ವಾಣಿಜ್ಯ ಮಂಡಳಿ ಚುನಾವಣೆಗೂ ಮುನ್ನ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಕುಟುಂಬ ಹಾಗೂ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ವಿತರಕ, ನಿರ್ಮಾಪಕ ಶಿಲ್ಪಾ ಶ್ರೀ‌ನಿವಾಸ್ ಅವರು ಆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಟ್ರಸ್ಟ್​​ಗಾಗಿ ಅವರು ಹತ್ತು ಲಕ್ಷ ರೂಪಾಯಿ ಮೀಸಲಿಟ್ಟಿದ್ದಾರೆ. ‘ಕನ್ನಡ ಚಿತ್ರರಂಗಕ್ಕೆ ಈ ಟ್ರಸ್ಟ್ ಬೆಳಕಾಗಲಿ’ ಎಂದು ಅವರು ಹೇಳಿದ್ದಾರೆ.

ವಾಣಿಜ್ಯ ಮಂಡಳಿ ಚುನಾವಣೆಗೂ ಮುನ್ನ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್
ಶಿಲ್ಪಾ ಶ್ರೀನಿವಾಸ್​ ಸುದ್ದಿಗೋಷ್ಠಿ
Follow us
ಮದನ್​ ಕುಮಾರ್​
|

Updated on: Sep 22, 2023 | 1:04 PM

ಪ್ರತಿ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(Karnataka ​Film Chamber of Commerce) ಚುನಾವಣೆ ನಡೆದಾಗ ಚಿತ್ರರಂಗದಲ್ಲಿ ಕುತೂಹಲ ಗರಿಗೆದರುತ್ತದೆ. ಈ ಬಾರಿ ಯಾರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ ಎಂಬ ಕೌತುಕದೊಂದಿಗೆ ಎಲೆಕ್ಷನ್​ ನಡೆಯುತ್ತದೆ. 2023ನೇ ಸಾಲಿನ ವಾಣಿಜ್ಯ ಮಂಡಳಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್​ 23ರಂದು ಫಿಲ್ಮ್​ ಚೇಂಬರ್​ ಎಲೆಕ್ಷನ್​ (​Film Chamber Elections) ಜರುಗಲಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿರುವ ಶಿಲ್ಪಾ ಶ್ರೀನಿವಾಸ್​ ಕೂಡ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ನಿರ್ಮಾಪಕರಾಗಿ, ವಿತರಕರಾಗಿ ಅನುಭವ ಹೊಂದಿರುವ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಹಾಲಿ ಅಧ್ಯಕ್ಷ ಭಾ.ಮಾ. ಹರೀಶ್​ ಅವರು ಶಿಲ್ಪಾ ಶ್ರೀನಿವಾಸ್​ (​Shilpa Srinivas) ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಚಂದನವನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ ಮಾತೃ ಸಂಸ್ಥೆ. ಚಿತ್ರರಂಗಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳು ಇಲ್ಲಿ ನಡೆಯುತ್ತವೆ. ಆ ಕಾರಣದಿಂದ ಫಿಲ್ಮ್​ ಚೇಂಬರ್​ ಚುನಾವಣೆ ಬಹಳ ಮುಖ್ಯ ಎನಿಸಿಕೊಳ್ಳುತ್ತದೆ. ಪ್ರತಿ ಬಾರಿ ಚೇಂಬರ್​ ಅಧ್ಯಕ್ಷರಾದವರು ತಮ್ಮದೇ ಆದಂತಹ ಯೋಜನೆಗಳನ್ನು ಇಟ್ಟುಕೊಂಡು ಚಿತ್ರರಂಗದ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಈಗ ಶಿಲ್ಪಾ ಶ್ರೀನಿವಾಸ್​ ಅವರು ಚುನಾವಣೆಗೂ ಮುನ್ನವೇ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿ, ಅದಕ್ಕೆ 10 ಲಕ್ಷ ರೂಪಾಯಿ ಮೀಸಲಿಡುವ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್​ಎಂ​ ಸುರೇಶ್ ನಾಮಪತ್ರ, ಸಾರಾ ಗೋವಿಂದು ಬೆಂಬಲ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಕುಟುಂಬ ಹಾಗೂ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ವಿತರಕ, ನಿರ್ಮಾಪಕ ಶಿಲ್ಪಾ ಶ್ರೀ‌ನಿವಾಸ್ ಅವರು ಆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಟ್ರಸ್ಟ್​​ಗಾಗಿ ಅವರು ಹತ್ತು ಲಕ್ಷ ರೂಪಾಯಿ ಮೀಸಲಿಟ್ಟಿದ್ದಾರೆ. ‘ಕನ್ನಡ ಚಿತ್ರರಂಗಕ್ಕೆ ಈ ಟ್ರಸ್ಟ್ ಬೆಳಕಾಗಲಿ. ಯಾರೇ ಅಧ್ಯಕ್ಷರು ಬಂದರೂ ಕೂಡ ಇದನ್ನು ಮುಂದುವರಿಸಿಕೊಂಡು ಹೋಗಲಿ. ನಾನು ಮಂಡಳಿಯ ಅಧ್ಯಕ್ಷ ಸ್ಥಾನಕ್ಕೇರಿದರೆ ಮೊದಲು ಇದನ್ನು ಜಾರಿಗೆ ತರುತ್ತೇವೆ’ ಎಂದು ಶಿಲ್ಪಾ ಶ್ರೀನಿವಾಸ್​ ಹೇಳಿದ್ದಾರೆ.

ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಗಣೇಶ್ ಕೊಟ್ಟ ಭರವಸೆಗಳಿವು

ಶಿಲ್ಪಾ ಶ್ರೀನಿವಾಸ್ ಅವರು 1976ರಿಂದಲೂ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಸಿನಿಮಾ ನಿರ್ಮಾಣ, ವಿತರಣೆ ಸೇರಿದಂತೆ ಚಿತ್ರರಂಗದ ಹಲವು ವಿಭಾಗಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ‘ಉಪೇಂದ್ರ’, ‘ಪ್ರಜಾಪ್ರಭುತ್ವ’, ‘ಪರ್ವ’, ‘ರೋಮಿಯೊ ಜೂಲಿಯೆಟ್’ ಮುಂತಾದ ಸಿನಿಮಾಗಳನ್ನು ನಿರ್ಮಿಸಿದ್ದಾರೆ. 600ಕ್ಕೂ ಅಧಿಕ ಚಿತ್ರಗಗಳನ್ನು ವಿತರಣೆ ಮಾಡಿದ ಅನುಭವ ಹೊಂದಿದ್ದಾರೆ. ಡಾ. ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್​ಕುಮಾರ್​ ಮುಂತಾದ ಹಿರಿಯ ನಟರ ಜೊತೆ ಕೆಲಸ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ