
ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ವಾರದ ಬಳಿಕ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ನೆಚ್ಚಿನ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ!
ಜನಪ್ರಿಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದ 12ನೇ ಸೀಸನ್ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಫೋಟೋವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಗ್-ಬಿ ಹಂಚಿಕೊಂಡಿರುವ ಫೋಟೋದಲ್ಲಿ, ಎಲ್ಲಾ ಕೆಲಸಗಾರರು ಹಾಗೂ ತಂತ್ರಜ್ಞರು PPE ಕಿಟ್ ಹಾಗೂ ಮಾಸ್ಕ್ ಧರಿಸಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ.
Published On - 1:19 pm, Mon, 24 August 20