AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

ಕೆಡಿ ಸಿನಿಮಾದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ಅಶ್ಲೀಲ ಸಾಹಿತ್ಯದಿಂದ ಭಾರೀ ವಿವಾದಕ್ಕೆ ಸಿಲುಕಿದೆ. ಹಾಡಿನ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ನಿರ್ದೇಶಕ ಜೋಗಿ ಪ್ರೇಮ್ ಮತ್ತು ಡ್ಯಾನ್ಸರ್ ನೋರಾ ಫತೇಹಿ ಟೀಕೆಗೆ ಗುರಿಯಾಗಿದ್ದಾರೆ. ಗಾಯಕಿ ಐಶ್ವರ್ಯಾ ರಂಗರಾಜನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿರೋದು ಚರ್ಚೆ ಹುಟ್ಟುಹಾಕಿದೆ.

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್
ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Mar 19, 2026 | 1:34 PM

Share

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ.

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ ಆದ ಕೆಲವೇ ದಿನಕ್ಕೆ ವಿವಾದದ ಹೊಗೆ ಕಾಣಿಸಿಕೊಂಡಿತು. ಕನ್ನಡದಿಂದ ಹಿಡಿದು ಬಾಲಿವುಡ್​​ವರೆಗೆ ಈ ಚಿತ್ರದ ಹಾಡನ್ನು ಟೀಕಿಸಿದರು. ಸಾಹಿತ್ಯ ಅಶ್ಲೀಲವಾಗಿದೆ ಎಂದು ಟೀಕಿಸಲಾಯಿತು. ಈಗ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಯೂಟ್ಯೂಬ್​​ನಿಂದ ತೆಗೆಯಲಾಗಿದೆ.

‘ಸರ್ಸೆ’ ಹಾಡಿಗೆ ಕನ್ನಡದಲ್ಲಿ ಸಾಂಗ್ ಬರೆದಿದ್ದು ಜೋಗಿ ಪ್ರೇಮ್ ಅವರು. ಈ ಹಾಡನ್ನು ಹಾಡಿದ್ದು ಐಶ್ವರ್ಯಾ ಅವರು. ಈ ಕಾರಣಕ್ಕೆ ಅವರ ಇನ್​​ಸ್ಟಾ ಖಾತೆಗೆ ಸಾಕಷ್ಟು ಸಂದೇಶ ಹಾಗೂ ಕಮೆಂಟ್​​ಗಳು ಬಂದಿರಬಹುದು. ಈ ಕಾರಣದಿಂದ ಇನ್​​ಸ್ಟಾಗ್ರಾಮ್​​ನಿಂದ ದೂರ ಉಳಿದರೇ ಎನ್ನುವ ಪ್ರಶ್ನೆ ಮೂಡಿದೆ. ವಿವಾದ ತಣ್ಣಗಾದ ಬಳಿಕ ಅವರು ಕಂಬ್ಯಾಕ್ ಮಾಡಬಹುದು ಎಂಬ ನಿರೀಕ್ಷೆ ಇದೆ.

ಇನ್​​ಸ್ಟಾಗ್ರಾಮ್ ಖಾತೆಯನ್ನು ಡಿ ಆ್ಯಕ್ಟಿವೇಟ್ ಮಾಡಲು ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿಲ್ಲ. ಈಗ ಹಾಡಿನ ವಿವಾದ ಸಂದರ್ಭದಲ್ಲೇ ಅವರು ಡಿ ಆ್ಯಕ್ಟಿವೇಟ್ ಮಾಡಿರುವುದರಿಂದ ಸಾಕಷ್ಟು ಚರ್ಚೆ ಆಗಿದೆ. ಇದು ಕಾಕತಾಳೀಯ ಕೂಡ ಇರಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

‘ಸರ್ಸೆ ನಿನ್ನ ಸೆರಗ ಸರ್ಸೆ’ ಸಾಂಗ್​​​ನ ಲಿರಿಕ್ಸ್​​ನ ಸಂಪೂರ್ಣವಾಗಿ ಬದಲಿಸಿ ಹೊಸ ಹಾಡಿನ ಮೂಲಕ ಬರೋದಾಗಿ ಜೋಗಿ ಪ್ರೇಮ್ ಹೇಳಿದ್ದಾರೆ. ಸಿನಿಮಾ ರಿಲೀಸ್​​ಗೆ ಕೆಲವೇ ವಾರಗಳು ಬಾಕಿ ಇರುವಾಗ ವಿವಾದ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ