AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

KGF Chapter 2: ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮುಂದಿನ ವರ್ಷ ಏಪ್ರಿಲ್​ 14ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎಂದು ನಟ ಯಶ್​, ನಿರ್ದೇಶಕ ಪ್ರಶಾಂತ್​ ನೀಲ್​ ತಿಳಿಸಿದ್ದಾರೆ.

KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​
2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್
TV9 Web
| Edited By: |

Updated on:Aug 22, 2021 | 4:06 PM

Share

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಮಾಡಲು ‘ಕೆಜಿಎಫ್​ 2’ ತಂಡ ನಿರ್ಧರಿಸಿದೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ. ನಟ ಯಶ್ (Yash)​, ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಸ್ಮ್ (Hombale Films)​ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ಚಿತ್ರದ ಬಿಡುಗಡೆ ದಿನಾಂಕವನ್ನು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ಜೊತೆಗೆ ಹೊಸ ಪೋಸ್ಟರ್​ ಹಂಚಿಕೊಂಡು ಅಭಿಮಾನಿಗಳಿಗೆ ಈ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಸಿನಿಪ್ರಿಯರು ಕಾಯುತ್ತಿದ್ದರು. ಆ ಕಾಯುವಿಕೆಗೆ ಈಗ ಬ್ರೇಕ್​ ಬಿದ್ದಿದೆ. ಆದರೆ ಈ ವರ್ಷವೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ನಿರಾಸೆ ಆಗಿದೆ. ಈ ಬಹುನಿರೀಕ್ಷಿತ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಮುಂದಿನ ವರ್ಷ ಏ.14ರವರೆಗೂ ಕಾಯುವುದು ಅನಿವಾರ್ಯ ಆಗಿದೆ.

ಕೊವಿಡ್​ ಎರಡನೇ ಅಲೆ ಈಗತಾನೆ ಕಡಿಮೆ ಆಗುತ್ತಿದೆ. ಅಷ್ಟರಲ್ಲಾಗಲೇ ಮೂರನೇ ಅಲೆಯ ಭೀತಿ ಹೆಚ್ಚುತ್ತಿದೆ. ಯಾವುದೇ ಕ್ಷಣದಲ್ಲೂ ಲಾಕ್​ಡೌನ್​ ಜಾರಿ ಆಗಬಹುದೇನೋ ಎಂಬ ಆತಂಕದಲ್ಲೇ ಎಲ್ಲ ಕ್ಷೇತ್ರದ ವ್ಯಾಪಾರ ವಹಿವಾಟುಗಳು ನಡೆಯುತ್ತಿವೆ. ಚಿತ್ರಮಂದಿರಗಳಲ್ಲಿ ಸದ್ಯ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದೆ. ಈ ಎಲ್ಲ ಕಷ್ಟದ ಪರಿಸ್ಥಿತಿ ತಿಳಿಯಾಗಲು ಇನ್ನೂ ಕೆಲವು ತಿಂಗಳು ಸಮಯ ಬೇಕೇ ಬೇಕು. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡಿರುವ ನಿರ್ಮಾಪಕ ವಿಜಯ್​ ಕಿರಗಂದೂರು ಅವರು 2022ರ ಏಪ್ರಿಲ್​ 14ಕ್ಕೆ ‘ಕೆಜಿಎಫ್​ 2’ ಬಿಡುಗಡೆ ದಿನಾಂಕವನ್ನು ನಿಗದಿ ಮಾಡಿದ್ದಾರೆ.

ಕೆಲವೇ ದಿನಗಳ ಹಿಂದೆ ‘ಕೆಜಿಎಫ್​: ಚಾಪ್ಟರ್​ 2’ ತಂಡದಿಂದ ಬಿಗ್​ ನ್ಯೂಸ್​ ಹೊರಬಿದ್ದಿತ್ತು. ಈ ಸಿನಿಮಾದ ಟಿವಿ ಪ್ರಸಾರ ಹಕ್ಕುಗಳನ್ನು ಜೀ ಕನ್ನಡ ವಾಹಿನಿ ಪಡೆದುಕೊಂಡಿದೆ ಎಂಬುದು ಖಚಿತವಾಯಿತು. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ‘ಕೆಜಿಎಫ್​ 2’ ಚಿತ್ರವನ್ನು ಆಯಾ ಭಾಷೆಯ ಜೀ ವಾಹಿನಿ ಪ್ರಸಾರ ಮಾಡಲಿದೆ. ಅದಕ್ಕೂ ಮುನ್ನ ಚಿತ್ರಮಂದಿರದಲ್ಲೇ ಈ ಸಿನಿಮಾ ರಾರಾಜಿಸಲಿದೆ. ಥಿಯೇಟರ್​ನಲ್ಲಿ ಬಿಡುಗಡೆ ಆದ ಬಳಿಕವೇ ಈ ಚಿತ್ರ ಟಿವಿಯಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ:

KGF Chapter 2: ಕೆಜಿಎಫ್​ 2 ಚಿತ್ರಕ್ಕೂ ಮೊದಲೇ ತೆಲುಗು ಸಿನಿಮಾ ಮೂಲಕ ತೆರೆ ಮೇಲೆ ಬರಲಿದ್ದಾರಂತೆ ಯಶ್! ಏನಿದು ಸರ್​ಪ್ರೈಸ್?

KGF 2 ಚಿತ್ರದ ಸ್ಯಾಟಲೈಟ್ ಹಕ್ಕು ಮಾರಾಟ; ಒಟಿಟಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆಯಾ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

Published On - 3:37 pm, Sun, 22 August 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್