The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ತೆರಳುವುದಿಲ್ಲ ಎಂದ ಸಿದ್ದರಾಮಯ್ಯ; ಕಾರಣವೇನು?

| Updated By: shivaprasad.hs

Updated on: Mar 14, 2022 | 7:38 PM

Siddaramaiah: ನಾಳೆ (ಮಂಗಳವಾರ) ರಾಜ್ಯದಲ್ಲಿ ಸಚಿವರು ಹಾಗೂ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗೆ ವಿಧಾನಸಭೆ ಸಚಿವಾಲಯದಿಂದ ವ್ಯವಸ್ಥೆ ಮಾಡಲಾಗಿದೆ. ಚಿತ್ರ ವೀಕ್ಷಣೆಗೆ ತೆರಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ತಿಳಿಸಿದ್ದಾರೆ.

The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ತೆರಳುವುದಿಲ್ಲ ಎಂದ ಸಿದ್ದರಾಮಯ್ಯ; ಕಾರಣವೇನು?
ಪ್ರಾತಿನಿಧಿಕ ಚಿತ್ರ
Follow us on

‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸದ್ಯ ದೇಶದಲ್ಲೆಡೆ ಸಂಚಲನ ಸೃಷ್ಟಿಸಿದೆ. ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ನಿನ್ನೆ(ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ವೀಕ್ಷಿಸಿದ್ದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಚಿತ್ರ ತೆರಿಗೆ ರಹಿತವಾಗಿದೆ ಎಂದು ಘೋಷಿಸಿದ್ದರು. ಇಂದು (ಸೋಮವಾರ) ಸದನದಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರು, ಶಾಸಕರಿಗೆ ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿರುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾಗೇರಿ ವಿಶೇಷ ಘೋಷಣೆ ಮಾಡಿದ್ದು, ಮಂಗಳವಾರ (ಮಾ.15) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಲಿದ್ದಾರೆ. ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ವಿಷಯವನ್ನು ಆಧರಿಸಿ ತಯಾರಾಗಿರುವ ಈ ಸಿನಿಮಾವನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ವೀಕ್ಷಿಸಿದ್ದಾರೆ. ಚಿತ್ರ ವೀಕ್ಷಣೆಯ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಚಿತ್ರ ವೀಕ್ಷಣೆಗೆ ತೆರಳುವುದಿಲ್ಲ ಎಂದಿದ್ದಾರೆ.

‘ದಿ ಕಾಶ್ಮೀರಿ ಫೈಲ್ಸ್’​ ಸಿನಿಮಾ ವೀಕ್ಷಿಸುವುದಿಲ್ಲ ಎಂದಿರುವ ಸಿದ್ದರಾಮಯ್ಯ, ‘‘ಸ್ಪೀಕರ್ ಕಾಗೇರಿ ಕರೆದಿದ್ದಾರೆ. ಹೋಗುವವರು ಹೋಗಲಿ’’ ಎಂದಿದ್ದಾರೆ. ತಾವು ಹೋಗದೇ ಇರುವುದಕ್ಕೆ ಕಾರಣ ತಿಳಿಸಿದ ಅವರು, ‘‘ನಾನು ಸಿನಿಮಾ ನೋಡೋದು ಕಡಿಮೆ; ಹಾಗಾಗಿ ಹೋಗುವುದಿಲ್ಲ’’ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಣೆಗೆ ಶಾಸಕ ಯತ್ನಾಳ್ ಉಚಿತ ವ್ಯವಸ್ಥೆ:

ದಿ ಕಾಶ್ಮೀರ ಫೈಲ್ಸ್ ಚಲನಚಿತ್ರ ಉಚಿತ ವೀಕ್ಷಣೆಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್​​ ವ್ಯವಸ್ಥೆ ಮಾಡಿದ್ದಾರೆ. ಮಾ.21ರಂದು ಜಿಲ್ಲೆಯಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಬಿಡುಗಡೆ ಮಾಡಲಾಗುತ್ತಿದ್ದು, ಅಪ್ಸರಾ ಚಿತ್ರಮಂದಿರದಲ್ಲಿ ಉಚಿತ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಸತತ ಒಂದು ವಾರಗಳ ಕಾಲ‌ ಪ್ರತಿನಿತ್ಯ ಮಧ್ಯಾಹ್ನದ ಶೋವನ್ನು ಉಚಿತವಾಗಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.ಈ‌ ಹಿಂದೆ ದೇಶಪ್ರೇಮದ ಕತೆ ಹೊಂದಿದ್ದ ‘ಬೇಬಿ’, ‘ಉರಿ’ ಹಾಗೂ ‘ತಾನಾಜಿ’ ಚಿತ್ರಗಳನ್ನು ಇದೇ ರೀತಿ ಉಚಿತ ವೀಕ್ಷಣೆಗೆ ಶಾಸಕ ಯತ್ನಾಳ್ ವ್ಯವಸ್ಥೆ ಮಾಡಿದ್ದರು.

ಚಿತ್ರ ವೀಕ್ಷಿಸುವುದಾಗಿ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ:

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ:
ಸಿನಿಮಾ ತಂಡ ಶನಿವಾರ (ಮಾ.12) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಆ ವೇಳೆ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಮಾತುಗಳು ಕೇಳಿಬಂದವು. ಇದರ ಬಗ್ಗೆ ಚಿತ್ರತಂಡದವರು ಸೋಶಿಯಲ್​ ಮೀಡಿಯಾದಲ್ಲಿ ಸಂಸತ ಹಂಚಿಕೊಂಡಿದ್ದರು. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕೌತುಕ ಹೆಚ್ಚಿತು. ಸದ್ಯ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದ್ದು, ಹಲವು ರಾಜ್ಯಗಳು ತೆರಿಗೆ ವಿನಾಯಿತಿ ಘೋಷಿಸಿವೆ.

ಮಧ್ಯಪ್ರದೇಶದಲ್ಲಿ ಪೊಲೀಸರಿಗೆ ಚಿತ್ರ ವೀಕ್ಷಿಸಲು ರಜೆ ಘೋಷಣೆ:

ಮಧ್ಯಪ್ರದೇಶ ರಾಜ್ಯದಲ್ಲಿ ಈಗಾಗಲೇ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದೀಗ ಅಲ್ಲಿನ ಪೊಲೀಸರಿಗೆ ಚಿತ್ರ ವೀಕ್ಷಿಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ, ಪೊಲೀಸರಿಗೆ ರಜೆ ನೀಡುವ ನಿರ್ಧಾರವನ್ನು ಗೃಹ ಸಚಿವ ನರೋತ್ತಮ್ ಮಿಶ್ರಾ ಘೋಷಿಸಿದ್ದಾರೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಐಎಂಡಿಬಿ ರೇಟಿಂಗ್​ನಲ್ಲಿ ಧಿಡೀರ್ ಕುಸಿತ; ವಿವೇಕ್ ಅಗ್ನಿಹೋತ್ರಿ ಅಸಮಾಧಾನ

Published On - 7:28 pm, Mon, 14 March 22