ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ ಅಂಗೀಕಾರ
ವಿಧಾನಸಭೆಯಲ್ಲಿ ‘ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ’ ಇಂದು (ಜು.23) ಅಂಗೀಕಾರಗೊಂಡಿದೆ. ಇದರಿಂದ ಈ ಕ್ಷೇತ್ರದ ಅಸಂಘಟಿತ ಕಾರ್ಮಿಕರಿಗೆ ಅನುಕೂಲ ಆಗಲಿದೆ. ಆದರೆ ಜನರಿಗೆ ಸಿನಿಮಾ ಟಿಕೆಟ್ಗಳ ದರ ಜಾಸ್ತಿಯಾಗಲಿದೆ, ಒಟಿಟಿ ಚಂದಾದಾರರ ಶುಲ್ಕ ಕೂಡ ಹೆಚ್ಚಲಿದೆ. ಆ ಕಾರಣದಿಂದ ಕೆಲವರು ಇದನ್ನು ವಿರೋಧಿಸಿದ್ದಾರೆ.
ಕರ್ನಾಟಕದ ಸಿನಿಮಾ ಹಾಗೂ ಸಾಂಸ್ಕೃತಿಕ ರಂಗದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ‘ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ 2024’ಕ್ಕೆ ಇಂದು (ಜುಲೈ 23) ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿಧಾನ ಪರಿಷತ್‌ನಲ್ಲಿ ಅಂಗೀಕಾರಗೊಂಡು, ಈ ಕಾಯ್ದೆ ಜಾರಿಗೆ ಬಂದರೆ ಸಿನಿಮಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲ ಆಗಲಿದೆ. ಆದರೆ ಪ್ರೇಕ್ಷಕರಿಗೆ ಹೊರೆ ಆಗಲಿದೆ. ಮನರಂಜನೆಯ ಶುಲ್ಕ ಹೆಚ್ಚಾಗಲಿದೆ.
ಸಿನಿಮಾ ಹಾಗೂ ಸಾಂಸ್ಕೃತಿಕ ವಲಯದ ಕಾರ್ಮಿಕರಿಗಾಗಿ ಈ ವಿದೇಯಕದಿಂದ ಸಾಕಷ್ಟು ನೆರವು ನೀಡಲು ಉದ್ದೇಶಿಸಲಾಗಿದೆ. ಇದರಿಂದಾಗಿ ಸಿನಿಮಾಗಳ ಟಿಕೆಟ್ ದರ ಮತ್ತು ಒಟಿಟಿ ಪ್ಲಾಟ್ಫಾರ್ಮ್ಗಳ ಚಂದದಾರರ ಶುಲ್ಕ ಕೂಡ ಜಾಸ್ತಿ ಆಗಲಿದೆ. ಆದರೆ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಮುಂತಾದ ಸೌಕರ್ಯ ಸಿಗಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾವರ್ಜನಿಕರ ವಲಯದಲ್ಲಿ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: 2024ರ ಜನಪ್ರಿಯ, ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿ ರಿಲೀಸ್; ಕನ್ನಡದ ಒಂದು ಚಿತ್ರವೂ ಇಲ್ಲ
ಕನ್ನಡ ಚಿತ್ರರಂಗ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಯೋಜನೆಯ ಅಡಿಯಲ್ಲಿ ಅಸಂಘಟಿತ ಕಾರ್ಯಕರ್ತರನ್ನು ನೋಂದಾಯಿಸಿಕೊಳ್ಳಲಾಗುವುದು. ನೋಂದಾಯಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವ ಮಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವ ಸಂಸ್ಕಾರ ವೆಚ್ಚ ನೀಡಲಾಗುವುದು.
ಇದನ್ನೂ ಓದಿ: ದರ್ಶನ್ ಚಿತ್ರರಂಗದ ಆಸ್ತಿ ಮತ್ತು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಬಹಳ ದೊಡ್ಡದು: ಹಂಸಲೇಖ
ಇಷ್ಟೇ ಅಲ್ಲದೇ, ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಕೂಡ ಉದ್ದೇಶಿಸಲಾಗಿದೆ. ಆದರೆ ಈ ಯೋಜನೆಗಳಿಂದ ಸಾರ್ವಜನಿಕರಿಗೆ ಮನರಂಜನೆ ದುಬಾರಿ ಆಗಲಿದೆ. ಸಿನಿಮಾಗಳ ಟಿಕೆಟ್ ದರ ಹೆಚ್ಚಲಿದೆ. ಅಲ್ಲದೇ, ಒಟಿಟಿ ಸಬ್ಸ್ಕ್ರಿಪ್ಷನ್ ಕೂಡ ದುಬಾರಿ ಆಗುತ್ತದೆ. ಆದ್ದರಿಂದ ವಿಧಾನಸಭೆಯಲ್ಲಿ ವಿರೋಧ ಪಕ್ಷದಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಅದರ ನಡುವೆಯೂ ವಿಧೇಯಕ ಅಂಗೀಕಾರ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:56 pm, Tue, 23 July 24