Koragajja: ಕೊರಗಜ್ಜ ದೈವದ ಕುರಿತು ಸೆಟ್ಟೇರಿತು ಹೊಸ ಸಿನಿಮಾ; ‘ಕರಿ ಹೈದ ಕರಿ ಅಜ್ಜ’ ಬಗ್ಗೆ ಇಲ್ಲಿದೆ ಮಾಹಿತಿ..

| Updated By: ಮದನ್​ ಕುಮಾರ್​

Updated on: Nov 20, 2022 | 7:21 PM

Kari Haida Kari Ajja: ಸುಧೀರ್ ಅತ್ತಾವರ್ ಅವರು ‘ಕರಿ ಹೈದ ಕರಿ ಅಜ್ಜ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನಡೆಯಿತು.

Koragajja: ಕೊರಗಜ್ಜ ದೈವದ ಕುರಿತು ಸೆಟ್ಟೇರಿತು ಹೊಸ ಸಿನಿಮಾ; ‘ಕರಿ ಹೈದ ಕರಿ ಅಜ್ಜ’ ಬಗ್ಗೆ ಇಲ್ಲಿದೆ ಮಾಹಿತಿ..
‘ಕರಿ ಹೈದ ಕರಿ ಅಜ್ಜ’ ಸಿನಿಮಾ ಮುಹೂರ್ತ
Follow us on

ತುಳುನಾಡಿನ ದೈವಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಚರ್ಚೆ ಜೋರಾಗಿದೆ. ‘ಕಾಂತಾರ’ (Kantara Movie) ಸಿನಿಮಾದಲ್ಲಿ ಭೂತಾರಾಧನೆಯನ್ನು ಕಣ್ಣಿಗೆ ಕಟ್ಟುವಂತೆ ತೋರಿಸಿದ ಬಳಿಕ ಬೇರೆ ಬೇರೆ ಭಾಗದ ಜನರಿಗೆ ಇದರ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಈ ನಡುವೆ ಕೊರಗಜ್ಜ ದೈವದ ಕುರಿತು ಹೊಸ ಸಿನಿಮಾ ಸೆಟ್ಟೇರಿದೆ. ಈ ಚಿತ್ರಕ್ಕೆ ‘ಕರಿ ಹೈದ ಕರಿ ಅಜ್ಜ’ (Kari Haida Kari Ajja) ಎಂದು ಹೆಸರು ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಕೂಡ ನೆರವೇರಿದೆ. ‘ಕರಿ ಹೈದ ಕರಿ ಅಜ್ಜ’ ಚಿತ್ರದ ಮೂಲಕ ಕೊರಗಜ್ಜ ದೈವದ (Koragajja) ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಲು ಚಿತ್ರತಂಡ ಮುಂದಾಗಿದೆ. ಈ ಸಿನಿಮಾದಲ್ಲಿ ಕಬೀರ್​ ಬೇಡಿ, ಶ್ರುತಿ, ಭವ್ಯ ಮುಂತಾದ ಖ್ಯಾತ ಕಲಾವಿದರು ನಟಿಸಲಿರುವುದು ವಿಶೇಷ.

‘ಕರಿ ಹೈದ ಕರಿ ಅಜ್ಜ’ ಚಿತ್ರವು ಧೃತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಮೂಲಕ ನಿರ್ಮಾಣ ಆಗಲಿದೆ. ತ್ರಿವಿಕ್ರಮ್ ಸಪಲ್ಯ ಅವರು ಬಂಡವಾಳ ಹೂಡುತ್ತಿದ್ದಾರೆ. ಸುಧೀರ್ ಅತ್ತಾವರ್ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನಡೆಯಿತು. ಬೆಳ್ತಂಗಡಿ ತಾಲೂಕಿನ  ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಕ್ಯಾಮೆರಾ ಚಾಲನೆ ಮಾಡುವುದರ ಮೂಲಕ ಚಿತ್ರದ ಕೆಲಸಗಳಿಗೆ ಚಾಲನೆ ನೀಡಿದರು. ಮಾತೃಶ್ರೀ ಕಮಲಾ ಕೆ. ಸಪಲ್ಯ ಆರಂಭ ಫಲಕ ತೋರಿಸಿದರು.

ಕೊರಗಜ್ಜೆ ದೈವದ ಕುರಿತು ಸಿನಿಮಾ ಮಾಡಬೇಕು ಎಂದು ಈ ಮೊದಲಿನಿಂದಲೂ ಪ್ರಯತ್ನಗಳು ನಡೆದಿದ್ದವು. ಈಗ ಸುಧೀರ್​ ಅತ್ತಾವರ್​ ಅವರು ಸಾಕಷ್ಟು ಮಾಹಿತಿ ಕಲೆ ಹಾಕಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಕೊರಗಜ್ಜನ ಜನಾಂಗದ ಅನೇಕರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದ ಸಮಯದಲ್ಲಿದ್ದ ಕೊರಗಜ್ಜನ ನೈಜ ಬದುಕಿನ ಬಗ್ಗೆ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜನರಿಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಕಬೀರ್ ಬೇಡಿ ಅವರು ಈ ಚಿತ್ರದಲ್ಲೊಂದು ವಿಶೇಷ ಪಾತ್ರ ಮಾಡಲಿದ್ದಾರೆ. ಭರತ್ ಸೂರ್ಯ ಎಂಬ ಹೊಸ ಕಲಾವಿದನನ್ನು ‘ಕರಿ ಹೈದ ಕರಿ ಅಜ್ಜ’ ಸಿನಿಮಾ ಮೂಲಕ ಪರಿಚಯಿಸಲಾಗುತ್ತಿದೆ. ವಿದ್ಯಾಧರ್ ಶೆಟ್ಟಿ ಸಂಕಲನ, ಪವನ್ ವಿ. ಕುಮಾರ್, ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್-ಕೃಷ್ಣ ರವಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:21 pm, Sun, 20 November 22