‘ಕೆಜಿಎಫ್​ 2’ ಬಿಡುಗಡೆಗೂ ಮುನ್ನ ಹುಟ್ಟೂರಿಗೆ ಭೇಟಿ; ಒಂದೇ ಫ್ರೇಮ್​ನಲ್ಲಿ ವಿಜಯ್ ಕಿರಗಂದೂರು, ಯಶ್, ಪ್ರಶಾಂತ್ ನೀಲ್

ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಯಶ್ ಹಾಗೂ ಪ್ರಶಾಂತ್​ ನೀಲ್​ ಅವರು ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

‘ಕೆಜಿಎಫ್​ 2’ ಬಿಡುಗಡೆಗೂ ಮುನ್ನ ಹುಟ್ಟೂರಿಗೆ ಭೇಟಿ; ಒಂದೇ ಫ್ರೇಮ್​ನಲ್ಲಿ ವಿಜಯ್ ಕಿರಗಂದೂರು, ಯಶ್, ಪ್ರಶಾಂತ್ ನೀಲ್
ವಿಜಯ್-ಪ್ರಶಾಂತ್ ನೀಲ್-ಪ್ರಶಾಂತ್ ನೀಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 13, 2022 | 2:16 PM

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ (KGF Chapter 2) ತೆರೆಗೆ ಬರೋಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರವನ್ನು ಸ್ವಾಗತಿಸೋಕೆ ಭರ್ಜರಿ ಸಿದ್ಧತೆ ನಡೆದಿದೆ. ಕರ್ನಾಟಕ ಸೇರಿ ಇಡೀ ವಿಶ್ವಾದ್ಯಂತ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಳ್ಳುತ್ತಿದೆ. ಜನರು ಈ ಸಿನಿಮಾ ಕಣ್ತುಂಬಿಕೊಳ್ಳಲು ಕಾದು ಕೂತಿದ್ದಾರೆ. ಮಧ್ಯರಾತ್ರಿಯುಂದಲೇ ಶೋಗಳು ಪ್ರದರ್ಶನ ಕಾಣುತ್ತಿವೆ. ಇನ್ನು, ಇಷ್ಟು ದಿನ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದ ಇಡೀ ಟೀಂ ಈಗ ಸ್ವಲ್ಪ ರಿಲ್ಯಾಕ್ಸ್​ ಆಗಿದೆ. ನಿರ್ಮಾಪಕ ವಿಜಯ್ ಅವರ (Vijay Kiragandur) ಊರು ಕಿರಗಂದೂರು. ಕಿರಗಂದೂರಿನ ಮನೆಗೆ ಯಶ್ (Yash), ಪ್ರಶಾಂತ್ ನೀಲ್ ಹಾಗೂ ವಿಜಯ್ ಅವರು ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ತೆಗೆದ ಫೋಟೋ ವೈರಲ್ ಆಗುತ್ತಿದೆ.

ಅನೇಕರಿಗೆ ಹುಟ್ಟೂರಿನ ಮೇಲೆ ಪ್ರೀತಿ ಇರುತ್ತದೆ. ಎಷ್ಟೇ ಎತ್ತರಕ್ಕೆ ಬೆಳೆದರೂ ಹುಟ್ಟೂರನ್ನು ಮರೆಯೋಕೆ ಆಗುವುದಿಲ್ಲ. ವಿಜಯ್ ಕಿರಗಂದೂರು ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರಿಗೆ ಹುಟ್ಟೂರಿನ ಮೇಲೆ ಅಪಾರ ಪ್ರೀತಿ ಇದೆ. ಹೀಗಾಗಿ, ಅವರು ಸಿನಿಮಾ ರಿಲೀಸ್​ಗೂ ಮುನ್ನ ಕಿರಗಂದೂರಿಗೆ ತೆರಳಿದ್ದಾರೆ.   ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಯಶ್ ಹಾಗೂ ಪ್ರಶಾಂತ್​ ನೀಲ್​ ಅವರು ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ. ಕಿರಗಂದೂರು ಮಂಡ್ಯ ಸಮೀಪದಲ್ಲಿದೆ.

ಕಲೆಕ್ಷನ್ ಬಗ್ಗೆ ಜೋರಾಗಿದೆ ಚರ್ಚೆ

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಸಖತ್​ ಹೈಪ್​ ಸೃಷ್ಟಿ ಆಗಿದೆ. ಅದಕ್ಕೆ ತಕ್ಕಂತೆಯೇ ಚಿತ್ರತಂಡ ಭರ್ಜರಿಯಾಗಿ ಪ್ರಚಾರ ಮಾಡಿದೆ. ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ವಿಚಾರದಲ್ಲಿ ‘ಆರ್​ಆರ್​ಆರ್​’ ಸಿನಿಮಾವನ್ನೂ ಕೂಡ ‘ಕೆಜಿಎಫ್​ 2’ ಚಿತ್ರ ಮೀರಿಸಿದೆ. ಇನ್ನೂ ಕೂಡ ಟಿಕೆಟ್​ ಬುಕಿಂಗ್ ಜೋರಾಗಿ ನಡೆಯುತ್ತಿದೆ. ಅದರ ಆಧಾರದಲ್ಲಿ ಹೇಳುವುದಾದರೆ ಮೊದಲ ದಿನ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಗಳಿಕೆಯನ್ನು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಲಿದೆ.

ದಳಪತಿ ವಿಜಯ್ ನಟನೆಯ ‘ಬೀಸ್ಟ್​’ ಸಿನಿಮಾದಿಂದ ‘ಕೆಜಿಎಫ್​ 2’ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಈ ಮೊದಲು ಊಹಿಸಲಾಗಿತ್ತು. ಆದರೆ ‘ಬೀಸ್ಟ್​’ ಚಿತ್ರದ ಬಗ್ಗೆ ನೆಗೆಟಿವ್​ ವಿಮರ್ಶೆ ಕೇಳಿಬಂದಿರುವುದರಿಂದ ಜನರು ಆ ಸಿನಿಮಾ ನೋಡಲು ಹಿಂದೇಟು ಹಾಕುವ ಸಾಧ್ಯತೆ ಇದೆ. ಇದರಿಂದ ‘ಕೆಜಿಎಫ್​ 2’ಗೆ ಪ್ಲಸ್​ ಪಾಯಿಂಟ್​ ಆಗಲಿದೆ. ಅತ್ತ ಬಾಲಿವುಡ್​ನಲ್ಲಿ ಶಾಹಿದ್​ ಕಪೂರ್​ ನಟನೆಯ ‘ಜೆರ್ಸಿ’ ಸಿನಿಮಾ ಕೊನೇ ಗಳಿಗೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಿಕೊಂಡಿದೆ. ಇದರಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಹೆಚ್ಚು ಚಿತ್ರಮಂದಿರಗಳು ಸಿಗಲಿವೆ. ಈ ಕಾರಣದಿಂದ ಚಿತ್ರದ ಕಲೆಕ್ಷನ್​ ಹೆಚ್ಚಲಿದೆ. ಒಟ್ಟಿನಲ್ಲಿ ಈ ಸಿನಿಮಾ ಮೊದಲ ದಿನವೇ ರೆಕಾರ್ಡ್​ ಸೃಷ್ಟಿ ಮಾಡುವುದು ಖಚಿತ.

ಇದನ್ನೂ ಓದಿ: ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

Sulthana lyrical video: ಅಬ್ಬರಿಸಲು ಬಂದ ‘ಸುಲ್ತಾನ’: ಹೊಸ ಹಾಡು​ ಬಿಡುಗಡೆ ಮಾಡಿದ ‘ಕೆಜಿಎಫ್​: ಚಾಪ್ಟರ್​ 2’ ತಂಡ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್