ಫ್ಯಾನ್ಸ್​ಗೆ ಅಲರ್ಟ್​ ನೀಡಿದ ‘ಕೆಜಿಎಫ್​ ಚಾಪ್ಟರ್​ 2’ ತಂಡ; ಏನಿದು ಸಮಾಚಾರ?

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.

ಫ್ಯಾನ್ಸ್​ಗೆ ಅಲರ್ಟ್​ ನೀಡಿದ ‘ಕೆಜಿಎಫ್​ ಚಾಪ್ಟರ್​ 2’ ತಂಡ; ಏನಿದು ಸಮಾಚಾರ?
ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 20, 2022 | 3:36 PM

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ತೆರೆಗೆ ಬರೋಕೆ ರೆಡಿ ಆಗಿದೆ. ಏಪ್ರಿಲ್​ 14ರಂದು ವಿಶ್ವಾದ್ಯಂತ ಯಶ್ (Yash) ನಟನೆಯ ಈ ಸಿನಿಮಾ ರಿಲೀಸ್ ಆಗುತ್ತಿದೆ. ನಿಧಾನವಾಗಿ ‘ಕೆಜಿಎಫ್​ 2’ ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಮಾರ್ಚ್​ 21ರಂದು ‘ಕೆಜಿಎಫ್ 2​’ ಟೀಂ ಹೊಸ ಸಾಂಗ್​ ಬಿಡೋಕೆ ಸಿದ್ಧತೆ ಮಾಡಿಕೊಂಡಿದೆ. ‘ತೂಫಾನ್​..’ (Toofan Song) ಹೆಸರಿನ ಲಿರಿಕಲ್​ ಸಾಂಗ್​ ರಿಲೀಸ್ ಮಾಡುವ ಮೂಲಕ ಹವಾ ಸೃಷ್ಟಿಸಲು ‘ಕೆಜಿಎಫ್​’ ತಂಡ ರೆಡಿ ಆಗಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಅದಕ್ಕೂ ಮೊದಲು ‘ಕೆಜಿಎಫ್​ 2’ ತಂಡ ಅಭಿಮಾನಿಗಳಿಗೆ ಅಲರ್ಟ್ ಒಂದನ್ನು ನೀಡಿದೆ.

‘ಕೆಜಿಎಫ್​ 2’ ಸಿನಿಮಾದ ಹೊಸ ಪೋಸ್ಟರ್​ಅನ್ನು ಚಿತ್ರತಂಡ ಇಂದು (ಮಾರ್ಚ್​ 20) ಬಿಡುಗಡೆ ಮಾಡಿದೆ. ಬ್ಯಾಕ್​ಗ್ರೌಂಡ್ ಸಂಪೂರ್ಣವಾಗಿ ಕೆಂಪು ಬಣ್ಣದಲ್ಲಿ ಕಾಣಿಸಿದೆ. ಇದರ ಮಧ್ಯೆ ಯಶ್​ ನಿಂತಿದ್ದಾರೆ. ಅವರ ಲುಕ್​ ಹಾಗೂ ಗತ್ತು ಅಭಿಮಾನಿಗಳಿಗೆ ಸಖತ್​ ಇಷ್ಟವಾಗಿದೆ. ಅಲ್ಲದೆ, ಯಾವ ಯೂಟ್ಯೂಬ್​ ಚಾನೆಲ್​ನಲ್ಲಿ ಸಾಂಗ್​ ರಿಲೀಸ್ ಆಗಲಿದೆ ಎಂಬ ಅಲರ್ಟ್​ಅನ್ನು ಕೂಡ ನೀಡಿದೆ ತಂಡ.

‘ಕೆಜಿಎಫ್​ 2’ ಕನ್ನಡ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಾದ ತೆಲುಗು, ತಮಿಳು, ಮಲಯಾಳಂನಲ್ಲಿ ರಿಲೀಸ್ ಆಗುತ್ತಿದೆ. ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಎಲ್ಲಾ ಭಾಷೆಗಳಲ್ಲಿ ಮಾರ್ಚ್​ 21ರಂದು ಸಾಂಗ್​ ರಿಲೀಸ್ ಆಗಲಿದೆ. ಈ ಬಗ್ಗೆ ಚಿತ್ರತಂಡ ಅಪ್​ಡೇಟ್​ ನೀಡಿದೆ. ದಕ್ಷಿಣ ಭಾರತದ ಸಾಂಗ್​ ಲಹರಿ ಮ್ಯೂಸಿಕ್​ನಲ್ಲಿ ಹಾಗೂ ಹಿಂದಿ ವರ್ಷನ್​, ಎಂಆರ್​ಟಿ ಮ್ಯೂಸಿಕ್​ನಲ್ಲಿ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ನೀಡಲಾಗಿದೆ.

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ಪ್ರಚಾರ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಭರದ ಸಿದ್ಧತೆ ನಡೆದಿದೆ. ಭಾರತ ಮಾತ್ರವಲ್ಲದೇ ವಿದೇಶದ ಚಿತ್ರಮಂದಿರಗಳಲ್ಲಿ ಸ್ಟ್ಯಾಂಡಿ ಮತ್ತು ಪೋಸ್ಟರ್​ಗಳನ್ನು ಪ್ರದರ್ಶಿಸಲು ತಯಾರಿ ನಡೆದಿದೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಸ್ಟ್ಯಾಂಡಿಗಳು ವಿಶೇಷವಾಗಿ ವಿನ್ಯಾಸಗೊಂಡಿವೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಲಿರುವುದರಿಂದ ಅದೇ ರೀತಿಯಲ್ಲಿ ಭರ್ಜರಿ ಪ್ರಚಾರಕಾರ್ಯಕ್ಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಳ್ಳುತ್ತಿದೆ. ಬಾಲಿವುಡ್​ ಸ್ಟಾರ್​ ಕಲಾವಿದರಾದ ಸಂಜಯ್​ ದತ್​, ರವೀನಾ ಟಂಡನ್​ ಕೂಡ ನಟಿಸಿರುವುದರಿಂದ ಸಹಜವಾಗಿಯೇ ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೈಪ್​ ಹೆಚ್ಚಿದೆ. ಅಧೀರ ಎಂಬ ಡಿಫರೆಂಟ್​ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ರಮಿಕಾ ಸೇನ್​ ಎಂಬ ಪವರ್​ಫುಲ್​ ಮಹಿಳೆಯಾಗಿ ರವೀನಾ ಟಂಡನ್​ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರದ ಝಲಕ್​ ಹೇಗಿರಲಿದೆ ಎಂಬುದನ್ನು ಈಗಾಗಲೇ ತೋರಿಸಲಾಗಿದೆ.

ಇದನ್ನೂ ಓದಿ: ಅಕ್ಷಯ್​​ ಕುಮಾರ್ ನಟನೆಯ ‘ಬಚ್ಚನ್​ ಪಾಂಡೆ’ಯಲ್ಲಿ ‘ಕೆಜಿಎಫ್​’ ಚಿತ್ರದ ಬಗ್ಗೆ ಉಲ್ಲೇಖ; ಇಲ್ಲಿದೆ ವಿಡಿಯೋ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ