AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ

ಬಿಡುಗಡೆಗೆ ಸಿದ್ಧವಾಗಿರುವ ‘ಕೆಡಿ’ ಸಿನಿಮಾಗೆ ಈಗ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ಕಷ್ಟವಾಗಿದೆ. ತಮ್ಮ ಗಮನಕ್ಕೆ ಬಾರದಂತೆ ಸಿನಿಮಾವನ್ನು ರಿವೈಸಿಂಗ್ ಕಮಿಟಿಗೆ ಕಳಿಸಲಾಗಿದೆ ಎಂದು ಚಿತ್ರತಂಡದ ಆರೋಪಿಸಿದೆ. ಇದರಿಂದಾಗಿ ‘ಜನ ನಾಯಗನ್’ ರೀತಿಯೇ ‘ಕೆಡಿ’ ಸಿನಿಮಾ ಕೂಡ ತೊಂದರೆಗೆ ಸಿಲುಕುವ ಸಾಧ್ಯತೆ ದಟ್ಟವಾಗಿದೆ.

‘ಜನ ನಾಯಗನ್’ ರೀತಿ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಕೆಡಿ’ ಸಿನಿಮಾಗೂ ಸೆನ್ಸಾರ್ ಸಮಸ್ಯೆ
ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Apr 13, 2026 | 5:45 PM

Share

‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣ ಮಾಡಿರುವ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಆಗಿರುವುದು ಗೊತ್ತೇ ಇದೆ. ಈಗ ಅದೇ ನಿರ್ಮಾಣ ಸಂಸ್ಥೆಯ ‘ಕೆಡಿ’ ಸಿನಿಮಾ (KD Movie) ಕೂಡ ಇದೇ ರೀತಿಯ ಸಮಸ್ಯೆಗೆ ಸಿಲುಕಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ನಟಿಸಿದ್ದು, ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಹೊಸ ಸಂಕಷ್ಟ ಶುರುವಾಗಿದೆ. ಚಿತ್ರತಂಡದ ಗಮನಕ್ಕೂ ಬಾರದಂತೆ ಈ ಸಿನಿಮಾವನ್ನು ಸೆನ್ಸಾರ್ (Censor) ಮಂಡಳಿಯ ರಿವೈಸಿಂಗ್ ಕಮಿಟಿಗೆ ಕಳಿಸಲಾಗಿದೆ.

‘ಕೆಡಿ’ ಸಿನಿಮಾವನ್ನು ಈಗಾಗಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಸದಸ್ಯರು ವೀಕ್ಷಿಸಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ರಕ್ತಪಾತ ಇರುವುದರಿಂದ ಸೆನ್ಸಾರ್ ಮಂಡಳಿ ‘ಎ’ ಪ್ರಮಾಣಪತ್ರ ನೀಡಲು ಸಜ್ಜಾಗಿತ್ತು. ಹಾಡಿನ ಸಾಹಿತ್ಯದಲ್ಲಿ ಕೆಲವು ಸಾಲುಗಳನ್ನು ಬದಲಾಯಿಸುವಂತೆ ಸೂಚಿಸಲಾಗಿತ್ತು. ಅದನ್ನು ಚಿತ್ರತಂಡ ಕೂಡ ಒಪ್ಪಿಕೊಂಡಿತ್ತು. ಆದರೆ ಅಂತಿಮವಾಗಿ ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿಲ್ಲ.

ಪ್ರಾದೇಶಿಕ ಸೆನ್ಸಾರ್ ಮಂಡಳಿಯು ‘ಎ’ ಪ್ರಮಾಣಪತ್ರ ನೀಡುವ ಬದಲು ಮುಂಬೈನಲ್ಲಿರುವ ಕೇಂದ್ರ ಸೆನ್ಸಾರ್ ಮಂಡಳಿ ಹಾಗೂ ರಿವೈಸಿಂಗ್ ಕಮಿಟಿಗೆ ಸಿನಿಮಾವನ್ನು ಕಳಿಸಲಾಗಿದೆ. ನಿರ್ದೇಶಕರಿಗಾಗಲೀ, ನಿರ್ಮಾಣ ಸಂಸ್ಥೆಗಾಗಲಿ ತಿಳಿಸದೆಯೇ ‘ಕೆಡಿ’ ಚಿತ್ರವನ್ನು ರಿವೈಸಿಂಗ್ ಕಮಿಟಿಗೆ ಕಳಿಸಿದ್ದು ಚಿತ್ರತಂಡದ ಅಸಮಾಧಾನಕ್ಕೆ ಕಾರಣ ಆಗಿದೆ. ಸೆನ್ಸಾರ್ ಮಂಡಳಿಯಿಂದ ನಿಯಮ ಉಲ್ಲಂಘನೆ ಆಗಿದೆ ಎಂದು ಚಿತ್ರತಂಡ ಆರೋಪಿಸಿದೆ.

ದೊಡ್ಡ ಬಜೆಟ್​ನಲ್ಲಿ ‘ಕೆಡಿ’ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಒಂದು ವೇಳೆ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ವಿಳಂಬವಾದರೆ ಚಿತ್ರದ ಬಿಡುಗಡೆ ದಿನಾಂಕ ಬದಲಾಗುವ ಸಾಧ್ಯತೆ ಇರುತ್ತದೆ. ಈಗಾಗಲೇ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ‘ಜನ ನಾಯಗನ್’ ಸಿನಿಮಾ ಈ ತೊಂದರೆಯನ್ನು ಅನುಭವಿಸಿದೆ. ರಾಜಕೀಯದ ಕಾರಣದಿಂದ ಸಿನಿಮಾಗೆ ತೊಂದರೆ ಮಾಡಲಾಗಿದೆ ಎಂಬ ಅಭಿಪ್ರಾಯ ಇದೆ.

ಇದನ್ನೂ ಓದಿ: ‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆ ಆಗಾದ ಕೂಡ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಆ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು. ಮಹಿಳಾ ಆಯೋಗ ಕೂಡ ಚಿತ್ರತಂಡಕ್ಕೆ ನೋಟಿಸ್ ನೀಡಿತ್ತು. ಅದರ ಪರಿಣಾಮವಾಗಿ ಪೂರ್ತಿ ಹಾಡನ್ನು ಡಿಲೀಟ್ ಮಾಡಬೇಕಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು