Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆರೆಬೇಟೆ’ ನಿರ್ದೇಶಕ ರಾಜ್​ಗುರು ಬಳಿ ಸಿದ್ಧವಾಗಿವೆ 10 ಸ್ಕ್ರಿಪ್ಟ್​; ಶೀಘ್ರವೇ ಹೊಸ ನ್ಯೂಸ್​

ನಿರ್ದೇಶಕ ರಾಜ್​ಗುರು ಅವರಿಗೆ ‘ಕೆರೆಬೇಟೆ’ ಮೊದಲ ಸಿನಿಮಾ. ಹಾಗಂತ ಅವರು ಚಿತ್ರರಂಗಕ್ಕೆ ಹೊಸಬರಲ್ಲ. ಒಂದೂವರೆ ದಶಕಗಳಿಗೂ ಹೆಚ್ಚು ಕಾಲದಿಂದ ಅವರು ಚಂದನವನದಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಅವರ ಕೆಲಸಕ್ಕೆ ಮನ್ನಣೆ ಸಿಕ್ಕಿದೆ. ‘ಕೆರೆಬೇಟೆ’ ಸಿನಿಮಾವನ್ನು ನೋಡಿ ಹಲವು ಸೆಲೆಬ್ರಿಟಿಗಳು ಹಾಗೂ ಪ್ರೇಕ್ಷಕರು ಹೊಗಳುತ್ತಿದ್ದಾರೆ.

‘ಕೆರೆಬೇಟೆ’ ನಿರ್ದೇಶಕ ರಾಜ್​ಗುರು ಬಳಿ ಸಿದ್ಧವಾಗಿವೆ 10 ಸ್ಕ್ರಿಪ್ಟ್​; ಶೀಘ್ರವೇ ಹೊಸ ನ್ಯೂಸ್​
‘ಕೆರೆಬೇಟೆ’ ಶೂಟಿಂಗ್​ ವೇಳೆ ನಿರ್ದೇಶಕ ರಾಜ್​ಗುರು, ನಟ ಗೌರಿಶಂಕರ್​
Follow us
ಮದನ್​ ಕುಮಾರ್​
|

Updated on: Mar 17, 2024 | 8:19 PM

ಚಿತ್ರರಂಗದಲ್ಲಿ ಯಶಸ್ಸು ಸಿಗಬೇಕು ಎಂದರೆ ಹತ್ತು ಹಲವು ವರ್ಷಗಳು ಕಾಯಬೇಕು. ರಾತ್ರೋರಾತ್ರಿ ಇಲ್ಲಿ ಏನೂ ಆಗುವುದಿಲ್ಲ. ದಶಕಗಳ ಕಾಲ ಕಾಯುವ ತಾಳ್ಮೆ ಇಟ್ಟುಕೊಂಡು ಕಷ್ಟಪಡುವವರಿಗೆ ಒಂದಲ್ಲಾ ಒಂದು ದಿನ ಮನ್ನಣೆ ಸಿಗುತ್ತದೆ. ಅದಕ್ಕೆ ಈಗ ನಿರ್ದೇಶಕ ರಾಜ್​ಗುರು (Rajguru B) ಅವರೇ ಸಾಕ್ಷಿ. ಕಳೆದ 16 ವರ್ಷಗಳಿಂದ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾಗಳ ನಿರ್ದೇಶನ ತಂಡದಲ್ಲಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕನಾಗಿ ಅವರು ಆ್ಯಕ್ಷನ್​-ಕಟ್​ ಹೇಳಿದ ಕೆರೆಬೇಟೆ’ (Kerebete) ಸಿನಿಮಾ ಮಾರ್ಚ್​ 15ರಂದು ತೆರೆಕಂಡಿದೆ. ಪ್ರೇಕ್ಷಕರು ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಹೇಳುತ್ತಿದ್ದಾರೆ.

ಮೊದಲ ಸಿನಿಮಾದ ನಿರ್ದೇಶನದಿಂದ ರಾಜ್​ಗುರು ಅವರಿಗೆ ಒಂದು ಮನ್ನಣೆ ಸಿಕ್ಕಿದೆ. ಮೂಲತಃ ಸೊರಬದವರಾದ ಅವರು ಮಲೆನಾಡಿನ ಫ್ಲೇವರ್​ ಇರುವ ಕಥೆಯನ್ನು ‘ಕೆರೆಬೇಟೆ’ ಸಿನಿಮಾದಲ್ಲಿ ತೋರಿಸಿದ್ದಾರೆ. ಅವರ ಕಥೆಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ನಟ ಗೌರಿಶಂಕರ್​ ಅವರ ನಟನೆಗೂ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಕಾದಿದ್ದ ನಿರ್ದೇಶಕ ರಾಜ್​​ಗುರು ಅವರು ಮೊದಲ ಸಿನಿಮಾದಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ.

ಸೂಕ್ತ ಅವಕಾಶ ಸಿಗಬೇಕು ಎಂದರೆ ಹಲವು ವರ್ಷ ಕಾಯಲೇಬೇಕು. ಆದರೆ ಅಷ್ಟು ವರ್ಷಗಳ ಕಾಲ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್​ಗುರು ಅವರು ಸ್ಕ್ರಿಪ್ಟ್​ಗಳ ತಯಾರಿಯಲ್ಲಿ ತೊಡಗಿಕೊಂಡಿದ್ದರು. ಈಗ ಅವರ ಬಳಿಕ 10 ಸ್ಕ್ರಿಪ್ಟ್​ಗಳು ಸಿದ್ಧವಾಗಿವೆ. ಮುಂದಿನ ಜರ್ನಿಗೆ ಬೇಕಾದ ಎಲ್ಲ ಸಿದ್ಧತೆಯನ್ನು ಅವರು ಮಾಡಿಕೊಂಡಿದ್ದಾರೆ. ನಿರ್ದೇಶಕರು ಒಂದು ಒಳ್ಳೆಯ ಸ್ಕ್ರಿಪ್ಟ್​ ಮಾಡಿಕೊಂಡರೆ ಒಂದು ಸೈಟ್​ ಖರೀದಿಸಿ ಇಟ್ಟುಕೊಂಡಂತೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kerebete Review: ಕುತೂಹಲಭರಿತ ಕೆರೆಬೇಟೆಯಲ್ಲಿ ಊಹಿಸಲಾಗದ ಟ್ವಿಸ್ಟ್​

‘ಇದು ಒಟಿಟಿ ಯುಗ. ಆದರೆ ನಮ್ಮ ಕೆರೆಬೇಟೆ ಸಿನಿಮಾದಲ್ಲಿ ನಾವು ಹೇಳಿದ ಕಥೆ ಹಳೇ ಕಾಲದ್ದು. ಆದರೆ ಇಂದಿಗೂ ಅದು ಅನ್ವಯ ಆಗುತ್ತದೆ. ಡಿಜಿಟಲ್​ ಯುಗದಲ್ಲಿ ಜನರು ನಮ್ಮ ಸಿನಿಮಾವನ್ನು ಮೆಚ್ಚಿಕೊಂಡಿರುವುದಕ್ಕೆ ಖುಷಿ ಇದೆ’ ಎಂದು ರಾಜ್​ಗುರು ಅವರು ಹೇಳಿದ್ದಾರೆ. ಒಳ್ಳೆಯ ವಿಮರ್ಶೆಗಳು ಸಿಕ್ಕರೂ ಕೂಡ ಕೆಲವೊಮ್ಮೆ ಕನ್ನಡದ ಸಿನಿಮಾಗಳಿಗೆ ಪ್ರೇಕ್ಷಕರ ಕೊರತೆ ಕಾಡುತ್ತದೆ. ಆ ಬಗ್ಗೆ ನಿರ್ದೇಶಕ ರಾಜ್​ಗುರು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಒಳ್ಳೆಯ ಸಿನಿಮಾಗಳು ಬಂದರೆ ಮಾತ್ರ ಕನ್ನಡ ಚಿತ್ರರಂಗದ ಮೇಲೆ ಪ್ರೇಕ್ಷಕರಲ್ಲಿ ಮತ್ತೆ ಭರವಸೆ ಮೂಡಲು ಸಾಧ್ಯ ಎಂಬುದು ರಾಜ್​ಗುರು ಅಭಿಪ್ರಾಯ.

ಮೊದಲ ಸಿನಿಮಾ ಸದ್ದು ಮಾಡುತ್ತಿರುವುದರಿಂದ ನಿರ್ದೇಶಕ ರಾಜ್​ಗುರು ಅವರಿಗೆ ಈಗ ಬೇಡಿಕೆ ಬರುತ್ತಿದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಸಿನಿಮಾ ಮಂದಿ ಕೂಡ ‘ಕೆರೆಬೇಟೆ’ ಬಗ್ಗೆ ಮಾತಾಡುತ್ತಿದ್ದಾರೆ. ಸದ್ಯ ಎಲ್ಲವೂ ಮಾತುಕಥೆಗಳ ಹಂತದಲ್ಲಿವೆ. ಶೀಘ್ರದಲ್ಲೇ ರಾಜ್​ಗುರು ಅವರ ಕಡೆಯಿಂದ ಗುಡ್​ ನ್ಯೂಸ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ