‘ರಾಕಿಂಗ್ ಸ್ಟಾರ್’ ಯಶ್ (Yash) ಬಗ್ಗೆ ಇಡೀ ದೇಶವೇ ಮಾತನಾಡುತ್ತಿದೆ. ಅವರ ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಪಡೆಯಲು ಬಾಲಿವುಡ್ ಮಂದಿ ಕೂಡ ಕಾದು ಕೂತಿದ್ದಾರೆ. ಆಗಸ್ಟ್ 31ರಂದು ಗಣೇಶ ಚತುರ್ಥಿ (Ganesh Chaturthi). ಈ ಸಮಯದಲ್ಲಿ ಯಶ್ ಹೊಸ ಸಿನಿಮಾ ಬಗ್ಗೆ ಏನಾದರೂ ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಹೀಗಿರುವಾಗಲೇ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
‘ಕೆಜಿಎಫ್’ ಸಿನಿಮಾದಲ್ಲಿ ರಾಕಿ ಬಾಲ್ಯದಲ್ಲಿ ಸಾಕಷ್ಟು ಕಷ್ಟಪಡುತ್ತಾನೆ. ಎತ್ತರಕ್ಕೆ ಬೆಳೆಯಬೇಕು ಎಂದು ಕನಸು ಕಾಣುತ್ತಾನೆ. ಯಶ್ ಜೀವನಕ್ಕೂ ರಾಕಿ ಪಾತ್ರಕ್ಕೂ ಒಂದು ನಂಟು ಇದೆ. ಯಶ್ ಕೂಡ ಚಿಕ್ಕ ವಯಸ್ಸಿನಲ್ಲಿ ಸಾಕಷ್ಟು ಕಷ್ಟಪಟ್ಟಿದ್ದರು. ನಂತರ ರಾತ್ರೋರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ಬಂದರು. ಧಾರಾವಾಹಿಗಳಲ್ಲಿ ನಟಿಸಿ, ನಂತರ ಬೆಳ್ಳಿ ಪರದೆಯಲ್ಲಿ ಗುರುತಿಸಿಕೊಂಡರು. ಈಗ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
ಯಶ್ ಅವರ ಬಾಲ್ಯದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರು ಪ್ರಶಸ್ತಿ ಸ್ವೀಕರಿಸುತ್ತಿರುವ ಫೋಟೋ ಇದಾಗಿದೆ. ಈ ಚಿತ್ರಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಆಗಲೇ ಹಾಗೆ, ಇನ್ನು ಈಗ ಕೇಳ್ಬೇಕಾ?’ ಎಂದು ಯಶ್ ಬಗ್ಗೆ ಫ್ಯಾನ್ಸ್ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಯಶ್ ಫ್ಯಾನ್ ಪೇಜ್ಗಳಲ್ಲೂ ಈ ಫೋಟೋ ವೈರಲ್ ಆಗಿದೆ.
Any Guess ?? pic.twitter.com/rbEuReXffB
— RVCJ Kannada (@RVCJKannada) August 30, 2022
ಇದನ್ನೂ ಓದಿ: Yash: ಬಾಲಿವುಡ್ನಲ್ಲಿ ನಂಬರ್ ಒನ್ ಹೀರೋ ಪಟ್ಟ ಗಿಟ್ಟಿಸಿಕೊಂಡ ಯಶ್
ಯಶ್ ಅವರ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ 1250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅವರ 19ನೇ ಸಿನಿಮಾ ಯಾವಾಗ ಘೋಷಣೆ ಆಗಲಿದೆ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ನರ್ತನ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ ಎಂದು ಕೂಡ ಹೇಳಲಾಗಿತ್ತು. ಆದರೆ, ಈಗ ಅವರು ತಮಿಳು ನಿರ್ದೇಶಕ ಶಂಕರ್ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.