AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪ್ರಧಾನ ಕಥಾಹಂದರ ಇರುವ ‘ವಿದಿ’ ಸಿನಿಮಾಗೆ ಜಯಮಾಲಾ ಬೆಂಬಲ

ಆಗಸ್ಟ್ ತಿಂಗಳಲ್ಲಿ ‘ವಿದಿ’ ಸಿನಿಮಾಗೆ ಮುಹೂರ್ತ ನಡೆಯಲಿದೆ. ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಅಂದು ಮಾಹಿತಿ ಸಿಗಲಿದೆ. ಜಗದೀಶ್‌ ಕೊಪ್ಪ ನಿರ್ದೇಶನ ಮಾಡಲಿರುವ ಈ ಸಿನಿಮಾಗೆ ಎಸ್.ವಿ. ಉಮಾಶಂಕರ್ ಅವರು ಬಂಡವಾಳ ಹೂಡುತ್ತಿದ್ದಾರೆ. ಜಯಮಾಲಾ ಅವರು ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಮಹಿಳಾ ಪ್ರಧಾನ ಕಥಾಹಂದರ ಇರುವ ‘ವಿದಿ’ ಸಿನಿಮಾಗೆ ಜಯಮಾಲಾ ಬೆಂಬಲ
Vidhi Movie Team
ಮದನ್​ ಕುಮಾರ್​
|

Updated on: Jul 05, 2026 | 9:03 AM

Share

ಮುಖ್ಯಾಂಶಗಳು

  • ‘ವಿದಿ’ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಹಿರಿಯ ನಟಿ ಜಯಮಾಲಾ.
  • ಜಯಮಾಲಾ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ.
  • ಮಹಿಳಾ ಪ್ರಧಾನ ಕಥೆ ಇರುವ ಈ ಸಿನಿಮಾಗೆ ಜಗದೀಶ್‌ ಕೊಪ್ಪ ನಿರ್ದೇಶನ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಆಗಿರುವ ನಟಿ ಜಯಮಾಲಾ ಅವರು ‘ವಿದಿ’ (Vidhi) ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇರಲಿದೆ ಎಂದು ಚಿತ್ರತಂಡ ಹೇಳಿದೆ. ಇತ್ತೀಚೆಗೆ ಚಿತ್ರತಂಡದವರು ಜಯಮಾಲಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಜಯಮಾಲಾ (Jayamala) ಅವರು ಚಿತ್ರತಂಡಕ್ಕೆ ಶುಭ ಕೋರಿದರು.

‘ವಿದಿ’ ಸಿನಿಮಾದ ಪೋಸ್ಟರ್‌ ಅನಾವರಣ ಮಾಡಿದ ಬಳಿಕ ಜಯಮಾಲಾ ಅವರು ಮಾತನಾಡಿದರು. ಮಹಿಳಾಪ್ರಧಾನ ಕಥೆ ಇರುವ ಸಿನಿಮಾ ಎಂಬುದನ್ನು ತಿಳಿದು ಅವರು ಸಂತಸ ವ್ಯಕ್ತಪಡಿಸಿದರು. ಈ ರೀತಿಯ ಸಿನಿಮಾಗಳ ಅವಶ್ಯಕತೆ ಹೆಚ್ಚಿದೆ ಎಂದು ಅವರು ಅಭಿಪ್ರಾಯಪಟ್ಟರು. ತಾವು ಕೂಡ ಇಂಥ ಸಿನಿಮಾಗಳನ್ನು ನೋಡಲು ಆಸಕ್ತಿ ಹೊಂದಿರುವುದಾಗಿ ಅವರು ತಿಳಿಸಿದರು.

‘ಈ ಚಿತ್ರದಲ್ಲಿ ಹೆಣ್ಣುಮಗಳ ಕಥೆ ಇರುತ್ತದೆಂದು ಚಿತ್ರತಂಡದವರು ಹೇಳಿದ್ದಾರೆ. ದೀಪವು ನಿನ್ನದೆ ಗಾಳಿಯೂ ನಿನ್ನದೆ. ಆರದಿರಲಿ ಬೆಳಕು ಎಂಬ ಮನಮುಟ್ಟುವಂತಹ ಪದಗಳು ಕುತೂಹಲ ಮೂಡಿಸುತ್ತದೆ. ಇಂತಹ ಚಿತ್ರಗಳು ಮಹಿಳೆಯರಿಗೆ ಧೈರ್ಯ ತುಂಬುವಂತಿರಬೇಕು. ನಾನು ಕೂಡ ಚಿತ್ರ ನೋಡಲು ಉತ್ಸುಕಳಾಗಿದ್ದೇನೆ’ ಎಂದು ಜಯಮಾಲಾ ಅವರು ಹೇಳಿದರು.

ಜಯಮಾಲಾ ಅವರನ್ನು ‘ವಿದಿ’ ಚಿತ್ರತಂಡ ಭೇಟಿಯಾದಾಗ ಹಿರಿಯ ಕಲಾವಿದರಾದ ಸುಂದರ್ ರಾಜ್, ಕರಿಸುಬ್ಬು, ಜಯಸಿಂಹ ಮುಸೂರಿ ಮುಂತಾದವರು ಉಪಸ್ಥಿತರಿದ್ದರು. ‘ವಿ.ಆರ್.ಎಸ್. ಪ್ರೊಡಕ್ಷನ್’ ಮೂಲಕ ಉದ್ಯಮಿ ಮತ್ತು ಸಮಾಜ ಸೇವಕರಾಗಿರುವ ಎಸ್.ವಿ. ಉಮಾಶಂಕರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ.

ಇದನ್ನೂ ಓದಿ: 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ನಾಗತ್ತಿಹಳ್ಳಿ ಚಂದ್ರಶೇಖರ್ ಹಾಗೂ ಪಿ. ಶೇಷಾದ್ರಿ ಅವರ ಶಿಷ್ಯನೆಂದು ಗುರುತಿಸಿಕೊಂಡ ಜಗದೀಶ್‌ ಕೊಪ್ಪ ಅವರು ‘ವಿದಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೂರನೇ ಸಿನಿಮಾ. ನಿರ್ದೇಶನದ ಜೊತೆ ಚಿತ್ರಕಥೆ ಬರೆದು, ನಿರ್ಮಾಣದಲ್ಲಿಯೂ ಅವರ ಕೈ ಜೋಡಿಸಿದ್ದಾರೆ. ಪಾತ್ರವರ್ಗ ಮತ್ತು ತಂತ್ರಜ್ಞರ ವಿವರಗಳನ್ನು ಸದ್ಯದಲ್ಲೇ ತಿಳಿಸುವುದಾಗಿ ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ