ಕನ್ನಡ ಚಿತ್ರದ ಹಿರಿಯ ನಟ ಕೃಷ್ಣ ಜಿ. ರಾವ್ (Krishna G Rao) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ (KGF 2) ಸಿನಿಮಾದಲ್ಲಿ ಅಂಧ ವೃದ್ಧನ ಪಾತ್ರ ಮಾಡಿ ಫೇಮಸ್ ಆಗಿರುವ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಚಿತ್ರಗಳ ಯಶಸ್ಸಿನ ಬಳಿಕ ಅವರಿಗೆ ಹಲವು ಆಫರ್ಗಳು ಬರಲು ಆರಂಭಿಸಿದವು. ಈಗ ಏಕಾಏಕಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣ ಜಿ. ರಾವ್ ಅವರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.