‘ಕೆಡಿ ಬ್ಲಾಕ್​​ಬಸ್ಟರ್​’; ಪ್ರೇಮ್ ನಿರ್ದೇಶನಕ್ಕೆ ಮೆಚ್ಚುಗೆ, ಕಿಚ್ಚನ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ

KD Movie Twitter Review: 'ಕೆಡಿ' ಸಿನಿಮಾ ಇಂದು ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಪಡೆದಿದೆ. ಪ್ರೇಮ್ ನಿರ್ದೇಶನದ ಈ ಚಿತ್ರದಲ್ಲಿ ಧ್ರುವ ಸರ್ಜಾ ಅಭಿನಯಕ್ಕೆ ಹಾಗೂ ಕಿಚ್ಚ ಸುದೀಪ್ ಅವರ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಸಿಳ್ಳೆ ಚಪ್ಪಾಳೆ ಹಾಕಿದ್ದಾರೆ. ಅರ್ಜುನ್ ಜನ್ಯರ ಹಿನ್ನೆಲೆ ಸಂಗೀತ, ಕಥೆಯ ನಿರೂಪಣೆ ಸಿನಿಮಾವನ್ನು ಉನ್ನತ ಮಟ್ಟಕ್ಕೇರಿಸಿದೆ. ಇದು ಧ್ರುವ ಸರ್ಜಾರ ವೃತ್ತಿಜೀವನಕ್ಕೆ ಮಹತ್ವದ ಬೂಸ್ಟ್ ನೀಡಿದೆ.

‘ಕೆಡಿ ಬ್ಲಾಕ್​​ಬಸ್ಟರ್​’; ಪ್ರೇಮ್ ನಿರ್ದೇಶನಕ್ಕೆ ಮೆಚ್ಚುಗೆ, ಕಿಚ್ಚನ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ
ಕೆಡಿ ಸಿನಿಮಾ

Updated on: Apr 30, 2026 | 12:06 PM

‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ರಿಲೀಸ್ ಆಗಿದೆ. ಕೆವಿಎನ್ ಸಂಸ್ಥೆ ನಿರ್ಮಿಸಿರುವ ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ. ಈ ಚಿತ್ರವನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಕೊಂಡಾಡುತ್ತಿದ್ದಾರೆ. ಪ್ರೇಮ್ ಅವರ ಹಳೆಯ ಖದರ್ ಮರಳಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಇದು ಆರಂಭದ ವಿಮರ್ಶೆ ಮಾತ್ರ. ಸಂಜೆ ವೇಳೆಗೆ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.

‘ಮಾರ್ಟಿನ್’ ಸೋಲಿನ ಬಳಿಕ ಧ್ರುವ ಸರ್ಜ ಅವರ ‘ಕೆಡಿ’ ಸಿನಿಮಾ ರಿಲೀಸ್ ಆಗಿದೆ. ಈ ಕಾರಣಕ್ಕೆ ಅವರ ವೃತ್ತಿಜೀವನದ ದೃಷ್ಟಿಯಿಂದ ಈ ಸಿನಿಮಾ ತುಂಬಾನೇ ಮುಖ್ಯ ಎನಿಸಿಕೊಂಡಿದೆ. ಈಗ ಸೋಶಿಯಲ್ ಮೀಡಿಯಾದಲ್ಲಿ ಜನರು ಸಿನಿಮಾಗೆ ಪಾಸಿಟಿವ್ ಆಗಿ ಪ್ರತಿಕ್ರಿಯಿಸಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

‘ಕೆಡಿ’ ಸಿನಿಮಾದ ಮೊದಲಾರ್ಧವನ್ನು ಜನರು ಸಮಾಧಕರ ಎಂದು ಕರೆದಿದ್ದಾರೆ. ಸಿನಿಮಾದ ಪಾತ್ರಗಳ ಪರಿಚಯದ ಮೇಲೆ ಮೊದಲಾರ್ಧ ಸಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸಿದವರು ಹೇಳಿದ್ದಾರೆ. ಸಿನಿಮಾದ ಅಸಲಿ ಕಥೆ ಆರಂಭ ಆಗೋದು ದ್ವೀತೀಯಾರ್ಧದಲ್ಲಂತೆ. ಸಿನಿಮಾದ ಕ್ಲೈಮ್ಯಾಕ್ಸ್ ಅನ್ನು ಜನರು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: ‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

ಅರ್ಜುನ್ ಜನ್ಯ ಅವರ ಹಿನ್ನೆಲೆ ಸಂಗೀತ ಸಿನಿಮಾನ ಬೇರೆ ಹಂತಕ್ಕೆ ತೆಗೆದುಕೊಂಡು ಹೋಗಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಸಿನಿಮಾನ ಜನರು ಒಟ್ಟಾರೆಯಾಗಿ ಇಷ್ಟಪಟ್ಟಿದ್ದಾರೆ. ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ಸಿನಿಮಾ ಸಹಕಾರಿ ಆಗಲಿದೆ ಎಂದು ಅನೇಕರು ಪರಿಗಣಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us