ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ

ಮುಸ್ಲಿಂ ಮಹಿಳೆಯರ ಕುರಿತ ಕತೆಯನ್ನು ಒಳಗೊಂಡಿರುವ ‘ಹಮಾರೆ ಬಾರಾ’ ಸಿನಿಮಾದ ಬಿಡುಗಡೆಯನ್ನು ಕರ್ನಾಟಕ ರಾಜ್ಯ ಸರ್ಕಾರ ನಿಷೇಧಿಸಿದೆ. ಸಿನಿಮಾದ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸಹ ತಾತ್ಕಾಲಿಕ ತಡೆ ನೀಡಿದೆ.

ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ
Follow us
ಮಂಜುನಾಥ ಸಿ.
|

Updated on:Jun 07, 2024 | 10:27 AM

ಮುಸ್ಲಿಂ (Muslim) ಮಹಿಳೆಯರ ಕುರಿತಾದ ಸಿನಿಮಾ ‘ಹಮಾರೆ ಬಾರಾ’ (Hamare Baarah)  ಬಿಡುಗಡೆಗೆ ಕರ್ನಾಟಕ ಸರ್ಕಾರ ನಿಷೇಧ ವಿಧಿಸಿದೆ. ಕಮಲ್ ಚಂದ್ರಾ ನಿರ್ದೇಶನ ಮಾಡಿ ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಾ’ ಸಿನಿಮಾವು ಮುಸ್ಲಿಂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಬಿಡುಗಡೆಗೆ ಈಗಾಗಲೇ ಬಾಂಬೆ ಹೈಕೋರ್ಟ್ ತಡೆ ನೀಡಿದೆ ಅಷ್ಟರಲ್ಲಾಗಲೆ ಕರ್ನಾಟಕ ಸರ್ಕಾರ ಸಿನಿಮಾದ ಬಿಡುಗಡೆ ಮತ್ತು ಸ್ಕ್ರೀಮ್ ಮೇಲೆ ನಿಷೇಧ ಹೇರಿದೆ.

ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ 1964, ಸೆಕ್ಷನ್ 15 (1) ಮತ್ತು 15(5) ರ ಅನ್ವಯ ಈ ಸಿನಿಮಾದ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಸಿನಿಮಾದ ಪ್ರದರ್ಶನದಿಂದ ರಾಜ್ಯದಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ಆಗುತ್ತದೆ ಎಂಬ ಕಾರಣ ನೀಡಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆಲವು ಅಲ್ಪಸಂಖ್ಯಾತ ಸಂಘಗಳು ಸಿನಿಮಾವನ್ನು ಬಿಡುಗಡೆ ಮಾಡದಿರಲು ಮನವಿ ಮಾಡಿವೆ ಎಂದು ಸಹ ಹೇಳಲಾಗಿದೆ.

ಸಿನಿಮಾದ ಟ್ರೈಕರ್​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಟ್ರೈಲರ್ ಆಧರಿಸಿ ಅಜರ್ ಎಂಬುವರು ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಜೂನ್ 14 ರವರೆಗೆ ಬಿಡುಗಡೆ ನಿಷೇಧಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ. ಸಿನಿಮಾದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಋಣಾತ್ಮಕ ಸಂಭಾಷಣೆಗಳಿವೆ, ಇಸ್ಲಾಂ ಧರ್ಮವನ್ನು ಕೆಟ್ಟ ರೀತಿಯಾಗಿ ಬಿಂಬಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ. ಸಿಬಿಎಫ್​ಸಿ ಈಗಾಗಲೇ ಕೆಲವು ಸಂಭಾಷಣೆಗಳಿಗೆ ಕಟ್​ಗಳನ್ನು ಸೂಚಿಸಿ ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದ್ದು, ಬಿಡುಗಡೆಗೆ ತಕಾರರು ಸಲ್ಲಿಸಿಲ್ಲ. ನ್ಯಾಯಾಲಯದಲ್ಲಿಯೂ ಸಹ ಈ ಬಗ್ಗೆ ಸಿಬಿಎಫ್​ಸಿ ಹೇಳಿಕೆ ದಾಖಲಿಸಿದೆ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬಿಡುಗಡೆಗೆ ತಡೆ

ಇನ್ನು ಸಿನಿಮಾ ತಂಡವು ತಮ್ಮ ಸಿನಿಮಾದಲ್ಲಿ ಯಾವುದೇ ಧರ್ಮವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಿಲ್ಲ ಎನ್ನುತ್ತಿದೆ. ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಅನ್ನು ಕಪೂರ್ , ‘ದಯವಿಟ್ಟು ಸಿನಿಮಾವನ್ನು ಒಮ್ಮೆ ನೋಡಿ ಆ ನಂತರ ನಿಮ್ಮ ಅಭಿಪ್ರಾಯ ರೂಪಿಸಿಕೊಳ್ಳಿ. ಇದು ಎಲ್ಲರೂ ನೋಡಬೇಕಾದ ಸಿನಿಮಾ’ ಎಂದಿದ್ದಾರೆ. ಅಲ್ಲದೆ ಈ ಸಿನಿಮಾ ಮಾಡಿದ ಚಿತ್ರತಂಡಕ್ಕೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಚಿತ್ರತಂಡ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ರಾಜ್ಯ ಸರ್ಕಾರಗಳು ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಕೆಲವು ಸಿನಿಮಾಗಳನ್ನು ಬ್ಯಾನ್ ಮಾಡಿವೆ, ಕೆಲವಕ್ಕೆ ತೆರಿಗೆ ವಿನಾಯಿತಿ ನೀಡಿವೆ. ಆದರೆ ರಾಜ್ಯ ಸರ್ಕಾರ ನಿಷೇಧವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಸಿನಿಮಾ ತಂಡಗಳಿಗೆ ಜಯ ದೊರೆತಿದೆ. ಒಂದೊಮ್ಮೆ ಕರ್ನಾಟಕ ರಾಜ್ಯ ಸರ್ಕಾರದ ನಿಷೇಧದ ವಿರುದ್ಧ ಚಿತ್ರತಂಡ ನ್ಯಾಯಾಲಯಕ್ಕೆ ಹೋದರೆ ಗೆಲುವು ಸಿಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Fri, 7 June 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್