ಫಿಲಂ ಚೇಂಬರ್ ಚುನಾವಣೆ: ಮತ್ತೆ ಸಾರಾ ಗೋವಿಂದು ಬಳಗಕ್ಕೆ ಜಯ

karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಇಂದು ನಡೆದಿದ್ದು, ಇಂದೇ ಫಲಿತಾಂಶವೂ ಪ್ರಕಟವಾಗಿದೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿಡಲಾಗಿದ್ದು, ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಮತ್ತು ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದ‌ರ್ ರಾಜು ಆರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಫಲಿತಾಂಶ ಇದೀಗ ಪ್ರಕಟವಾಗಿದೆ.

ಫಿಲಂ ಚೇಂಬರ್ ಚುನಾವಣೆ: ಮತ್ತೆ ಸಾರಾ ಗೋವಿಂದು ಬಳಗಕ್ಕೆ ಜಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Follow us
ಮಂಜುನಾಥ ಸಿ.
|

Updated on: Dec 14, 2024 | 11:21 PM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಇಂದು (ಡಿಸೆಂಬರ್ 14) ನಡೆದಿದೆ. ಇದೇ ದಿನ ಫಲಿತಾಂಶವೂ ಪ್ರಕಟವಾಗಿದ್ದು, ಮತ್ತೊಮ್ಮೆ ಸಾರಾ ಗೋವಿಂದು ಬಳಕ್ಕೆ ಚುನಾವಣೆಯಲ್ಲಿ ಜಯ ದೊರಕಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ. ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿ ಕೆವಿ ವೆಂಕಟೇಶ್ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸಾರಾ ಗೋವಿಂದು ಬಳಗದವರಾಗಿದ್ದು, ಮತ್ತೊಮ್ಮೆ ಇದೇ ಬಳಗಕ್ಕೆ ವಾಣಿಜ್ಯ ಮಂಡಳಿಯ ಚುಕ್ಕಾಣಿ ದೊರೆತಿದೆ.

ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ. ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಮುಖವಾಗಿ ಸಾರಾ ಗೋವಿಂದು ಬಣ ಮತ್ತು ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು. ಅಂತಿಮವಾಗಿ ಸಾರಾ ಗೋವಿಂದು ಬಣಕ್ಕೆ ಜಯ ದೊರೆತಿದೆ.

ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಎಂ, ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯ ಸಫೈರ್ ವೆಂಕಟೇಶ್, ನಿರ್ಮಾಪಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ ಸಿ ಶ್ರೀನಿವಾಸ್, ವಿತರಕ ವಲಯ ಗೌರವ ಕಾರ್ಯದರ್ಶಿ ಕುಮಾರ್ ಎಂ ಎನ್ (ಕೆಸಿಎನ್ ಕುಮಾರ್), ಪ್ರದರ್ಶಕ ವಲಯ ಉಪಾಧ್ಯಕ್ಷ ಸ್ಥಾನ ರಂಗಪ್ಪ, ಪ್ರದರ್ಶಕ ವಲಯ ಕಾರ್ಯದರ್ಶಿ ಸ್ಥಾನಕ್ಕೆ ಕುಶಾಲ್ ಎಲ್, ಖಚಾಂಚಿ ಸ್ಥಾನಕ್ಕೆ-ಚಿಂಗಾರಿ ಮಹದೇವ್ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್​ನಲ್ಲಿ ಚರ್ಚಿಸಲು ನಿರ್ಧಾರ

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅದರಲ್ಲಿ 24 ಮಂದಿ ಅವಿರೋಧವಾಗಿ ಆಗಿಬಿಟ್ಟಿದ್ದರು. ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,409 ಮತದಾರರಿದ್ದು ಇದರಲ್ಲಿ ಅತಿ ಹೆಚ್ಚು ಮತ ನಿರ್ಮಾಪಕ ವಲಯದಿಂದಲೇ ಇದೆ. ನಿರ್ಮಾಪಕರ ವಲಯದಿಂದ 889 ಮತಗಳಿವೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿಡಲಾಗಿದ್ದು, ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಮತ್ತು ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದ‌ರ್ ರಾಜು ಆರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ವಿಜಯ ನರಸಿಂಹಲು ಎಂ ಅವರಿಗೆ ದೊರೆತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ