AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್​ಎಂ​ ಸುರೇಶ್ ನಾಮಪತ್ರ, ಸಾರಾ ಗೋವಿಂದು ಬೆಂಬಲ

film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ನಿರ್ಮಾಪಕ ಎನ್​ಎಂ ಸುರೇಶ್ ಸೇರಿದಂತೆ ಹಲವು ಪ್ರಮುಖರು ವಿವಿಧ ಹುದ್ದೆಗಳಿಗಾಗಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್​ಎಂ​ ಸುರೇಶ್ ನಾಮಪತ್ರ, ಸಾರಾ ಗೋವಿಂದು ಬೆಂಬಲ
ಎನ್ಎಂ ಸುರೇಶ್ ನಾಮಪತ್ರ
ಮಂಜುನಾಥ ಸಿ.
|

Updated on: Sep 09, 2023 | 5:08 PM

Share

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (film chamber of commerce) ಚುನಾವಣೆ ಕಾವೇರಿದೆ. ಸೆಪ್ಟೆಂಬರ್ 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದ್ದು. ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿಯೂ ಪೈಪೋಟಿ ಜೋರಾಗಿದೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಎನ್.ಎಮ್.ಸುರೇಶ್ ತುರುಸಿನ ಪೈಪೋಟಿ ಒಡ್ಡುತ್ತಿದ್ದಾರೆ. ಗೆದ್ದೇ ಗೆಲ್ಲುವ ಭರವಸೆಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೆಳಿಗ್ಗೆ ಫಿಲಂ ಚೇಂಬರ್‌ಗೆ ಆಗಮಿಸಿದ ಎನ್ ಎಮ್ ಸುರೇಶ್, ಡಾ. ರಾಜ್ ಕುಮಾರ್ ಪ್ರತಿಮೆಗೆ ಹಾರ ಹಾಕಿ ನಮಸ್ಕರಿಸಿ ಆ ನಂತರ ನಾಮಪತ್ರ ಸಲ್ಲಿಕೆ ಮಾಡಿದರು. ಸಾರಾ ಗೋವಿಂದ್ ಬಣ ಸೇರಿದಂತೆ ಆನೇಕ ವಿತರಕರು, ನಿರ್ಮಾಪರು ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡಿದ್ದು, ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಹಾಜರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಎನ್ ಎಮ್ ಸುರೇಶ್, ”ಸಾರಾ ಗೋವಿಂದ್ ನನ್ನ ಮೇಲಿನ ಪ್ರೀತಿಗಾಗಿ ಬಂದಿದ್ದಾರೆ. ನನಗೆ ಇವತ್ತು ಈ ಭಾಗ್ಯ ಸಿಕ್ಕಿರುವುದು ನನ್ನ ಪುಣ್ಯ. ಒಳ್ಳೆಯ ಅಭ್ಯರ್ಥಿಗಳನ್ನು ಗೆಲ್ಲಿಸಿ. ಈಗಲೇ ಅದು ಮಾಡುತ್ತೇನೆ ಇದು ಮಾಡ್ತಿನಿ ಅಂತ ಹೇಳಲ್ಲ. ಆದರೆ ದೊಡ್ಡ ಸಮಸ್ಯೆಗಳಿವೆ ಅವುಗಳನ್ನು ಸರಿಪಡಿಸುವ ಕೆಲಸ ಖಂಡಿತ ಮಾಡುತ್ತೇನೆ. ಅವಕಾಶ ಕೋಡಿ” ಎಂದು ಮನವಿ ಮಾಡಿದರು.

ಸಾರಾ ಗೋವಿಂದ್ ಮಾತನಾಡಿ, ‘ಬಹಳ ದಿನ ಆದ ಬಳಿಕ ಎಲ್ಲರನ್ನೂ ಭೇಟಿ ಆಗುತ್ತಿದ್ದೀನಿ. ಈ ಬಾರಿಯ ಚುನಾವಣೆ ಪ್ರಾಮುಖ್ಯತೆ ಪಡೆದು ಕೊಂಡಿದೆ. ಬಹಳ ಪೈಪೋಟಿಯಲ್ಲಿ ಚುನಾವಣೆ ನಡೆಯುತ್ತಿರುವುದು ನೋಡಲು ಖುಷಿ ಆಗುತ್ತಿದೆ. ಎನ್ ಎಮ್ ಕುಮಾರ್ ಎಲ್ಲರ ಪ್ರೀತಿ, ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದಾರೆ. ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡುತ್ತಿದ್ದೀನಿ. ಅಭ್ಯರ್ಥಿಗಳ ಯೋಗ್ಯತೆ ನೋಡಿಕೊಂಡು ಗೆಲ್ಲಿಸಿ’ ಎಂದು ಹೇಳಿದರು.

ಇದನ್ನೂ ಓದಿ:ಫಿಲ್ಮ್​ ಚೇಂಬರ್​ ನೂತನ ಅಧ್ಯಕ್ಷ ಭಾಮಾ ಹರೀಶ್​ಗೆ ಪೊರಕೆ, ಫಿನಾಯಿಲ್​ ಗಿಫ್ಟ್​​! ಕಾರಣವೇನು?

2003ರಲ್ಲಿ ರಿಲೀಸ್ ಆದ ಹಿಟ್ ‘ಎಕ್ಸ್‌ಕ್ಯೂಸ್‌ಮೀ’ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡ ಎನ್ ಎಮ್ ಸುರೇಶ್ ಬಳಿಕ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕಳೆದ ಬಾರಿ ಫಿಲ್ಮ್ ಚೇಂಬರ್ ಕಾರ್ಯದರ್ಶಿ ಆಗಿದ್ದ ಸುರೇಶ್ ಇದೀಗ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಅಂದಹಾಗೆ ಈ ಬಾರೆಯ ಚುನಾವಣೆ ವಿಳಂಬವಾಗಿದೆ. ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲೆ ಚುನಾವಣೆ ನಡೆದು ಫಲಿತಾಂಶ ಕೂಡ ಹೊರಬೀಳಬೇಕಿತ್ತು. ಆದರೆ ಈ ಬಾರಿ ಸೆಪ್ಟಂಬರ್‌ನಲ್ಲಿ ನಡೆಯುತ್ತಿದೆ. ಇನ್ನು ಕಳೆದ ಬಾರಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಭಾ.ಮ. ಹರೀಶ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅಧಿಕಾರದ ಅವಧಿ 2023ರ ಮೇ 28ಕ್ಕೆ ಅಂತ್ಯವಾಗಿದೆ. ಹಾಗಿದ್ದರೂ ಕೂಡ ಚುನಾವಣೆ ನಡೆಸಿರಲಿಲ್ಲ. ಎ ಗಣೇಶ್, ಪ್ರಿಯಾ ಹಾಸನ್ ಇನ್ನೂ ಹಲವರು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ