ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ.

ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 31, 2022 | 6:04 PM

ಕೊವಿಡ್ (Covid 19) ಕಾಣಿಸಿಕೊಂಡಾಗಿನಿಂದಲೂ ಸಾಕಷ್ಟು ತೊಂದರೆಗೆ ಸಿಲುಕಿರುವ ಚಿತ್ರರಂಗಕ್ಕೆ ಇತ್ತೀಚೆಗೆ ಸರ್ಕಾರದ ಹೊಸ ನಿಯಮದಿಂದ ನಿರಾಸೆ ಆಗಿತ್ತು. ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಮುಂದುವರಿಸಲು ಸರ್ಕಾರ ಆದೇಶಿಸಿತ್ತು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ (100 Percent Occupency) ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಳ (Basavaraj Bommai) ಜತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಭೆ ನಡೆಸಿದ್ದಾರೆ. ಈ ವೇಳೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. 

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ವಿಚಾರಕ್ಕೆ ಸಂಬಂಧಿಸಿ 4-5 ದಿನಗಳಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಪೂರ್ಣ ಮಾಹಿತಿ ನೀಡುವಂತೆ ಸಿಎಂ ಕೇಳಿದರು. ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಜೈರಾಜ್ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಫಿಲ್ಮ್ ಚೇಂಬರ್​ ಆಕ್ರೋಶ ಹೊರಹಾಕಿತ್ತು. ‘ಚಿತ್ರೋದ್ಯಮದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬೇರೆ ಎಲ್ಲಾ ಉದ್ಯಮಗಳಿಗೂ ಸರ್ಕಾರ ಅವಕಾಶ ನೀಡಿದೆ.  ಚಿತ್ರೋದ್ಯಮಕ್ಕೆ ಯಾಕೆ ಸಂಪೂರ್ಣ ಅವಕಾಶ ನೀಡುತ್ತಿಲ್ಲ? ಈಗಾಗಲೇ ನಿರ್ಮಾಪಕರು, ಕಲಾವಿದರು ಬೀದಿಗೆ ಬಂದಿದ್ದಾರೆ. ಥಿಯೇಟರ್​ಗಳಿಗೆ ಶೇ.100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ನೀಡಲಿ’ ಎಂದು ಫಿಲ್ಮ್ ಚೇಂಬರ್ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿಕೆ ನೀಡಿದ್ದರು.

‘ಎಲ್ಲ ಕ್ಷೇತ್ರಗಳಿಗೂ 50:50 ನಿಯಮದಿಂದ ವಿನಾಯಿತಿ ಸಿಕ್ಕಿದೆ. ಆದರೆ, ಚಿತ್ರಮಂದಿರಗಳಿಗೆ ಮಾತ್ರ ಏಕೆ ರಿಲ್ಯಾಕ್ಸ್ ಕೊಟ್ಟಿಲ್ಲ ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ. ಅವರು ಯಾವಾಗಲೂ ಇಂಡಸ್ಟ್ರಿ ಪರವಾಗಿದ್ದಾರೆ’ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರಮಂದಿರದ ಮೇಲೆ ಹೇರಿರುವ ನಿರ್ಬಂಧ ತೆಗೆಯಬೇಕು ಎಂಬುದು ಚಿತ್ರರಂಗದವರ ಒತ್ತಾಯ. ಒಂದೊಮ್ಮೆ ಥಿಯೇಟರ್​ಗಳಲ್ಲಿ ಹೌಸ್​ಫುಲ್​ಗೆ ಅವಕಾಶ ನೀಡಿದರೆ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್​ ಆಗಲಿವೆ. ಇದರಿಂದ ಚಿತ್ರರಂಗಕ್ಕೆ ಮೊದಲಿನ ಕಳೆ ಬರಲಿದೆ.

ಇದನ್ನೂ ಓದಿ: ಲಸಿಕೆ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಸುಪ್ರೀಂಗೆ ತಿಳಿಸಿದ ಕೇಂದ್ರ; ಗೊಂದಲದಲ್ಲಿವೆ ಚಿತ್ರಮಂದಿರಗಳು

ಎಲ್ಲ ಕ್ಷೇತ್ರಗಳಿಗೂ ವಿನಾಯಿತಿ ಆದರೆ, ಚಿತ್ರಮಂದಿರಗಳಿಗೆ ಯಾಕಿಲ್ಲ; ನಟ ಶಿವರಾಜ್ ಕುಮಾರ್ ಹೇಳಿದ್ದೇನು..?

Published On - 6:01 pm, Mon, 31 January 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ