Varaha Roopam Song: ‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’; ಕೇರಳ ಕೋರ್ಟ್​ನಿಂದ ಹೊಸ ಆದೇಶ

Kantara: ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ‘ಕೋಯಿಕ್ಕೋಡ್​ ನ್ಯಾಯಾಲಯ..’ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಒಪ್ಪಿಗೆ ಇಲ್ಲದೆ ಹಾಡನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿತ್ತು.

Varaha Roopam Song: ‘ವರಾಹ ರೂಪಂ.. ಹಾಡು ಬಳಕೆ ಮಾಡಬಹುದು’; ಕೇರಳ ಕೋರ್ಟ್​ನಿಂದ ಹೊಸ ಆದೇಶ
ವರಾಹ ರೂಪಂ-ನವರಸಂ
TV9kannada Web Team

| Edited By: Ramesh B Jawalagera

Nov 25, 2022 | 5:32 PM

‘ಕಾಂತಾರ’ ಚಿತ್ರದ (Kantara Movie) ‘ವರಾಹ ರೂಪಂ..’ ಹಾಡು ಸದ್ಯ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್ ಅನ್ನು ‘ವರಾಹ ರೂಪಂ..’ನಲ್ಲಿ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ‘ತೈಕ್ಕುಡಂ ಬ್ರಿಡ್ಜ್​’ನವರು ಕೇರಳದ ಕೋಯಿಕ್ಕೋಡ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​ ‘ವರಾಹ ರೂಪಂ..’ (Varaha Roopam..) ಹಾಡನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ಆದೇಶ ಹೊರಡಿಸಿತ್ತು. ಈ ಸಂಬಂಧ ‘ಹೊಂಬಾಳೆ ಫಿಲ್ಮ್ಸ್’ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಈ ವೇಳೆ ಕೋರ್ಟ್ ತೀರ್ಪು ಕಾಂತಾರದ ಕಡೆಯಾಗಿದೆ.

‘ನವರಸಂ..’ ಹಾಡಿನಲ್ಲಿರುವ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಅಭಿಪ್ರಾಯವನ್ನು ಪ್ರೇಕ್ಷಕರು ನೀಡಿದರು. ಇದನ್ನು ಗಂಭೀರವಾಗಿ ಸ್ವೀಕರಿಸಿದ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ದಾಖಲು ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ‘ಕೋಯಿಕ್ಕೋಡ್​ ನ್ಯಾಯಾಲಯ..’ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಒಪ್ಪಿಗೆ ಇಲ್ಲದೆ ಹಾಡನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿತ್ತು. ಈಗ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ. ಇದರಿಂದ ಚಿತ್ರತಂಡಕ್ಕೆ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: ‘ಕಾಂತಾರ’ ಚಿತ್ರತಂಡಕ್ಕೆ ಅರ್ಧ ಸಿಹಿ.. ಅರ್ಧ ಕಹಿ..: ಕೋರ್ಟ್​ ತೀರ್ಪಿನ ಬಗ್ಗೆ ವಕೀಲ ಶಶಿರಾಜ್ ಕಾವೂರು ಹೇಳಿದ್ದಿಷ್ಟು

ಇದನ್ನೂ ಓದಿ

‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು ಕೇಳಿ ಎಲ್ಲರೂ ಥ್ರಿಲ್ ಆಗಿದ್ದರು. ಕೋರ್ಟ್​ನಿಂದ ಹಾಡಿಗೆ ತಡೆ ಬಿದ್ದಿದ್ದ ಕಾರಣ ಪ್ರೈಮ್​​ನಲ್ಲಿ ಪ್ರಸಾರಕಂಡ ವರ್ಷನ್​​ನಲ್ಲಿ ಹಾಡಿನ ಟೋನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡಿನ ಟೋನ್​ನಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಇದನ್ನು ಕೇಳಿ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಈ ಹಾಡನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ಹೊಸ ಹಾಡಿನ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕೋರ್ಟ್​ನಲ್ಲಿ ನಡೆಯುತ್ತಿರುವ ಕೇಸ್ ವಿಚಾರದಲ್ಲಿ ಹೊಂಬಾಳೆ ಫಿಲ್ಮ್ಸ್​ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada