ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?

KGF Chapter 2 Box Office Prediction: ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಹಾಗಾಗಿ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ಸುನಾಮಿ ಸೃಷ್ಟಿ ಮಾಡಲಿದೆ ‘ಕೆಜಿಎಫ್​: ಚಾಪ್ಟರ್ 2’ ಚಿತ್ರ: ಮೊದಲ ದಿನ ಆಗುವ ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು?
ಯಶ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 13, 2022 | 9:53 AM

ಕೊರೊನಾದಿಂದಾಗಿ ಕಂಗೆಟ್ಟಿದ್ದ ಚಿತ್ರರಂಗ ಈಗ ಚೇತರಿಸಿಕೊಂಡಿದೆ. ಬಣ್ಣದ ಲೋಕದ ವಹಿವಾಟಿಗೆ ಚೇತರಿಕೆ ನೀಡುವಲ್ಲಿ ಈಗಾಗಲೇ ಕೆಲವು ಚಿತ್ರಗಳು ಯಶಸ್ವಿ ಆಗಿವೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳು ಭರ್ಜರಿ ಕಲೆಕ್ಷನ್​ ಮಾಡುವ ಮೂಲಕ ಚಿತ್ರರಂಗಕ್ಕೆ ಬೂಸ್ಟ್​ ನೀಡಿವೆ. ಈಗ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಹೊಸ ಭರವಸೆ ಮೂಡಿಸಿದೆ.​ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಮೊದಲ ದಿನವೇ ಹಲವು ದಾಖಲೆಗಳನ್ನು ಬರೆಯುವ ಸೂಚನೆ ನೀಡುತ್ತಿದೆ. ‘ಕೆಜಿಎಫ್​ 2’ ಬಾಕ್ಸ್​ ಆಫೀಸ್​ ಕಲೆಕ್ಷನ್​ (KGF Chapter 2 Collection) ಬಗ್ಗೆ ಜನರಲ್ಲಿ ಈಗಾಗಲೇ ಭಾರಿ ಕುತೂಹಲ ನಿರ್ಮಾಣ ಆಗಿದೆ. ದೇಶಾದ್ಯಂತ ಸಾವಿರಾರು ಚಿತ್ರಮಂದಿಗಳು ಈ ಸಿನಿಮಾಗಾಗಿ ಮೀಸಲಾಗಿವೆ. ಯಶ್​ (Yash) ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಮೊದಲ ದಿನ ಎಷ್ಟು ಗಳಿಕೆ ಮಾಡಬಹುದು ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ವ್ಯವಹಾರ ಬಲ್ಲವರ ಅಂದಾಜಿನ ಪ್ರಕಾರ ಈ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಸುನಾಮಿಯನ್ನೇ ಸೃಷ್ಟಿ ಮಾಡಲಿದೆ. ಕೊರೊನಾ ಬಳಿಕ ಯಾವ ಚಿತ್ರವೂ ಮಾಡಿರದ ದಾಖಲೆಯನ್ನು ‘ಕೆಜಿಎಫ್ 2’ ಮಾಡಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಸಖತ್​ ಹೈಪ್​ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡಿದೆ. ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಇನ್ನೂ ಕೂಡ ಟಿಕೆಟ್​ ಬುಕಿಂಗ್ ಜೋರಾಗಿ ನಡೆಯುತ್ತಿದೆ. ಅದರ ಆಧಾರದಲ್ಲಿ ಹೇಳುವುದಾದರೆ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್​’ ಸಿನಿಮಾದಿಂದ ‘ಕೆಜಿಎಫ್​ 2’ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಈ ಮೊದಲು ಊಹಿಸಲಾಗಿತ್ತು. ಆದರೆ ‘ಬೀಸ್ಟ್​’ ಚಿತ್ರದ ಬಗ್ಗೆ ನೆಗೆಟಿವ್​ ವಿಮರ್ಶೆ ಕೇಳಿಬಂದಿರುವುದರಿಂದ ಜನರು ಆ ಸಿನಿಮಾ ನೋಡಲು ಹಿಂದೇಟು ಹಾಕುವ ಸಾಧ್ಯತೆ ಇದೆ. ಇದರಿಂದ ‘ಕೆಜಿಎಫ್​ 2’ಗೆ ಪ್ಲಸ್​ ಪಾಯಿಂಟ್​ ಆಗಲಿದೆ. ಅತ್ತ ಬಾಲಿವುಡ್​ನಲ್ಲಿ ಶಾಹಿದ್​ ಕಪೂರ್​ ನಟನೆಯ ‘ಜೆರ್ಸಿ’ ಸಿನಿಮಾ ಕೊನೇ ಗಳಿಗೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಿಕೊಂಡಿದೆ. ಇದರಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಹೆಚ್ಚು ಚಿತ್ರಮಂದಿರಗಳು ಸಿಗಲಿವೆ. ಈ ಕಾರಣದಿಂದ ಚಿತ್ರದ ಕಲೆಕ್ಷನ್​ ಹೆಚ್ಚಲಿದೆ. ಒಟ್ಟಿನಲ್ಲಿ ಈ ಸಿನಿಮಾ ಮೊದಲ ದಿನವೇ ರೆಕಾರ್ಡ್​ ಸೃಷ್ಟಿ ಮಾಡುವುದು ಖಚಿತ.

ಕೊರೊನಾ ಹಾವಳಿ ಕಡಿಮೆ ಆಗಿರುವುದರಿಂದ ಜನರು ಯಾವುದೇ ಭಯವಿಲ್ಲದೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಒಟಿಟಿ ಮತ್ತು ಕಿರುತೆರೆಯಲ್ಲಿ ನಾನಾ ಬಗೆಯ ಮನರಂಜನಾ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದರೂ ಕೂಡ ಥಿಯೇಟರ್​ಗೆ ಬಂದು ಸಿನಿಮಾ ನೋಡಿ ಎಂಜಾಯ್​ ಮಾಡುವವಲ್ಲಿ ಪ್ರೇಕ್ಷಕರು ಹಿಂದೆ ಬೀಳುತ್ತಿಲ್ಲ. ಒಳ್ಳೆಯ ಸಿನಿಮಾ ತೆರೆಕಂಡರೆ ಜನರು ಖಂಡಿತವಾಗಿಯೂ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದು ಈಗಾಗಲೇ ಸಾಬೀತಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ಆರ್​ಆರ್​ಆರ್​’, ‘ಪುಷ್ಪ’, ‘ಸೂರ್ಯವಂಶಿ’ ಸಿನಿಮಾಗಳಿಗಿಂತಲೂ ಹೆಚ್ಚಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕಲೆಕ್ಷನ್​ ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ವಿಜಯ್​ ಕಿರಗಂದೂರು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಂಜಯ್​ ದತ್​, ರವೀನಾ ಟಂಡನ್​ ಕೂಡ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

ಆನ್​ಲೈನ್ ಟಿಕೆಟ್​ ಬುಕಿಂಗ್​ನಲ್ಲಿ ಧೂಳೆಬ್ಬಿಸಿದ ‘ಕೆಜಿಎಫ್​: ಚಾಪ್ಟರ್​ 2’; ಹಲವು ಶೋಗಳು ಸೋಲ್ಡ್​ಔಟ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ