Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

Yash: ‘ಐ ಲವ್​ ಯೂ ಪೆಪ್ಸಿ’: ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ
Follow us
ರಾಜೇಶ್ ದುಗ್ಗುಮನೆ
|

Updated on: Jan 24, 2023 | 1:23 PM

ನಟ ಯಶ್ (Yash) ಅವರು ‘ಕೆಜಿಎಫ್ 2’ ಸಿನಿಮಾ ತೆರೆಕಂಡ ಬಳಿಕ ಬೇಡಿಕೆಯ ನಟ ಆಗಿದ್ದಾರೆ. ವಿಶ್ವಮಟ್ಟದಲ್ಲಿ ಅವರನ್ನು ಗುರುತಿಸಲಾಗುತ್ತಿದೆ. ವಿದೇಶಕ್ಕೆ ತೆರಳಿದಾಗ ಅನೇಕರು ಅವರ ಜತೆ ಸೆಲ್ಫಿ ತೆಗೆದುಕೊಂಡಿದ್ದು ಇದಕ್ಕೆ ಸಾಕ್ಷಿ. ಯಶ್ ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್​ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ. ಈಗ ರಾಕಿಂಗ್ ಸ್ಟಾರ್ ಪೆಪ್ಸಿ ಇಂಡಿಯಾಗೆ (Pepsi India) ರಾಯಭಾರಿ ಆಗಿದ್ದಾರೆ. ಇದರ ಪ್ರೋಮೋವನ್ನು ಯಶ್ ಹಂಚಿಕೊಂಡಿದ್ದಾರೆ.

‘ಕೆಜಿಎಫ್ 2’ ಕಳೆದ ವರ್ಷ ತೆರೆಗೆ ಬಂತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ಕಲೆಕ್ಷನ್ ಮಾಡಿದೆ. 2022ರಲ್ಲಿ ತೆರೆಗೆ ಬಂದು ಅತಿ ಹೆಚ್ಚು ಬಿಸ್ನೆಸ್ ಮಾಡಿದ ಭಾರತೀಯ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಯಶ್ ಅವರ ಖ್ಯಾತಿ ಕೂಡ ಹೆಚ್ಚಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಪೆಪ್ಸಿ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಯಶ್ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಪೆಪ್ಸಿ ಕುಡಿಯುತ್ತಿರುವ ವಿಡಿಯೋ ಹಂಚಿಕೊಂಡಿರುವ ಯಶ್​, ‘ಅಭಿನಂದನೆಗಳು ಪೆಪ್ಸಿ. ಐ ಲವ್​ ಯೂ’ ಎಂದು ಹೇಳಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ‘ಇನ್ಮುಂದೆ ಪೆಪ್ಸಿಗೆ ತೂಕ ಬರುತ್ತದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಯಶ್ ಅವರಿಗೆ ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಪಾನ್ ಮಸಾಲ ಸೇವನೆ ಆರೋಗ್ಯಕ್ಕೆ ಹಾನಿಕರ. ಹೀಗಾಗಿ ಯಶ್ ಅವರು ಇದನ್ನು ಪ್ರೋತ್ಸಾಹಿಸಿರಲಿಲ್ಲ.

ಯಶ್ 19ನೇ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಈ ಮೊದಲಿನಿಂದಲೂ ಕುತೂಹಲ ಇದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಯಶ್ ಮುಂದಿನ ಚಿತ್ರವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​​’ ನಿರ್ಮಾಣ ಮಾಡಲಿದೆ ಎಂಬ ಮಾತು ಕೇಳಿ ಬಂದಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ, ಯಾರೆಲ್ಲ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಇನ್ನೂ ಗುಟ್ಟಾಗಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ