AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ವರ್ಷ; ಅಭಿಮಾನಿಗಳದ್ದು ಒಂದೇ ಪ್ರಶ್ನೆ

ಕೆಜಿಎಫ್ 2 ಚಿತ್ರವು ರಿಲೀಸ್ ಆಗಿ ಮೂರು ವರ್ಷಗಳು ಪೂರ್ಣಗೊಂಡಿವೆ. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಪಾರ ಯಶಸ್ಸು ಕಂಡಿತ್ತು. ಆದರೆ, ಮೂರನೇ ಭಾಗದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಇಲ್ಲದಿರುವುದು ಅಭಿಮಾನಿಗಳಲ್ಲಿ ನಿರಾಶೆಯನ್ನುಂಟು ಮಾಡಿದೆ. ಅಭಿಮಾನಿಗಳು ಶೀಘ್ರದಲ್ಲೇ ಒಳ್ಳೆಯ ಸುದ್ದಿ ಕೇಳುವ ನಿರೀಕ್ಷೆಯಲ್ಲಿದ್ದಾರೆ.

Yash: ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ವರ್ಷ; ಅಭಿಮಾನಿಗಳದ್ದು ಒಂದೇ ಪ್ರಶ್ನೆ
ಯಶ್
ರಾಜೇಶ್ ದುಗ್ಗುಮನೆ
|

Updated on: Apr 14, 2025 | 12:50 PM

Share

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ರಿಲೀಸ್ ಆಗಿ ಇಂದಿಗೆ (ಏಪ್ರಿಲ್‌ 14) ಮೂರು ವರ್ಷ ತುಂಬಿದೆ. ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಮಾತ್ರವಲ್ಲದೆ, ಹಿಂದಿಯಲ್ಲೂ ಈ ಚಿತ್ರ ಹೊಸ ದಾಖಲೆ ಬರೆದು ಇತಿಹಾಸ ಸೃಷ್ಟಿ ಮಾಡಿತ್ತು. ಈ ಚಿತ್ರದ ಹೆಸರಲ್ಲಿ ಈಗಲೂ ಅನೇಕ ದಾಖಲೆಗಳು ಇವೆ. ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದರು. ಈ ಸಿನಿಮಾನ ಎಲ್ಲರೂ ಇಂದು ನೆನಪಿಸಿಕೊಳ್ಳುತ್ತಿದ್ದಾರೆ.

‘ಕೆಜಿಎಫ್’ ಸಿನಿಮಾ 2018ರಲ್ಲಿ ರಿಲೀಸ್ ಆಗಿ ಗೆದ್ದಿತ್ತು. ಇದಾದ 4 ವರ್ಷಗಳ ಬಳಿಕ ‘ಕೆಜಿಎಫ್ 2’ ರಿಲೀಸ್ ಆಯಿತು. 2022ರ ಏಪ್ರಿಲ್ 14ರಂದು ಕನ್ನಡದ ಜೊತೆಗೆ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಯಿತು. ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್‌ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್‌ ಅವರ ಕಲಾ ನಿರ್ದೇಶನ ಈ ಸಿನಿಮಾದ ಹೈಲೈಟ್ ಆಗಿತ್ತು. ಯಶ್ ಜೊತೆ ಬಾಲಿವುಡ್​ನ ಸಂಜಯ್ ದತ್, ರವೀನಾ ಟಂಡನ್ ನಟಿಸಿದ್ದರು. ಕನ್ನಡದ ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಮೊದಲಾದವರು ನಟಿಸಿದ್ದರು.

ಇದನ್ನೂ ಓದಿ
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ
Image
ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
Image
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  

‘ಕೆಜಿಎಫ್ 2’ ಚಿತ್ರದ ಒಟ್ಟಾರೆ ಗಳಿಕೆ 1,200 ಕೋಟಿ ರೂಪಾಯಿಗೂ ಅಧಿಕವಾಗಿದೆ. ಎರಡನೇ ಚಾಪ್ಟರ್ ಕೊನೆಯಲ್ಲಿ ಮೂರನೇ ಚಾಪ್ಟರ್ ಬಗ್ಗೆ ಅಪ್​ಡೇಟ್ ನೀಡಲಾಗಿತ್ತು. ಕಳೆದ ವರ್ಷ, ‘ಇನ್ನು ಕೆಲವೇ ತಿಂಗಳಲ್ಲಿ ಕೆಜಿಎಫ್​ನ ಮೂರನೇ ಚಾಪ್ಟರ್ ಬಗ್ಗೆ ಅಪ್​ಡೇಟ್ ನೀಡಲಾಗುವುದು’ ಎಂದು ಹೇಳಿತ್ತು. ಆದರೆ, ಈವರೆಗೆ ಸಿನಿಮಾ ಬಗ್ಗೆ ಅಪ್​​ಡೇಟ್ ಸಿಕ್ಕಿಲ್ಲ. ಹೀಗಾಗಿ, ಚಿತ್ರದ ಬಗ್ಗೆ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ಗೆ ಇದೆ ಒಂದು ಒಸಿಡಿ; ‘ಕೆಜಿಎಫ್ 2’ ನಿರ್ದೇಶಕ ಹೇಳಿದ್ದು ಏನು?

ಸದ್ಯ ಹೊಂಬಾಳೆ ಫಿಲ್ಮ್ಸ್ ಸೋಶಿಯಲ್ ಮೀಡಿಯಾದಲ್ಲಿ ‘ಕೆಜಿಎಫ್ 2’ ಚಿತ್ರದ ಗ್ಲಿಂಪ್ಸ್​ನ ಹಂಚಿಕೊಂಡಿದೆ. ಎಲ್ಲಿಯೂ ಅವರು ಮೂರನೇ ಪಾರ್ಟ್​ ಬಗ್ಗೆ ಮಾಹಿತಿ ನೀಡಿಲ್ಲ. ಈ ಬಗ್ಗೆ ಶೀಘ್ರವೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್