AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

Kavitha Lankesh: ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ ಲಂಕೇಶ್ ಅವರ ಪುತ್ರಿ, ನಿರ್ದೇಶಕಿ ಕವಿತಾ ಲಂಕೇಶ್ ಅವರ ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್
Esha Lankesh
ಮಂಜುನಾಥ ಸಿ.
|

Updated on:Jul 11, 2026 | 9:39 AM

Share

ಮುಖ್ಯಾಂಶಗಳು

  • ಸಾಹಿತಿ ಪಿ ಲಂಕೇಶ್ ಅವರ ಮೊಮ್ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.
  • ನಿರ್ದೇಶಕಿ ಕವಿತಾ ಲಂಕೇಶ್ ಅವರ ಪುತ್ರಿ ಇಶಾ ಲಂಕೇಶ್ ಅವರ ಪುತ್ರಿ ಸಿನಿಮಾಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
  • ಇಶಾ ಅವರ ಮೊದಲ ಸಿನಿಮಾವನ್ನು ಪ್ರೀತಂ ಗುಬ್ಬಿ ನಿರ್ದೇಶನ ಮಾಡಲಿದ್ದಾರೆ.

ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿರುವ ಪಿ ಲಂಕೇಶ್ (P Lankesh) ಅವರು ಚಿತ್ರರಂಗದಲ್ಲಿಯೂ ಕೃಷಿ ಮಾಡಿದ್ದರು. ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ ಲಂಕೇಶ್ ಅವರ ಮೊಮ್ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್ ಅವರ ಪುತ್ರಿ ಇಶಾ ಲಂಕೇಶ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಇಶಾ ಲಂಕೇಶ್ ಅವರು ನಟನಾ ತರಬೇತಿಗಳನ್ನು ಸಹ ಪಡೆದಿದ್ದಾರಂತೆ. ಇದೀಗ ಹೊಸ ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ. ಅವರ ಮೊದಲ ಸಿನಿಮಾವನ್ನು ಖ್ಯಾತ ಕತೆಗಾರ, ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿರುವುದಾಗಿ ಹೇಳಿರುವ ಇಶಾ ಲಂಕೇಶ್, ತಮಗೆ ನಟಿ ಆಗಬೇಕೆಂಬ ಕನಸು ತಮ್ಮ ತಾಯಿಯಿಂದಲೇ ಬಂತು ಎಂದಿದ್ದಾರೆ. ತಾಯಿ ಕವಿತಾ ಲಂಕೇಶ್ ನಿರ್ದೇಶನ ಮಾಡುತ್ತಿದ್ದ ಸಿನಿಮಾಗಳ ಸೆಟ್​​ಗಳಲ್ಲಿ ಓಡಾಡಿ, ಅಲ್ಲಿನ ವಾತಾವರಣ ನೋಡಿ ತಮಗೆ ನಟಿಯಾಗಬೇಕು ಎಂಬ ಆಸೆ ಮೂಡಿತು ಎಂದಿದ್ದಾರೆ. ದೆಹಲಿಯ ಅಶೋಕ ಯೂನಿವರ್ಸಿಟಿಯಲ್ಲಿ ಇಂಗ್ಲೀಷ್ ಲಿಟ್ರೇಚರ್ ಮತ್ತು ಫರ್ಫಾರ್ಮೆನ್ಸ್ ಕಲಿತಿರುವ ಇಶಾ, ಅಲ್ಲಿಯೇ ರಂಗಭೂಮಿಯಲ್ಲೂ ತೊಡಗಿದ್ದರಂತೆ.

ಇದನ್ನೂ ಓದಿ:ಸೆಟ್ಟೇರಿತು ಲೂಸ್ ಮಾದ ಹೊಸ ಸಿನಿಮಾ, ಸಾಥ್ ಕೊಟ್ಟ ಧ್ರುವ ಸರ್ಜಾ

ಬಳಿಕ ಬ್ರಿಟನ್​​ನಲ್ಲಿ ನಟನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಸಹ ಮುಗಿಸಿ ಬಂದಿದ್ದಾರೆ. ಇಲ್ಲಿ, ಪ್ರಕಾಶ್ ರೈ ಅವರ ನಿರ್ದಿಗಂತ ರಂಗಭೂಮಿ ಥಿಯೇಟರ್​​ನಲ್ಲಿ ಕೋರ್ಸ್​​ ಮಾಡಿದ್ದು, ನಾಟಕಗಳಲ್ಲಿ ನಟಿಸಿದ್ದಾರೆ. ಕೆಲವು ಜಾಹೀರಾತುಗಳಿಗೆ, ಸಿನಿಮಾಗಳಿಗೆ ಸಹ ಇಲ್ಲಿ ಆಡಿಷನ್ ನೀಡಿದ್ದರಂತೆ. ಕೊನೆಗೆ ಪ್ರೀತಂ ಗುಬ್ಬಿ ಅವರು ಆಸಕ್ತಿವಹಿಸಿ, ಕತೆಯೊಂದನ್ನು ಹೇಳಿದ್ದು, ಇದೀಗ ಸಿನಿಮಾ ಅನ್ನು ಇಶಾ ಒಪ್ಪಿಕೊಂಡಿದ್ದಾರೆ. ಇದು ಅಡ್ವೇಂಚರಸ್ ಪ್ರೇಮಕತೆ ಎಂದು ಇಶಾ ತಮ್ಮ ಮೊದಲ ಸಿನಿಮಾವನ್ನು ಬಣ್ಣಿಸಿದ್ದಾರೆ.

ಲಂಕೇಶ್ ಅವರು ‘ಪಲ್ಲವಿ’, ‘ಖಂಡವಿದೆಕೊ, ಮಾಂಸವಿದೆಕೊ’, ‘ಎಲ್ಲಿಂದಲೋ ಬಂದವರು’ ಸಿನಿಮಾಗಳನ್ನು ನಿರ್ದೇಶಿಸಿದ್ದರು. ‘ಸಂಸ್ಕಾರ’ ಸಿನಿಮಾನಲ್ಲಿ ನಟನೆಯನ್ನೂ ಮಾಡಿದ್ದರು. ಬಳಿಕ ಅವರ ಪುತ್ರ ಇಂದ್ರಜಿತ್ ಲಂಕೇಶ್, ‘ಮೊನಾಲಿಸಾ’, ‘ತುಂಟಾಟ’, ‘ಐಶ್ವರ್ಯಾ’, ‘ಹುಡುಗ ಹುಡುಗಿ’, ‘ಲಂಕೇಶ್ ಪತ್ರಿಕೆ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇಂದ್ರಜಿತ್ ಅವರ ಪುತ್ರ ಸಮರ್ಜಿತ್ ಅವರು ಇತ್ತೀಚೆಗಷ್ಟೆ ‘ಗೌರಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಲಂಕೇಶ್ ಅವರ ಪುತ್ರಿ ಕವಿತಾ ಲಂಕೇಶ್, ‘ದೇವಿರಿ’, ‘ಅವ್ವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಕವಿತಾ ಅವರ ಪುತ್ರಿ ಇಶಾ, ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಮೊದಲ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಸಿನಿಮಾದ ಇತರೆ ಪಾತ್ರವರ್ಗವನ್ನು ಶೀಘ್ರವೇ ಘೋಷಿಸಲಾಗುತ್ತದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 am, Sat, 11 July 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ