರೂ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ಮತ್ತೆ ನಾನು ಅಷ್ಟು ತೆಳ್ಳಗಾಗಲ್ಲ’: ನಿರ್ಧಾರದ ಜೊತೆ ಕಾರಣ ತಿಳಿಸಿದ ಕರೀನಾ

ಭಾರಿ ಸಿದ್ಧತೆಯೊಂದಿಗೆ ಯಶ್​ ಅವರು ‘ಟಾಕ್ಸಿಕ್’ ಸಿನಿಮಾ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕಿಂತಲೂ ದೊಡ್ಡದಾಗಿ ಈ ಸಿನಿಮಾ ಮೂಡಿಬರಲಿದೆ ಎಂಬ ನಿರೀಕ್ಷೆ ಇದೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಸಂಸ್ಥೆಯು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಇತ್ತ, ಯಶ್​ ಅವರು ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚಾಗುತ್ತಿದೆ. ಕೆಲವೇ ದಿನಗಳ ಹಿಂದೆ ಗೋವಾದಲ್ಲಿ ‘ಟಾಕ್ಸಿಕ್​’ ಚಿತ್ರದ ಶೂಟಿಂಗ್​ ತಯಾರಿಯಲ್ಲಿದ್ದ ಅವರ ಫೋಟೋ ಮತ್ತು ವಿಡಿಯೋಗಳು ಲೀಕ್​ ಆಗಿದ್ದವು. ಅದನ್ನು ಫ್ಯಾನ್ಸ್ ಪೇಜ್​ಗಳಲ್ಲಿ ಶೇರ್​ ಮಾಡಿಕೊಳ್ಳಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us