‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ

Raveena Tandon: ರಮಿಕಾ ಸೇನ್​ ಪಾತ್ರದಲ್ಲಿ ರವೀನಾ ಟಂಡನ್​ ಅವರು ಮಿಂಚುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ಜನರು ತೋರಿಸುತ್ತಿರುವ ಪ್ರೀತಿ ಕಂಡು ರವೀನಾ ಬೆರಗಾಗಿದ್ದಾರೆ.

‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ
ರವೀನಾ ಟಂಡನ್​, ಪ್ರಶಾಂತ್​ ನೀಲ್​
Follow us
TV9 Web
| Updated By: ಮದನ್​ ಕುಮಾರ್​

Updated on: Apr 20, 2022 | 7:59 AM

ಭಾರತೀಯ ಚಿತ್ರರಂಗದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ಈ ಸಿನಿಮಾದಲ್ಲಿ ನಟಿಸಿದ ಎಲ್ಲರಿಗೂ ಜನಪ್ರಿಯತೆ ಹೆಚ್ಚಿದೆ. ಎಲ್ಲ ಕಲಾವಿದರ ಪಾತ್ರಕ್ಕೆ ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಮಹತ್ವ ನೀಡಿದ್ದಾರೆ. ಅದರಲ್ಲೂ ಪ್ರಧಾನ ಮಂತ್ರಿ ರಮಿಕಾ ಸೇನ್​ (Ramika Sen) ಆಗಿ ಕಾಣಿಸಿಕೊಂಡಿರುವ ರವೀನಾ ಟಂಡನ್​ ಅವರ ಪಾತ್ರವನ್ನು ನೋಡಿ ಪ್ರೇಕ್ಷಕರು ಸಖತ್​ ಎಂಜಾಯ್​ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರವೀನಾ ಟಂಡನ್ (Raveena Tandon)​ ಅವರಿಗೆ ಇದು ಎರಡನೇ ಸಿನಿಮಾ. ಈ ಮೊದಲು ‘ಉಪೇಂದ್ರ’ ಚಿತ್ರದಲ್ಲಿ ನಟಿಸಿದ್ದಾಗಲೂ ಅವರಿಗೆ ಇದೇ ರೀತಿಯ ಗೆಲುವು ಸಿಕ್ಕಿತ್ತು. ಈಗ ಎರಡನೇ ಬಾರಿಗೆ ಅವರು ಕನ್ನಡ ಸಿನಿಮಾ ಮೂಲಕ ತಮ್ಮ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ‘ಕೆಜಿಎಫ್​ 2’ ಸಿನಿಮಾಗೆ ಜನರಿಂದ ಯಾವ ಪರಿ ಪ್ರೀತಿ ಸಿಗುತ್ತಿದೆ ಎಂಬುದನ್ನು ವಿವರಿಸಲು ಅವರೊಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ರವೀನಾ ಟಂಡನ್​ ಫ್ಯಾನ್ಸ್​ ವಲಯದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದೆ.

‘ಕೆಜಿಎಫ್​ 2’ ಸಿನಿಮಾ ಹಿಂದಿಗೂ ಡಬ್​ ಆಗಿ ತೆರೆಕಂಡಿದ್ದು, ಉತ್ತರ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾಸ್​ ಪ್ರೇಕ್ಷಕರು ಮುಗಿಬಿದ್ದು ಸಿನಿಮಾವನ್ನು ನೋಡುತ್ತಿದ್ದಾರೆ. ರವೀನಾ ಟಂಡನ್​ ಅವರ ಪಾತ್ರ ತೆರೆ ಮೇಲೆ ಬಂದಾಗ ಅವರ ಫ್ಯಾನ್ಸ್​ ಹುಚ್ಚೆದ್ದು ಕುಣಿದಿದ್ದಾರೆ. ಅಷ್ಟೇ ಅಲ್ಲ, ಕೆಲವರು ಥಿಯೇಟರ್​ ಪರದೆಗೆ ದುಡ್ಡು ಎಸೆದಿದ್ದಾರೆ. ಅಭಿಮಾನಿಗಳು ನಾಣ್ಯಗಳನ್ನು ಎಸೆಯುತ್ತಿರುವ ವಿಡಿಯೋವನ್ನು ರವೀನಾ ಟಂಡನ್​ ಶೇರ್​ ಮಾಡಿಕೊಂಡಿದ್ದಾರೆ.

‘ತುಂಬ ಸಮಯದ ಬಳಿಕ ಜನರು ನಾಣ್ಯ ಎಸೆಯುವುದನ್ನು ನೋಡುತ್ತಿದ್ದೇನೆ’ ಎಂದು ಅವರು ಈ ವಿಡಿಯೋಗೆ ಕ್ಯಾಪ್ಷನ್​ ನೀಡಿದ್ದಾರೆ. ರವೀನಾ ಟಂಡನ್​ ಹಂಚಿಕೊಂಡಿರುವ ವಿಡಿಯೋದಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಮೇಕಿಂಗ್​ ತುಣುಕುಗಳು ಕೂಡ ಇವೆ. ಕೊನೇ ದಿನ, ಕೊನೆಯ ಶಾಟ್​ ಚಿತ್ರೀಕರಿಸುವಾಗ ಪ್ರಶಾಂತ್​ ನೀಲ್​ ಮತ್ತು ಇತರೆ ತಂತ್ರಜ್ಞರ ಜೊತೆ ಶೂಟಿಂಗ್​ ಸೆಟ್​ನಲ್ಲಿ ಯಾವ ರೀತಿಯ ಬಾಂಧವ್ಯ ಇತ್ತು ಎಂಬುದನ್ನು ಅವರು ಈ ವಿಡಿಯೋ ಮೂಲಕ ವಿವರಿಸಿದ್ದಾರೆ. ಈ ಸಿನಿಮಾದಿಂದ ರವೀನಾ ಟಂಡನ್​ ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ಅವರ ವೃತ್ತಿಜೀವನದ ಮೈಲೇಜ್​ ಹೆಚ್ಚಿದೆ.

ಈ ವಿಡಿಯೋ ನೋಡಿದ ಅಭಿಮಾನಿಗಳು ಅನೇಕ ಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ನೀವು ಕೆಜಿಎಫ್​ ಮೊದಲ ಪಾರ್ಟ್​ನಲ್ಲಿಯೂ ಇರಬೇಕಿತ್ತು’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ‘ಕೆಜಿಎಫ್ 3’ ಕೂಡ ಬರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಹಾಗಾಗಿ ಮತ್ತೆ ರವೀನಾ ಟಂಡನ್​ ಅವರನ್ನು ಅದೇ ಅವತಾರದಲ್ಲಿ ನೋಡುವ ಅವಕಾಶ ಸಿಗುತ್ತದೆ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ ನಟ ಸಂಜಯ್ ದತ್​ ಕೂಡ ನಟಿಸಿದ್ದು, ಅವರಿಗೂ ಪ್ರೇಕ್ಷಕರಿಂದ ಇಷ್ಟೇ ಪ್ರಮಾಣದ ಪ್ರೀತಿ ಸಿಗುತ್ತಿದೆ.

ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಮೋಡಿ ಮಾಡುತ್ತಿದೆ. ಐದು ದಿನಕ್ಕೆ 219 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. 6 ಮತ್ತು 7ನೇ ದಿನ ಕೂಡ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ.

ಇದನ್ನೂ ಓದಿ:

KGF 2 Collection: ಸೋಮವಾರದ ಪರೀಕ್ಷೆಯಲ್ಲಿ ‘ಕೆಜಿಎಫ್​ 2’ ಪಾಸ್; ಹಿಂದಿ ಮಾರುಕಟ್ಟೆಯಲ್ಲಿ 5 ದಿನಕ್ಕೆ 219.56 ಕೋಟಿ ರೂ. ಕಲೆಕ್ಷನ್​

ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್