KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Sanjay Dutt | Adheera: ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಡಬ್ಬಿಂಗ್​ ಮುಕ್ತಾಯಗೊಂಡಿದೆ ಎಂದು ಹಂಚಿಕೊಂಡಿದ್ದಾರೆ. ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎನ್ನುವುದನ್ನು ತಿಳಿಸಿದ್ದಾರೆ.

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ
ಪ್ರಶಾಂತ್​ನೀಲ್​ ಮತ್ತು ಸಂಜಯ್​ದತ್​
Follow us
TV9 Web
| Updated By: Digi Tech Desk

Updated on:Dec 07, 2021 | 1:22 PM

ಬೆಂಗಳೂರು : ಚಂದನವನದಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾಗುತ್ತಿರುವ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಡಬ್ಬಂಗ್ ಮುಕ್ತಾಯವಾಗಿದೆ. ಪ್ರಶಾಂತ್​ ನೀಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ದತ್​ ಅವರ ಡಬ್ಬಿಂಗ್ ಮುಕ್ತಾಯಗೊಳ್ಳುವ ಮೂಲಕ ಎಲ್ಲಾ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ. ಈ ಕುರಿತು ಕೆಜಿಎಪ್​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಧೀರನ ಪಾತ್ರದಲ್ಲಿ ಕಾಣಿಸಕೊಳ್ಳುತ್ತಿರುವ ಸಂಜಯ್​ದತ್​ ಜತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಚಾಪ್ಟರ್-1 ಹೊಸ ಸಂಚಲನ ಮೂಡಿಸಿತ್ತು. ಇದೀಗ ಕೆಜಿಎಫ್​ ಚಾಪ್ಟರ್ -2 ಎಪ್ರಿಲ್​ 14 ಕ್ಕೆ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯದತ್​ ಸೇರಿದಂತೆ ದೊಡ್ಡ ತಾರಾಗಣವೇ ಕಾಣಿಸಿಕೊಳ್ಳುತ್ತಿದೆ. ವಿಜಯ್​ ಕಿರಗಂದೂರು ಅವರ ನಿರ್ಮಾಣದಲ್ಲಿ, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಎಪ್ರಿಲ್ 14ರಂದು ಸಿನಿಮಾ ರಿಲೀಸ್​ ಆಗುತ್ತಿದೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, 100ಕೋಟಿ ರೂ. ಬಂಡವಾಳದಲ್ಲಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ಇದನ್ನು ಓದಿ:

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Published On - 1:09 pm, Tue, 7 December 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ