AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ ತಿಂಗಳಲ್ಲಿ ಪರಭಾಷೆ ಸಿನಿಮಾ ಪ್ರದರ್ಶಿಸಿದರೆ ಹುಷಾರ್: ಕರವೇ ಎಚ್ಚರಿಕೆ

ನವೆಂಬರ್ ತಿಂಗಳು ಪೂರ್ತಿ ಇಡೀ ರಾಜ್ಯದಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನು ಮಾತ್ರವೇ ಪ್ರದರ್ಶನ ಮಾಡಬೇಕು ಎಂದು ಕರವೇ ಆಗ್ರಹಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆದೇಶವನ್ನು ಹೊರಡಿಸಬೇಕು ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಬೇರೆ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದೇ ಆದಲ್ಲಿ ಮುಂದೆ ಆಗುವ ‘ಅನಾಹುತ’ಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ ತಿಂಗಳಲ್ಲಿ ಪರಭಾಷೆ ಸಿನಿಮಾ ಪ್ರದರ್ಶಿಸಿದರೆ ಹುಷಾರ್: ಕರವೇ ಎಚ್ಚರಿಕೆ
Praveen Shetty Karave
ಮಂಜುನಾಥ ಸಿ.
|

Updated on:Oct 28, 2026 | 10:33 AM

Share

ಮುಖ್ಯಾಂಶಗಳು

  • ನವೆಂಬರ್​​ನಲ್ಲಿ ಅನ್ಯಭಾಷೆ ಸಿನಿಮಾ ಪ್ರದರ್ಶನಕ್ಕೆ ವಿರೋಧ
  • ನವೆಂಬರ್ ತಿಂಗಳ ಪೂರ್ತಿ ಕನ್ನಡ ಸಿನಿಮಾ ಬಿಡುಗಡೆಗೆ ಆಗ್ರಹ
  • ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ

ನವೆಂಬರ್ ತಿಂಗಳು ಪೂರ್ತಿ ಇಡೀ ರಾಜ್ಯದಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನು ಮಾತ್ರವೇ ಪ್ರದರ್ಶನ ಮಾಡಬೇಕು ಎಂದು ಕರವೇ ಆಗ್ರಹಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆದೇಶವನ್ನು ಹೊರಡಿಸಬೇಕು ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಬೇರೆ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದೇ ಆದಲ್ಲಿ ಮುಂದೆ ಆಗುವ ‘ಅನಾಹುತ’ಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರವೀಣ್ ಶೆಟ್ಟಿ, ‘ರಾಜ್ಯೋತ್ಸವ ಬರತ್ತಿದ್ದು, ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಎಲ್ಲ ಚಿತ್ರಮಂದಿರಗಳಲ್ಲಿಯೂ ತಿಂಗಳ ಪೂರ್ತಿ ಕೇವಲ ಕನ್ನಡ ಸಿನಿಮಾಗಳನ್ನು ಮಾತ್ರವೇ ಬಿಡುಗಡೆ ಮಾಡಬೇಕು’ ಎಂದಿದ್ದಾರೆ. ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ನವೆಂಬರ್ 1 ರಂದು ಸಹ ಅನ್ಯ ಭಾಷೆಗಳ ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತದೆ. ಆ ಮೂಲಕ ರಾಜ್ಯೋತ್ಸವಕ್ಕೆ ಮತ್ತು ಕನ್ನಡಕ್ಕೆ ಅಗೌರವ ತೋರುವ ಕಾರ್ಯ ಮಾಡುತ್ತಾರೆ. ಇದನ್ನು ಸಹಿಸುವುದಿಲ್ಲ, ಅಂಥಹಾ ಚಿತ್ರಮಂದಿರಗಳಿಗೆ ನಾವು ಎಚ್ಚರಿಕೆ ಕೊಡುತ್ತಿದ್ದೇವೆ’ ಎಂದು ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

ಈ ಕುರಿತಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಜ್ಯ ಸರ್ಕಾರ ಶೀಘ್ರವೇ ನಿರ್ಣಯ ಕೈಗೊಳ್ಳಬೇಕು ಎಂದಿದ್ದಾರೆ ಪ್ರವೀಣ್ ಶೆಟ್ಟಿ. ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆಯೂ ಸಹ ನವೆಂಬರ್ ತಿಂಗಳಲ್ಲಿ ಪರಭಾಷೆ ಸಿನಿಮಾಗಳ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ವಾಣಿಜ್ಯ ಮಂಡಳಿ ಈ ಕುರಿತು ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:‘ಪ್ರೇಮದ ಊರಲಿ’ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದ ಛಾವಣಿ ಕುಸಿತ

ಪ್ರಸ್ತುತ ಕರ್ನಾಟಕದಲ್ಲಿ ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರ ಜೊತೆಗೆ ಪರಭಾಷೆ ಸಿನಿಮಾಗಳಾದ ‘ಜೈಲರ್ 2’ ಸಿನಿಮಾ ಸಹ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಇದೇ ಅಕ್ಟೋಬರ್ 30ರಂದು ತೆಲುಗಿನ ‘ಆದರ್ಶ ಕುಟುಂಬಂ 47’ ಸಿನಿಮಾ ಸಹ ರಿಲೀಸ್ ಆಗಲಿದೆ. ಇವುಗಳ ಹೊರತಾಗಿ ‘ರಣಬಾಲಿ’, ‘ಡೋರ್ತಿ’, ‘ಬತ್ತ’, ‘ಹೈಕು’ ಇನ್ನೂ ಕೆಲ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:30 am, Wed, 28 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More