AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಟಿಕೆಟ್​ ಬುಕಿಂಗ್​ನಲ್ಲಿ ಧೂಳೆಬ್ಬಿಸಿದ ‘ಕೆಜಿಎಫ್​: ಚಾಪ್ಟರ್​ 2’; ಹಲವು ಶೋಗಳು ಸೋಲ್ಡ್​ಔಟ್​

ಈಗಾಗಲೇ ಟ್ರೇಲರ್ ಮೂಲಕ ಸಿನಿಮಾದ ಝಲಕ್ ಸಿಕ್ಕಿದೆ. ಈ ಕಾರಣಕ್ಕೆ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಾಗಿ, ಜನರು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

ಆನ್​ಲೈನ್ ಟಿಕೆಟ್​ ಬುಕಿಂಗ್​ನಲ್ಲಿ ಧೂಳೆಬ್ಬಿಸಿದ ‘ಕೆಜಿಎಫ್​: ಚಾಪ್ಟರ್​ 2’; ಹಲವು ಶೋಗಳು ಸೋಲ್ಡ್​ಔಟ್​
ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 10, 2022 | 1:33 PM

Share

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ (KGF Chapter 2) ತೂಫಾನ್ ರೀತಿಯಲ್ಲಿ ಬರೋಕೆ ರೆಡಿ ಆಗಿದೆ. ಈ ಸಿನಿಮಾದ ಅಬ್ಬರ ಎಷ್ಟಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಇದಕ್ಕೆ ಈಗ ಹೊಸ ಉದಾಹರಣೆ ಸಿಕ್ಕಿದೆ. ಆನ್​ಲೈನ್​​ನಲ್ಲಿ​‘ಕೆಜಿಎಫ್​: ಚಾಪ್ಟರ್​ 2’ನ ಟಿಕೆಟ್ ಬುಕಿಂಗ್ (KGF Chapter 2 Ticket Booking) ಆರಂಭಗೊಂಡಿದೆ. ಮುಂಜಾನೆ 3 ಗಂಟೆಯಿಂದಲೇ ಶೋಗಳು ಪ್ರದರ್ಶನ ಕಾಣುತ್ತಿವೆ. ಈ ಶೋಗಳ ಟಿಕೆಟ್​ಗಳು ಶರವೇಗದಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ, ಅನೇಕ ಶೋಗಳ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ. ಸದ್ಯ, ಕೆಲವೇ ಶೋಗಳನ್ನು ಮಾತ್ರ ಬಿಡಲಾಗಿದೆ. ಸಿನಿಮಾ ರಿಲೀಸ್​ಗೆ ಇನ್ನೂ ಕೆಲ ದಿನಗಳು ಬಾಕಿ ಇದ್ದು, ಆ ವೇಳೆಗೆ ಮತ್ತೊಂದಷ್ಟು ಹೊಸ ಥಿಯೇಟರ್​ಗಳು ಆ್ಯಡ್​ ಆಗಲಿದೆ.

ಏಪ್ರಿಲ್​ 14ರಂದು ‘ಕೆಜಿಎಫ್ 2’ ಸಿನಿಮಾ ತೆರೆಗೆ ಬರುತ್ತಿದೆ. ಯಶ್ ಹೀರೋ ಆಗಿ ನಟಿಸಿರುವ ಈ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್​ನ ಸ್ಟಾರ್​ ನಟ ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಕಂಬ್ಯಾಕ್ ಮಾಡುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್ ಅವರು ರಾಜಕಾರಣಿಯ ಪಾತ್ರ ಮಾಡಿದ್ದಾರೆ. ಇನ್ನು, ಈಗಾಗಲೇ ಟ್ರೇಲರ್ ಮೂಲಕ ಸಿನಿಮಾದ ಝಲಕ್ ಸಿಕ್ಕಿದೆ. ಚಿತ್ರಕ್ಕೆ ಉತ್ತಮ ಪ್ರಚಾರ ನೀಡಲಾಗುತ್ತಿದೆ. ಈ ಕಾರಣಕ್ಕೆ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಾಗಿ, ಜನರು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

‘ಕೆಜಿಎಫ್​ 2’ ಸಿನಿಮಾದ ಪ್ರೀ ಬುಕಿಂಗ್ ಇಂದಿನಿಂದ (ಏಪ್ರಿಲ್​ 10) ಆರಂಭ ಆಗಿದೆ. ಬೆಂಗಳೂರಿನಲ್ಲಿ ಈ ಚಿತ್ರಕ್ಕೆ ಈಗಾಗಲೇ ನೂರಾರು ಶೋಗಳು ಸಿಕ್ಕಿವೆ. ಟಿಕೆಟ್ ಬುಕಿಂಗ್ ಓಪನ್​ ಆದ ನಂತರದಲ್ಲಿ ಸಿನಿಪ್ರಿಯರು ಮುಗಿಬಿದ್ದು ಬುಕಿಂಗ್ ಶುರುಮಾಡಿದ್ದಾರೆ. ಮುಂಜಾನೆಯ ಶೋಗಳ ಟಿಕೆಟ್​ಗಳು ಈಗಾಗಲೇ ಸೋಲ್ಡ್​​ಔಟ್​ ಆಗಿದೆ. ಬೆಂಗಳೂರಿನ ಪ್ರಮುಖ ಥಿಯೇಟರ್​ಗಳಲ್ಲಿ ಒಂದಾದ ಊರ್ವಶಿ ಚಿತ್ರಮಂದಿರದಲ್ಲಿ ಮುಂಜಾನೆ 3.30ಕ್ಕೆ ಶೋ ಇದ್ದು, ಟಿಕೆಟ್​ ಬೆಲೆ 700 ರೂಪಾಯಿ ದಾಟಿದೆ.

ಮುಂಬೈ, ಕೊಚ್ಚಿ, ಚೆನ್ನೈ ಮೊದಲಾದ ಕಡೆಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಟಿಕೆಟ್​ ಬುಕಿಂಗ್​ ಓಪನ್ ಆಗಿದೆ. ಚೆನ್ನೈನಲ್ಲಿ ತಮಿಳು ಹಾಗೂ ಹಿಂದಿ ವರ್ಷನ್​ ಟಿಕೆಟ್​ಗಳನ್ನು ಬುಕ್ ಮಾಡಬಹುದು. ಅದೇ ರೀತಿ ಕೇರಳದ ಕೊಚ್ಚಿಯಲ್ಲಿ, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ಪ್ರದರ್ಶನ ಕಾಣಲಿದ್ದು, ಟಿಕೆಟ್​ ಬುಕಿಂಗ್ ಓಪನ್ ಆಗಿದೆ. ಮುಂಬೈ ಹಾಗೂ ದೆಹಲಿಯಲ್ಲಿ ಕೂಡ ಟಿಕೆಟ್​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಹಿಂದಿ ವರ್ಷನ್​ಗೆ ಈಗಾಗಲೇ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟಿಕೆಟ್ ಬುಕಿಂಗ್ ಓಪನ್ ಆದ 12 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಟಿಕೆಟ್​ಗಳು ಬುಕ್ ಆದ ಬಗ್ಗೆ ವರದಿ ಆಗಿದೆ. ಬಾಲಿವುಡ್​ನ ಸಂಜಯ್​ ದತ್ ಹಾಗೂ ರವೀನಾ ಟಂಡನ್ ಚಿತ್ರದಲ್ಲಿ ನಟಿಸಿದ್ದು ಚಿತ್ರದ ತೂಕ ಹೆಚ್ಚಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ಹಾಗೂ ‘ಬೀಸ್ಟ್​’ ಚಿತ್ರಗಳಿಗೆ ತಮಿಳುನಾಡಿನಲ್ಲಿ ಸಿಗುತ್ತಿರುವ ಚಿತ್ರಮಂದಿರಗಳೆಷ್ಟು? ಇಲ್ಲಿದೆ ವಿವರ

‘ಪಾರ್ಟ್​ 2’ ಸದ್ಯಕ್ಕಂತೂ ಅಸಂಭವದ ಮಾತು; ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್ ಮಾತು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!