KCN Chandrashekar: ‘ಹುಲಿಯ ಹಾಲಿನ ಮೇವು’ ಸಿನಿಮಾ ಖ್ಯಾತಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ

KCN Chandrashekar Death: ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಕೆಸಿಎನ್​ ಚಂದ್ರಶೇಖರ್ ಸೇವೆ ಸಲ್ಲಿಸಿದ್ದರು.

KCN Chandrashekar: ‘ಹುಲಿಯ ಹಾಲಿನ ಮೇವು’ ಸಿನಿಮಾ ಖ್ಯಾತಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ
ಕೆಸಿಎನ್​ ಚಂದ್ರಶೇಖರ್​
Follow us
ಮದನ್​ ಕುಮಾರ್​
|

Updated on:Jun 14, 2021 | 8:33 AM

ಸ್ಯಾಂಡಲ್​ವುಡ್​ನಲ್ಲಿ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ನಿಧನರಾದರು. ಇಂದು (ಜೂ.14) ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಶಿವಾನಂದ ಸರ್ಕಲ್​ ಬಳಿ ಇರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

ಹಲವು ವರ್ಷಗಳಿಂದ ಕೆಸಿಎನ್​ ಚಂದ್ರಶೇಖರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಡಾ. ರಾಜ್​ಕುಮಾರ್​ ನಟನೆಯ ‘ಹುಲಿಯ ಹಾಲಿನ ಮೇವು’, ‘ಬಬ್ರುವಾಹನ’ ಮುಂತಾದ ಕ್ಲಾಸಿಕ್​ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಕೆಸಿಎನ್​ ಚಂದ್ರಶೇಖರ್​ ಅವರು ಗುರುತಿಸಿಕೊಂಡಿದ್ದರು. ಇಂದು ಅವರ ನಿಧನಕ್ಕೆ ಚಂದನವನದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ನಿರ್ಮಾಪಕನಾಗಿ ಮಾತ್ರವಲ್ಲದೆ, ವಿತರಕರಾಗಿಯೂ ಕೆಸಿಎನ್​ ಚಂದ್ರಶೇಖರ್​ ಕೆಲಸ ಮಾಡಿದ್ದರು. ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಾಗೂ ಒಮ್ಮೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಚಂದ್ರಶೇಖರ್​ ಅವರ ಇಡೀ ಕುಟುಂಬವೇ ಸಿನಿಮಾರಂಗದಲ್ಲಿ ತೊಡಗಿಕೊಂಡಿತ್ತು. ಅವರ ತಂದೆ ಕೆಸಿಎನ್​ ಗೌಡ ಅವರು ನಿರ್ಮಾಪಕರಾಗಿ, ಪ್ರದರ್ಶಕರಾಗಿ, ವಿತರಕರಾಗಿ ಗುರುತಿಸಿಕೊಂಡಿದ್ದರು. ಸಹೋದರ ಕೆಸಿಎನ್ ಮೋಹನ್​ ನಿರ್ಮಾಪಕರಾಗಿದ್ದಾರೆ.

ಕೆಸಿಎನ್​ ಚಂದ್ರಶೇಖರ್​ ನಿಧನಕ್ಕೆ ಗೀತರಚನಕಾರ, ನಿರ್ದೇಶಕ ನಾಗೇಂದ್ರ ಪ್ರಸಾದ್​ ಅವರು ಕಂಬನಿ ಮಿಡಿದಿದ್ದಾರೆ. ‘ನಲ್ಲ’ ಚಿತ್ರದ ನಿರ್ಮಾಪಕರು. ನನ್ನನ್ನು ನಿರ್ದೇಶಕನನ್ನಾಗಿ ಮಾಡಿದ ಅನ್ನದಾತರು ಕೆ.ಸಿ.ಎನ್. ಚಂದ್ರು ಸರ್ ಆತ್ಮಕ್ಕೆ ಭಗವಂತ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ನಾಗೇಂದ್ರ ಪ್ರಸಾದ್​ ಪೋಸ್ಟ್​ ಮಾಡಿದ್ದಾರೆ.

ಈ ವರ್ಷ ಕೊವಿಡ್​ ಎರಡನೇ ಅಲೆ ಆರಂಭ ಆದ ನಂತರವಂತೂ ಅನೇಕರನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ. ನಿರ್ಮಾಪಕ ಕೋಟಿ ರಾಮು, ಯುವ ನಿರ್ಮಾಪಕ, ನಟ ಡಿಎಸ್​ ಮಂಜುನಾಥ್​, ಪುಟ್ಟಣ್ಣ ಕಣಗಾಲ್​ ಪುತ್ರ ರಾಮು, ಹಿರಿಯ ನಟಿಯರಾದ ಸುರೇಖಾ, ಬಿ. ಜಯಾ, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಖನಾದ ಅರವಿಂದ್​, ನಟ-ಪತ್ರಕರ್ತ ಸುರೇಶ್​ ಚಂದ್ರ ಸೇರಿದಂತೆ ಅನೇಕರು ನಿಧನರಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ ನಿಧನ

Published On - 8:10 am, Mon, 14 June 21

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್