ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿದ ‘ಕೆಡಿ’; ಧ್ರುವ ಸಿನಿಮಾ ಕಲೆಕ್ಷನ್ ಎಷ್ಟು?

ಧ್ರುವ ಸರ್ಜಾ ಅವರ 'ಕೆಡಿ' ಸಿನಿಮಾ ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿದೆ. ಮೊದಲ ಎರಡು ದಿನಗಳಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರವು ಧ್ರುವ ಸರ್ಜಾ ವೃತ್ತಿಜೀವನಕ್ಕೆ ಹೊಸ ಗೆಲುವು ತಂದಿದೆ. 'ಮಾರ್ಟಿನ್' ಸೋಲಿನ ನಂತರದ ಈ ಯಶಸ್ಸು ಅವರಿಗೆ ಮುಖ್ಯವಾಗಿದೆ. ಮೇ 1ರ ಕಾರ್ಮಿಕರ ದಿನದ ರಜೆಯೂ ಗಳಿಕೆಗೆ ನೆರವಾಗಿದೆ.

ಎರಡನೇ ದಿನವೂ ಭರ್ಜರಿ ಗಳಿಕೆ ಮಾಡಿದ ‘ಕೆಡಿ’; ಧ್ರುವ ಸಿನಿಮಾ ಕಲೆಕ್ಷನ್ ಎಷ್ಟು?
ಕೆಡಿ ಸಿನಿಮಾ

Updated on: May 02, 2026 | 7:06 AM

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬಂದಿದೆ. ಜೋಗಿ ಪ್ರೇಮ್ ಅವರು ಹಲವು ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದಾರೆ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈ ಸಿನಿಮಾಗೆ ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನ ಶೋಗಳ ಸಂಖ್ಯೆ ಕೊಂಚ ಕಡಿಮೆ ಆಗಿದೆ. ಎರಡನೇ ದಿನ ಫ್ಯಾನ್ಸ್ ಶೋ ಇಲ್ಲದಿರುವುದು ಕೂಡ ಇದಕ್ಕೆ ಕಾರಣ. ಹಾಗಾದರೆ, ‘ಕೆಡಿ’ ಸಿನಿಮಾ ಎರಡನೇ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ಎರಡನೇ ದಿನ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಮೊದಲ ದಿನ ಈ ಚಿತ್ರ 3.5 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಹಾಗೂ 4.1 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿತ್ತು. ಎರಡನೇ ದಿನವೂ ಇದೇ ಟ್ರೆಂಡ್ ಮುಂದುವರಿದಿದೆ. ಸಿನಿಮಾ ರಿಲೀಸ್ ಆಗಿದ್ದು ಏಪ್ರಿಲ್ 30. ಮೇ 1 ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜಾ ಇತ್ತು. ಹೀಗಾಗಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ನೋಡಿದ್ದಾರೆ.

ಮೊದಲ ದಿನ ಚಿತ್ರಕ್ಕೆ 845 ಶೋಗಳನ್ನು ನೀಡಲಾಗಿತ್ತು. ಎರಡನೇ ದಿನ ಸಿನಿಮಾಗೆ 817 ಶೋಗಳನ್ನು ನೀಡಲಾಗಿತ್ತು. ಅಂದು 3.50 ಕೋಟಿ ರೂಪಾಯಿ ನೆಟ್​ ಹಾಗೂ 4.1 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರದ ಗ್ರಾಸ್ ಕಲೆಕ್ಷನ್ ಎರಡು ದಿನಕ್ಕೆ 8.19 ಕೋಟಿ ರೂಪಾಯಿ ಆಗಿದೆ. ನೆಟ್ ಕಲೆಕ್ಷನ್ 7 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಧ್ರುವ ಸರ್ಜಾಗೆ ವಿಶ್ ಮಾಡಿ ‘ಕೆಡಿ’ ಚಿತ್ರದ ಬೆಂಬಲಕ್ಕೆ ನಿಂತ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು

ಕೆಡಿ ಚಿತ್ರದಲ್ಲಿ ದೊಡ್ಡದಾದ ಪಾತ್ರವರ್ಗ ಇದೆ. ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರವಿ ಶಂಕರ್ ಮೊದಲಾದವರು ನಟಿಸಿದ್ದಾರೆ. ಧ್ರುವ ಸರ್ಜಾ ವೃತ್ತಿ ಜೀವನದ ದೃಷ್ಟಿಯಿಂದ ಸಿನಿಮಾ ತುಂಬಾನೇ ಮುಖ್ಯವಾಗಿತ್ತು. ‘ಮಾರ್ಟಿನ್’ ಚಿತ್ರದ ಸೋಲಿನಿಂದ ಅವರು ಕಂಗೆಟ್ಟಿದ್ದರು. ಅವರಿಗೆ ಈ ಚಿತ್ರ ದೊಡ್ಡ ಗೆಲುವು ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us