KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Yash: ಜುಲೈ 16. ಈ ದಿನಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿದೆ. ಈ ದಿನದಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ.

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು
ಯಶ್
Follow us
TV9 Web
| Updated By: Digi Tech Desk

Updated on:Jun 23, 2021 | 7:45 PM

 ಜುಲೈ 16ಕ್ಕಾಗಿ ಕನ್ನಡ ಸಿನಿಪ್ರಿಯರು ಮಾತ್ರವಲ್ಲ, ಇಡೀ ದೇಶವೇ ಕಾಯುತ್ತಿತ್ತು. ಆ ದಿನ ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ಕಾಂಬಿನೇಷನ್​ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತವಾಗಿದೆ. ಹೀಗಿರುವಾಗಲ ಸಿನಿಮಾದ ಹೊಸ ರಿಲೀಸ್​ ದಿನಾಂಕದ ಬಗ್ಗೆ ಊಹಾಪೋಹಗಳು ಹರಿದಾಡಿವೆ.  

ಜುಲೈ 16ರಂದು ನಟ ಯಶ್​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಕೆಜಿಎಫ್​ 2 ತೆರೆಗೆ ಬರುತ್ತಿದೆ. ಚಿತ್ರತಂಡ ಈಗಾಗಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಆದರೆ, ಇನ್ನು, ಕೆಲವೇ ದಿನಗಳು ಬಾಕಿ ಇದ್ದು, ಚಿತ್ರಮಂದಿರಗಳು ಓಪನ್​ ಆಗಿಲ್ಲ.

ಕೆಜಿಎಫ್​-2 ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಅಲ್ಲದೆ, ಇದರ ಮೇಲೆ ನಿರೀಕ್ಷೆ ಕೂಡ ಹೆಚ್ಚಿದೆ. ಹೀಗಾಗಿ, ಈ ಕೆಜಿಎಫ್​ 2 ನಿರ್ಮಾಪಕರು ತರಾತುರಿಯಲ್ಲಿ ಸಿನಿಮಾ ರಿಲೀಸ್​ ಮಾಡುವ ನಿರ್ಧಾರಕ್ಕೆ ಬರುವುದಿಲ್ಲ. ನೇರವಾಗಿ ಒಟಿಟಿಯಲ್ಲಿ ಚಿತ್ರ ರಿಲೀಸ್​ ಮಾಡುವ ಸಾಧ್ಯತೆ ಕೂಡ ಕಡಿಮೆಯೇ. ಕೊನೆಯದಾಗಿ ಉಳಿದುಕೊಂಡಿರುವ ಆಯ್ಕೆ ಎಂದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದು. ಈಗ ಚಿತ್ರತಂಡ ಅದನ್ನೇ ಮಾಡಿದ್ದು, ಸೆಪ್ಟೆಂಬರ್ 9ರಂದು ಸಿನಿಮಾ ತೆರೆಗೆ ಬರಲಿದೆ ಎನ್ನುವ ಮಾತು ಹರಿದಾಡಿದೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಕೆಜಿಎಫ್​ 2ನಲ್ಲಿ ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 6:14 pm, Wed, 23 June 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ