AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?

Srinidhi Shetty Remuneration: ಬಹುಬೇಡಿಕೆಯ ನಟಿಯರ ಪಟ್ಟಿಯಲ್ಲಿ ಶ್ರೀನಿಧಿ ಶೆಟ್ಟಿ ಹೆಸರು ಕೂಡ ಇದೆ. ಹಾಗಾಗಿ ಅವರು ದೊಡ್ಡ ಮೊತ್ತದ ಸಂಭಾವನೆಯನ್ನೇ ಕೇಳುತ್ತಿದ್ದಾರೆ.

‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
ಶ್ರೀನಿಧಿ ಶೆಟ್ಟಿ
TV9 Web
| Edited By: |

Updated on:May 30, 2022 | 7:58 AM

Share

ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಿಂದ ಅನೇಕರ ಬದುಕು ಬದಲಾಗಿದೆ. ನಟ ಯಶ್​ ಅವರಿಗೆ ಈ ಚಿತ್ರದಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಇಮೇಜ್​ ಸಿಕ್ಕಿದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಕೂಡ ಬಹುಬೇಡಿಕೆ ಡೈರೆಕ್ಟರ್​ ಆಗಿ ಗುರುತಿಸಿಕೊಂಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಸಿಕ್ಕಿದೆ. ಅದೇ ರೀತಿ ರಾಕಿ ಭಾಯ್​​ಗೆ ಜೋಡಿಯಾಗಿ ನಟಿಸಿದ ಶ್ರೀನಿಧಿ ಶೆಟ್ಟಿ (Srinidhi Shetty) ಕೂಡ ತುಂಬ ಪ್ರಸಿದ್ಧಿ ಪಡೆದಿದ್ದಾರೆ. ಈ ‘ಕೆಜಿಎಫ್​ 2’ ಚಿತ್ರಕ್ಕಾಗಿ ಅವರು ಹಲವು ವರ್ಷಗಳ ಸಮಯ ಮೀಸಲಿಟ್ಟಿದ್ದರು. ಆ ಪರಿ ಬದ್ಧತೆ ತೋರಿಸಿದ್ದರ ಫಲವಾಗಿ ಅವರಿಗೆ ದೊಡ್ಡ ಸಕ್ಸಸ್​ ಸಿಕ್ಕಿದೆ. ಅದರ ಪರಿಣಾಮದಿಂದ ಅವರಿಗೆ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಶ್ರೀನಿಧಿ ಶೆಟ್ಟಿ ಸಂಭಾವನೆ (Srinidhi Shetty Remuneration) ಹೆಚ್ಚಿಸಿಕೊಂಡಿದ್ದಾರೆ ಎಂಬ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಅವರು ಬರೋಬ್ಬರಿ 2 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇಷ್ಟು ದೊಡ್ಡ ಮೊತ್ತ ಕೇಳಿದ್ದಕ್ಕಾಗಿ ನಿರ್ಮಾಪಕರು ಸುಸ್ತ್​ ಆಗಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಶ್ರೀನಿಧಿ ಶೆಟ್ಟಿ ಅವರಿಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿದ್ರೂ ಕೂಡ ಅವರು ಈವರೆಗೆ ನಟಿಸಿರುವುದು ಒಂದು ಎರಡು ಸಿನಿಮಾದಲ್ಲಿ ಮಾತ್ರ. ಬೇರೆ ನಟಿಯರಿಗೆ ಹೋಲಿಸಿದರೆ ಚಿತ್ರರಂಗದಲ್ಲಿ ಅವರಿಗೆ ಇರುವ ಅನುಭವ ಕಡಿಮೆ. ಅದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಲೆಕ್ಕಾಚಾರ ಹಾಕಿದ ಟಾಲಿವುಡ್​ ನಿರ್ಮಾಪಕರು 2 ಕೋಟಿ ರೂಪಾಯಿ ಸಂಭಾವನೆ ತುಸು ಜಾಸ್ತಿ ಆಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರಂತೆ.

ಇದನ್ನೂ ಓದಿ: Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ

ಇದನ್ನೂ ಓದಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

ಅಂತಿಮವಾಗಿ ಶ್ರೀನಿಧಿ ಶೆಟ್ಟಿ ಎಷ್ಟು ಪಡೆಯಲಿದ್ದಾರೆ? ಮುಂಬರುವ ದಿನಗಳಲ್ಲಿ ಅವರು ಒಪ್ಪಿಕೊಳ್ಳುವ ಸಿನಿಮಾಗಳು ಹೇಗಿರಲಿವೆ? ಈ ಎಲ್ಲ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಸದ್ಯ ಅವರು ಕಾಲಿವುಡ್​ ನಟ ವಿಕ್ರಮ್​ ಜೊತೆ ಅಭಿನಯಿಸಿರುವ ‘ಕೋಬ್ರಾ’ ಸಿನಿಮಾ ಮೇಲೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Srinidhi Shetty: ಹಳದಿ ಉಡುಗೆಯಲ್ಲಿ ಗಮನ ಸೆಳೆದ ‘ಕೆಜಿಎಫ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ ಅವರ ಸಂಭಾವನೆ ಕುರಿತು ಹರಿದಾಡುತ್ತಿರುವುದೆಲ್ಲ ಅಂತೆ-ಕಂತೆಗಳು ಮಾತ್ರ. ಯಾರೂ ಈವರೆಗೆ ಇದರ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇನ್ನು, ಶ್ರೀನಿಧಿ ಶೆಟ್ಟಿ ರೀತಿಯೇ ಬಾಲಿವುಡ್​ ನಟಿ ಮಾನುಷಿ ಚಿಲ್ಲರ್​ ಅವರು ಕೂಡ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅಕ್ಷಯ್​ ಕುಮಾರ್​ ಜೊತೆಗೆ ಅವರು ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಮಾಜಿ ಮಿಸ್​ ವರ್ಲ್ಡ್​ ಎಂಬ ಖ್ಯಾತಿ ಕೂಡ ಅವರಿಗೆ ಇದೆ. ಅವರಿಗೂ ಟಾಲಿವುಡ್​ನಿಂದ ಅನೇಕ ಆಫರ್​ಗಳು ಬರುತ್ತಿವೆ. ಅವರು ಬರೋಬ್ಬರಿ 2.5 ಕೋಟಿ ರೂಪಾಯಿ ಸಂಭಾವನೆ ನಿರೀಕ್ಷಿಸುತ್ತಾರೆ ಎಂಬ ಬಗ್ಗೆಯೂ ಕೆಲವೆಡೆ ವರದಿ ಪ್ರಕಟ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Mon, 30 May 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್