AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25ನೇ ದಿನಕ್ಕೆ ಹೊಸ ದಾಖಲೆ ಬರೆದ ‘ಕೆಜಿಎಫ್ 2’ ಸಿನಿಮಾ; ಕಲೆಕ್ಷನ್ ವಿಚಾರದಲ್ಲಿ ‘ಆರ್​ಆರ್​ಆರ್​’ ದಾಖಲೆ ಉಡೀಸ್

ಮೊದಲ ಚಾಪ್ಟರ್ ನೋಡಿ ಪ್ರಶಾಂತ್ ನೀಲ್ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ ಎರಡನೇ ಚಾಪ್ಟರ್ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿತ್ತು. ಅದೇ ರೀತಿ ಬಾಲಿವುಡ್​ನಲ್ಲಿ ಸಿನಿಮಾ 412 ಕೋಟಿ ರೂಪಾಯಿ ಬಾಚಿಕೊಂಡಿದೆ.

25ನೇ ದಿನಕ್ಕೆ ಹೊಸ ದಾಖಲೆ ಬರೆದ ‘ಕೆಜಿಎಫ್ 2’ ಸಿನಿಮಾ; ಕಲೆಕ್ಷನ್ ವಿಚಾರದಲ್ಲಿ ‘ಆರ್​ಆರ್​ಆರ್​’ ದಾಖಲೆ ಉಡೀಸ್
ಯಶ್
TV9 Web
| Edited By: |

Updated on:May 09, 2022 | 6:38 PM

Share

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ (KGF:Chapter 2) ವಿಶ್ವ ಮಟ್ಟದಲ್ಲಿ ಧೂಳೆಬ್ಬಿಸಿದೆ. ಐದು ಭಾಷೆಗಳಲ್ಲಿ ರಿಲೀಸ್ ಆದ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಬಾಲಿವುಡ್​ ಚಿತ್ರಗಳೇ ಹಣ ಗಳಿಸಲು ಒದ್ದಾಡುತ್ತಿರುವ ಈ ಕಾಲದಲ್ಲಿ ಕನ್ನಡದ ಸಿನಿಮಾ ‘ಕೆಜಿಎಫ್ 2’ ಗೆದ್ದು ಬೀಗಿದೆ. ಈ ಸಿನಿಮಾ ಏಪ್ರಿಲ್​ 8ಕ್ಕೆ 25ನೇ ದಿನ ಪೂರೈಸಿದೆ. ಆದಾಗ್ಯೂ ಬಾಲಿವುಡ್​ನಲ್ಲಿ ಸಿನಿಮಾದ ಕಲೆಕ್ಷನ್ ತಗ್ಗುತ್ತಿಲ್ಲ. ‘ಕೆಜಿಎಫ್ 2’ ಸಿನಿಮಾ 25ನೇ ದಿನಕ್ಕೆ ಬಾಲಿವುಡ್​ನಲ್ಲಿ ಬರೋಬ್ಬರಿ 412 ಕೋಟಿ ರೂಪಾಯಿ ಗಳಿಸಿದೆ. ವಿಶ್ವ ಮಟ್ಟದ ಕಲೆಕ್ಷನ್​ನಲ್ಲಿ ಈ ಸಿನಿಮಾ ರಾಜಮೌಳಿ (Rajamouli) ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾವನ್ನು (RRR Movie) ಹಿಂದಿಕ್ಕಿದೆ.

‘ಕೆಜಿಎಫ್ 2’ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬಂತು. ಬಾಲಿವುಡ್​ನಲ್ಲಿ ‘ಕೆಜಿಎಫ್ 1’ ಸಿನಿಮಾದ ಲೈಫ್​ಟೈಮ್ ಕಲೆಕ್ಷನ್​ 44 ಕೋಟಿ ರೂಪಾಯಿ ಆಗಿತ್ತು. ಮೊದಲ ಚಾಪ್ಟರ್ ನೋಡಿ ಪ್ರಶಾಂತ್ ನೀಲ್ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ ಎರಡನೇ ಚಾಪ್ಟರ್ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿತ್ತು. ಅದೇ ರೀತಿ ಬಾಲಿವುಡ್​ನಲ್ಲಿ ಸಿನಿಮಾ 412 ಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ
Image
‘ಪೃಥ್ವಿರಾಜ್’ ಟ್ರೇಲರ್​ನಲ್ಲಿ ಮಿಂಚಿದ ಅಕ್ಷಯ್​ ಕುಮಾರ್; ಈ ಸಿನಿಮಾದಿಂದ ಚೇತರಿಸಿಕೊಳ್ಳಲಿದೆಯೇ ಬಾಲಿವುಡ್​?
Image
ಮಣ್ಣಲ್ಲಿ ಮಣ್ಣಾದ ಮೋಹನ್​ ಜುನೇಜ; ಇಲ್ಲಿದೆ ಅಂತ್ಯಕ್ರಿಯೆ ವಿಡಿಯೋ
Image
ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ

ಈ ಸಿನಿಮಾ ಬಾಲಿವುಡ್​ನಲ್ಲಿ ಕಳೆದ ಶನಿವಾರ (ಮೇ 7) 4.75 ಕೋಟಿ ರೂಪಾಯಿ ಹಾಗೂ ಭಾನುವಾರ (ಮೇ 8) 6.25 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ‘ಕೆಜಿಎಫ್ 2’ ಕ್ರೇಜ್​ ಕಡಿಮೆ ಆಗಿಲ್ಲ ಎನ್ನುವುದಕ್ಕೆ ಸಾಕ್ಷಿ. ಇಂದು (ಮೇ 9) ಸಿನಿಮಾದ ಕಲೆಕ್ಷನ್ ಎಷ್ಟಾಗಲಿದೆ ಎಂಬುದು ಸದ್ಯದ ಕುತೂಹಲ.

ಕಳೆದ ವಾರ ಈದ್ ಹಬ್ಬ ಇತ್ತು. ಇದು ‘ಕೆಜಿಎಫ್ 2’ ಚಿತ್ರಕ್ಕೆ ಸಹಕಾರಿಯಾಗಿದೆ. ವಿಶ್ವದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ 1129.38 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ‘ಆರ್​ಆರ್​ಆರ್’ ಚಿತ್ರದ (1127.65 ಕೋಟಿ ರೂಪಾಯಿ) ಕಲೆಕ್ಷನ್ ಹಿಂದಿಕ್ಕಿದೆ. ಅತಿ ಹೆಚ್ಚು ಗಳಿಕೆ ಮಾಡಿದ ಭಾರತದ ಮೂರನೇ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾಗೆ ಬಂಡವಾಳ ಹೂಡಿದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಭರಪೂರ ಲಾಭ ಆಗಿದೆ.

ರವಿ ಬಸ್ರೂರು ಅವರ ಸಂಗೀತ, ಭುವನ್​ ಗೌಡ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ, ಯಶ್​ ಮ್ಯಾನರಿಸಂ, ಎಲ್ಲ ಕಲಾವಿದರ ನಟನೆ, ತಾಯಿ ಸೆಂಟಿಮೆಂಟ್​, ಮೈ ನವಿರೇಳಿಸುವ ಆ್ಯಕ್ಷನ್​ ಸನ್ನಿವೇಶ, ಸರಿಸಾಟಿ ಇಲ್ಲದ ಮೇಕಿಂಗ್​, ಬೃಹತ್​ ಸೆಟ್​ಗಳು ಸೇರಿದಂತೆ ಅನೇಕ ಅಂಶಗಳನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಎಲ್ಲದರ ಪರಿಣಾಮವಾಗಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಯಭೇರಿ ಬಾರಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ .

Published On - 6:33 pm, Mon, 9 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್