Karnataka Budget 2025: ಮಲ್ಟಿಪ್ಲೆಕ್ಸ್​ಗಳ ನಟ್ಟು-ಬೋಲ್ಟು ಟೈಟ್ ಮಾಡಿದ ರಾಜ್ಯ ಸರ್ಕಾರ

|

Updated on: Mar 07, 2025 | 11:07 AM

Karnataka Budget 2025: ಕರ್ನಾಟಕ ಬಜೆಟ್ 2025ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ. ಬಜೆಟ್​ನಲ್ಲಿ ಸಿನಿಮಾ ಪ್ರಿಯರಿಗೆ ಸಿಹಿ ನೀಡಿದ್ದಾರೆ. ಕರ್ನಾಟಕ ಸಿನಿಮಾ ಪ್ರಿಯರ ಮತ್ತು ಸಿನಿಮಾ ರಂಗದವರ ಬಹು ವರ್ಷಗಳ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್​ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರುವ ಒತ್ತಾಯಕ್ಕೆ ಅಸ್ತು ಎಂದಿದ್ದಾರೆ ಸಿದ್ದರಾಮಯ್ಯ.

Karnataka Budget 2025: ಮಲ್ಟಿಪ್ಲೆಕ್ಸ್​ಗಳ ನಟ್ಟು-ಬೋಲ್ಟು ಟೈಟ್ ಮಾಡಿದ ರಾಜ್ಯ ಸರ್ಕಾರ
Karnataka Budget 2025
Follow us on

ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಫೆಬ್ರವರಿ 07) ದಾಖಲೆಯ 16ನೇ ಬಾರಿ ಬಜೆಟ್ ಮಂಡನೆ (Karnataka Budget 2025) ಮಾಡುತ್ತಿದ್ದಾರೆ. ಬಜೆಟ್ ಭಾಷಣ ಓದಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿಯೊಂದನ್ನು ಸಿದ್ದರಾಮಯ್ಯ ನೀಡಿದ್ದಾರೆ. ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್​ನಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರಗಳನ್ನು 200 ರೂಪಾಯಿಗೆ ನಿಗದಿಪಡಿಸಿದ್ದಾರೆ.

ನೆರೆ ರಾಜ್ಯಗಳಾದ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ಬಹುತೇಕ ದುಪ್ಪಟ್ಟು ಇತ್ತು. ಕೆಲ ಪರಭಾಷೆ ಸಿನಿಮಾಗಳಂತೂ ಕನಿಷ್ಟ ಟಿಕೆಟ್ ದರವನ್ನು 1000 ರೂಪಾಯಿ ಇರಿಸಿ ಸಿನಿಮಾ ಬಿಡುಗಡೆ ಮಾಡಿದ ಉದಾಹರಣೆಗಳೂ ಸಹ ಇವೆ. ಇದರಿಂದ ಕನ್ನಡ ಸಿನಿಮಾಗಳಿಗೆ ದೊಡ್ಡ ಹೊಡೆತ ಬಿದ್ದಿತ್ತು. ಇದೇ ಕಾರಣಕ್ಕೆ ಸಿನಿಮಾ ಮಂದಿ ಸಹ ಮಲ್ಟಿಪ್ಲೆಕ್ಸ್​ ಟಿಕೆಟ್ ದರವನ್ನು ನಿಯಂತ್ರಣ ಮಾಡಬೇಕೆಂದು ಒತ್ತಾಯಿಸಿದ್ದರು.

ಕೆಲ ತಿಂಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸಹ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರ ನಿಯಂತ್ರಣ ಮಾಡುವಂತೆ ಮನವಿ ಮಾಡಿದ್ದರು. ಆಗಲೇ ಭರವಸೆ ನೀಡಿದ್ದ ಸಿದ್ದರಾಮಯ್ಯ ಅವರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಇತ್ತೀಚೆಗೆ ಸಹ ಸದನದಲ್ಲಿ ಮಲ್ಟಿಫ್ಲೆಕ್ಸ್​ ಗಳ ದುಬಾರಿ ಟಿಕೆಟ್ ದರ ನಿಯಂತ್ರಣ ಮೀರಿರುವುದರ ಬಗ್ಗೆ ಚರ್ಚೆಯಾಗಿತ್ತು. ಆಗಲೂ ಸಹ ಸಿದ್ದರಾಮಯ್ಯ ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಅದರಂತೆ ಇಂದು ಬಜೆಟ್​ನಲ್ಲಿ ಮಲ್ಟಿಪ್ಲೆಕ್ಸ್​ ಟಿಕೆಟ್ ದರದ ಮೇಲೆ ನಿಯಂತ್ರಣ ಹೇರಿದ್ದಾರೆ.

ಇದನ್ನೂ ಓದಿ
ಅನುಮತಿ ಇಲ್ಲದೆ ಚಿತ್ರೀಕರಣ, ರಾಣಾ ಸಿನಿಮಾ ಮೇಲೆ ಅರಣ್ಯ ಇಲಾಖೆಯಿಂದ ದಾಳಿ
ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
ಮೊಮ್ಮಗ ಮಾಡಿದ ಸಾಲದಿಂದ ಹರಾಜಿಗೆ ಬಂತು ಶಿವಾಜಿ ಗಣೇಶನ್ ಮನೆ

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್​​ನಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ

ಆದರೆ ಮಲ್ಟಿಪ್ಲೆಕ್ಸ್​ಗಳು ರಾಜ್ಯ ಸರ್ಕಾರದ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ಹಿಂದೆ ಸಹ ಇಂಥಹಾ ಪ್ರಯತ್ನಗಳು ನಡೆದಾಗ ಮಲ್ಟಿಪ್ಲೆಕ್ಸ್​ಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಈ ಬಾರಿ ಮಲ್ಟಿಪ್ಲೆಕ್ಸ್​ಗಳು ಏನು ಮಾಡಲಿವೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Fri, 7 March 25