ಎರಡೇ ವಾರಗಳಲ್ಲಿ ಕೊವಿಡ್​ನಿಂದ ಮಗ ಮತ್ತು ಗಂಡನನ್ನು ಕಳೆದುಕೊಂಡ ಕನ್ನಡದ ಹಿರಿಯ ನಟಿ

ಕವಿತಾ ಅವರ ಮಗ ಸಂಜಯ್​ ರೂಪ್ ಎರಡು ವಾರಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ಕವಿತಾ ಪತಿಗೂ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ಎರಡೇ ವಾರಗಳಲ್ಲಿ ಕೊವಿಡ್​ನಿಂದ ಮಗ ಮತ್ತು ಗಂಡನನ್ನು ಕಳೆದುಕೊಂಡ ಕನ್ನಡದ ಹಿರಿಯ ನಟಿ
ಕವಿತಾ ಹಾಗೂ ವರ ಪತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 5:26 PM

ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರ ಮಗ ಕೊವಿಡ್​ನಿಂದ ಇತ್ತೀಚೆಗೆ ಮೃತಪಟ್ಟಿದ್ದರು. ಇದೇ ವೇಳೆ ಕೊವಿಡ್​ನಿಂದ ಅವರ ಪತಿಯೂ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಕವಿತಾ ಅವರ ಪತಿ ದಶರಥರಾಜ ಕೂಡ ಕೊವಿಡ್​ಗೆ ಬಲಿಯಾಗಿದ್ದಾರೆ. ಕೇವಲ 15 ದಿನಗಳ ಅವಧಿಯಲ್ಲಿ ಕವಿತಾ ಪತಿ ಹಾಗೂ ಮಗನನ್ನು ಕಳೆದುಕೊಂಡಿದ್ದಾರೆ.

ಕವಿತಾ ಅವರ ಮಗ ಸಂಜಯ್​ ರೂಪ್ ಎರಡು ವಾರಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ಕವಿತಾ ಪತಿಗೂ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕವಿತಾ 11ನೇ ವಯಸ್ಸಿಗೆ ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಅವರು ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದರು. 1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲು’ ಸಿನಿಮಾ ಮೂಲಕ ಕವಿತಾ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದಾದ ನಂತರ ‘ಖಿಲಾಡಿ ಕಿಟ್ಟು’ ಸೇರಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದರು. 2009ರಲ್ಲಿ ತೆರೆಕಂಡ ‘ಉಲ್ಲಾಸ ಉತ್ಸಾಹ’ ಅವರ ಕನ್ನಡದ ಕೊನೆಯ ಚಿತ್ರ. ಸದ್ಯ, ಕವಿತಾ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಕೊವಿಡ್​ನಿಂದ ಹಿಂದಿ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರರಂಗದ ಸಾಕಷ್ಟು ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ಮೃತಪಟ್ಟಿದ್ದಾರೆ. ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆಯೂ ಕಡಿಮೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಮೂರು ಬಾರಿ ನ್ಯಾಷನಲ್ ಫಿಲ್ಮ್​ ಅವಾರ್ಡ್​ಗೆ ಭಾಜನರಾದ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..

ಕನ್ನಡದ ಹಿರಿಯ ನಟಿಯ ಮಗ ಕೊವಿಡ್​ನಿಂದ ನಿಧನ; ಪತಿ ಆರೋಗ್ಯ ಸ್ಥಿತಿ ಗಂಭೀರ

Published On - 5:03 pm, Wed, 30 June 21

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ