AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಚಿತ್ರದ 'ಸರ್ಸೆ ನಿನ್ನ ಸೆರಗ ಸರ್ಸೆ' ಹಾಡು ತೀವ್ರ ವಿವಾದಕ್ಕೆ ಗುರಿಯಾಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ನಟಿಸಿದ್ದ ಈ ಹಾಡಿನ ಅಶ್ಲೀಲ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸೆಲೆಬ್ರಿಟಿಗಳ ಟೀಕೆಯ ಬೆನ್ನಲ್ಲೇ, ಆನಂದ್ ಆಡಿಯೋ ಈ ಹಾಡನ್ನು ಯೂಟ್ಯೂಬ್‌ನಿಂದ ತೆಗೆದುಹಾಕಿದೆ.

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?
ಸರ್ಸೆ ಹಾಡು
ರಾಜೇಶ್ ದುಗ್ಗುಮನೆ
|

Updated on:Mar 17, 2026 | 10:28 AM

Share

ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ.

ಪ್ರೇಮ್ ಅವರು ‘ಕೆಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಹಾಡಿಗೆ ರಾಜ್ಯದ ಜನತೆ ಮಾತ್ರವಲ್ಲ ಬಾಲಿವುಡ್ ಮಂದಿಯೂ ಕ್ಯಾತೆ ತೆಗೆದಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಚಿತ್ರದ ಹಾಡಿಗೆ ಪ್ರೇಮ್ ಸಾಹಿತ್ಯ ಬರೆದಿದ್ದಾರೆ. ಐಶ್ವರ್ಯಾ ರಂಗರಾಜನ್ ಕನ್ನಡದಲ್ಲಿ ಹಾಡಿದ್ದಾರೆ. ಹಿಂದಿಯಲ್ಲಿ ರಖೀಬ್ ಆಲಂ ಅವರು ಸಾಹಿತ್ಯ ಬರೆದಿದ್ದು, ಮಂಗ್ಲಿ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

‘ಸರ್ಸೆ..’ ಹಾಡಿನಲ್ಲಿ ನೋರಾ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಾಕಷ್ಟು ಅಶ್ಲೀಲ ಸಾಹಿತ್ಯ ಇದೆ. ಈ ಹಾಡನ್ನು ಕೇಳಿದ್ದ ಖ್ಯಾತ ಗಾಯಕ ಅರ್ಮಾನ್ ಮಲ್ಲಿಕ್, ‘ಗೀತರಚನಕಾರರು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದನ್ನು ನೋಡಲು ಬೇಸರ ಆಗುತ್ತದೆ’ ಎಂದಿದ್ದರು. ಈ ವಿರೋಧದ  ಬೆನ್ನಲ್ಲೇ ಹಾಡು ಕೆಲ ಹೊತ್ತು ಯೂಟ್ಯೂಬ್​ನಿಂದ ಮಾಯ ಆಗಿತ್ತು . ಈಗ ಹಾಡು ಮತ್ತೆ ಮರಳಿದೆ. ಇದು ಚಿತ್ರಕ್ಕೆ ಸಾಕಷ್ಟು ಹಿನ್ನಡೆಯನ್ನು ಉಂಟು ಮಾಡಿದೆ. ರಿಲೀಸ್​​ಗೆ ಕೆಲವೇ ವಾರಗಳು ಇರುವಾಗ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.

ಪ್ರೇಮ್ ಅವರು ಈ ಮೊದಲು ಈ ರೀತಿಯ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದರು. ಅವರ ನಟನೆಯ ‘ಪ್ರೇಮ್ ಅಡ್ಡ’ ಸಿನಿಮಾ 2012ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ‘ಮೇಲುಕೋಟೆ ಹುಡುಗಿ ಒಬ್ಬಳು’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅದರಲ್ಲಿರೋ ಲಿರಿಕ್​ಸ್​​​ಗೆ ಮೇಲುಕೋಟೆಯ ಜನರು ವಿರೋಧ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Tue, 17 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ