AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 3 Movie: ‘ಕೆಜಿಎಫ್ 3’ ಚಿತ್ರಕ್ಕಾಗಿ ಕಾಯಬೇಕು ಮತ್ತಷ್ಟು ವರ್ಷ; ಅಪ್​​ಡೇಟ್​ ನೀಡಿದ ವಿಜಯ್ ಕಿರಗಂದೂರು

‘ಕೆಜಿಎಫ್ 2’ ಕ್ಲೈಮ್ಯಾಕ್ಸ್​ನಲ್ಲಿ ರಾಕಿ (ಯಶ್​) ಮೃತಪಡುತ್ತಾನೆ. ಆತ ಭಾರತದಲ್ಲಿ ಮಾಡಿದ ಕೃತ್ಯಗಳ ಲೆಕ್ಕವಷ್ಟೇ ಸರ್ಕಾರಕ್ಕೆ ಸಿಕ್ಕಿರುತ್ತದೆ. ವಿದೇಶದಲ್ಲೂ ಆತ ಒಂದಷ್ಟು ಕೃತ್ಯಗಳನ್ನು ಮಾಡಿದ್ದ. ‘ಕೆಜಿಎಫ್ 3’ ಚಿತ್ರದಲ್ಲಿ ಈ ವಿಚಾರ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ.

KGF 3 Movie: ‘ಕೆಜಿಎಫ್ 3’ ಚಿತ್ರಕ್ಕಾಗಿ ಕಾಯಬೇಕು ಮತ್ತಷ್ಟು ವರ್ಷ; ಅಪ್​​ಡೇಟ್​ ನೀಡಿದ ವಿಜಯ್ ಕಿರಗಂದೂರು
ಯಶ್
TV9 Web
| Edited By: |

Updated on: Jan 09, 2023 | 7:50 AM

Share

‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್​​ನಲ್ಲಿ ‘ಕೆಜಿಎಫ್ 3’ (KGF 3 Movie) ಬಗ್ಗೆ ಅಪ್​ಡೇಟ್​ ಸಿಕ್ಕಿತ್ತು. ‘ಕೆಜಿಎಫ್’ ಸೀರಿಸ್​​ನ ಮೂರನೇ ಪಾರ್ಟ್ ಯಾವಾಗ ಸೆಟ್ಟೇರಲಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿದೆ. ಆದರೆ, ಇದಕ್ಕೆ ಮತ್ತಷ್ಟು ವರ್ಷ ಕಾಯಬೇಕಾಗಿರುವುದು ಅನಿವಾರ್ಯ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​​​ನ ವಿಜಯ್ ಕಿರಗಂದೂರು (Vijay Kiragandur) ಅವರು ಮಾಹಿತಿ ನೀಡಿದ್ದಾರೆ. ಈ ಸಿನಿಮಾದ ಕೆಲಸ ಯಾವಾಗ ಶುರುವಾಗಲಿದೆ ಎಂಬ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಸಿಕ್ಕಿದೆ.

‘ಕೆಜಿಎಫ್ 2’ ಕ್ಲೈಮ್ಯಾಕ್ಸ್​ನಲ್ಲಿ ರಾಕಿ (ಯಶ್​) ಮೃತಪಡುತ್ತಾನೆ. ಆತ ಭಾರತದಲ್ಲಿ ಮಾಡಿದ ಕೃತ್ಯಗಳ ಲೆಕ್ಕವಷ್ಟೇ ಸರ್ಕಾರಕ್ಕೆ ಸಿಕ್ಕಿರುತ್ತದೆ. ವಿದೇಶದಲ್ಲೂ ಆತ ಒಂದಷ್ಟು ಕೃತ್ಯಗಳನ್ನು ಮಾಡಿದ್ದ. ‘ಕೆಜಿಎಫ್ 3’ ಚಿತ್ರದಲ್ಲಿ ಈ ವಿಚಾರ ಹೈಲೈಟ್ ಆಗಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಸೆಟ್ಟೇರೋದು 2025ರಲ್ಲಿ. ರಿಲೀಸ್ ಆಗೋದು 2026ರಲ್ಲಂತೆ! ಈ ಬಗ್ಗೆ ವಿಜಯ್ ಅವರು ಕೋಯಿಮೋಯಿ ಸೈಟ್​ಗೆ ಮಾಹಿತಿ ನೀಡಿದ್ದಾರೆ.

‘ಕೆಜಿಎಫ್ 3 ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಇನ್ನೂ ಆರಂಭ ಆಗಿಲ್ಲ. 2025ರಲ್ಲಿ ಸಿನಿಮಾ ಸೆಟ್ಟೇರುವ ನಿರೀಕ್ಷೆ ಇದೆ. ಕೆಜಿಎಫ್​ ಸೀರಿಸ್​ನಲ್ಲಿ ಐದು ಪಾರ್ಟ್​​ಗಳು ಬರಬಹುದು. ಜೇಮ್ಸ್​ ಬಾಂಡ್ ಸಿನಿಮಾಗಳಲ್ಲಿ ಬಾಂಡ್ ಪಾತ್ರವನ್ನು ಬೇರೆಯವರು ಮಾಡಿದ್ದರು. ಅದೇ ರೀತಿ ‘ಕೆಜಿಎಫ್​’ ಸೀರಿಸ್​ನ ರಾಕಿಭಾಯ್ ಪಾತ್ರವನ್ನು ಬೇರೆಯವರು ಮಾಡಬಹುದು. ಹೀರೋಗಳು ಬದಲಾಗುತ್ತಿರುತ್ತಾರೆ’ ಎಂದಿದ್ದಾರೆ ವಿಜಯ್. ಈ ಮೂಲಕ ಅವರು ಕುತೂಹಲ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಪ್ರಶಾಂತ್ ನೀಲ್ ಅವರು ‘ಸಲಾರ್​’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಮುಂದಿನ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದ ಬಳಿಕ ಅವರು ಜೂ.ಎನ್​ಟಿಆರ್​​ ಜತೆಗಿನ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಇದಾದ ಬಳಿಕವೇ ‘ಕೆಜಿಎಫ್ 3’ ಕೆಲಸಗಳಲ್ಲಿ ಪ್ರಶಾಂತ್ ನೀಲ್ ಬ್ಯುಸಿ ಆಗಲಿದ್ದಾರೆ.

ಇದನ್ನೂ ಓದಿ: ‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್​’ ಚಿತ್ರಕ್ಕೂ ‘ಕೆಜಿಎಫ್ 3’ಗೂ ಲಿಂಕ್ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ‘ಸಲಾರ್​’ ಚಿತ್ರದಲ್ಲಿ ಯಶ್ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ