AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿದ್ದಾರೆ. ನಿರ್ದೇಶಕಿ ಗೀತು ಮೋಹನ್‌ದಾಸ್ ಹಾಕಿದ್ದ ಖಡಕ್ ನಿಯಮಗಳು ಹಾಗೂ ಕನ್ನಡದಲ್ಲಿ ಡೈಲಾಗ್ ಬಾಯಿಪಾಠ ಮಾಡಿದ್ದು ಕಿಯಾರಾಗೆ ದೊಡ್ಡ ಸವಾಲಾಗಿತ್ತು. ಆದರೂ, ಕಿಯಾರಾ ಕನ್ನಡ ಚಿತ್ರರಂಗದ ಕೆಲಸದ ಶೈಲಿಯನ್ನು ಹೊಗಳಿದ್ದಾರೆ. 'ಟಾಕ್ಸಿಕ್' ಬಿಡುಗಡೆ ಸದ್ಯಕ್ಕೆ ಮುಂದೂಡಲಾಗಿದೆ.

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ
ಯಶ್-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:May 30, 2026 | 7:05 AM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಖಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ.

‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ

ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್ ಮಾರ್ನಿಂಗ್’ ಎಂದು ಮಾತನಾಡಿಸುವುದು ಕಿಯಾರಾ ಅವರ ಅಭ್ಯಾಸವಂತೆ. ಆದರೆ ‘ಟಾಕ್ಸಿಕ್’ ಸೆಟ್‌ನಲ್ಲಿ ಇದಕ್ಕೆ ಬ್ರೇಕ್ ಬಿದ್ದಿತ್ತು. ಈ ಬಗ್ಗೆ ಕಿಯಾರಾ ಮಾಹಿತಿ ನೀಡಿದ್ದಾರೆ.

‘ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ನನಗೆ ಮೊದಲೇ ಖಡಕ್ ಆಗಿ ಹೇಳಿದ್ದರು. ನಾಳೆ ನೀನು ಸೆಟ್‌ಗೆ ಬರುವಾಗ ನಿನ್ನ ಪಾತ್ರದ ಮೂಡ್‌ನಲ್ಲೇ ಇರಬೇಕು. ನನಗೆ ಯಾವುದೇ ಔಪಚಾರಿಕ ಮಾತುಕತೆಗಳು ಬೇಡ. ಯಾರಿಗೂ ಹಾಯ್, ಹಲೋ ಎನ್ನಬೇಡ. ನಿನ್ನ ಟೀಮ್ ಜೊತೆಯೂ ಮಾತನಾಡಬೇಡ. ಕೇವಲ ನಿನ್ನ ಕ್ಯಾರೆಕ್ಟರ್ ಜೋನ್‌ನಲ್ಲಿ ಮಾತ್ರ ಇರು ಎಂದು ಸೂಚಿಸಿದ್ದರು. ಪಾತ್ರದ ತೀವ್ರತೆಯನ್ನು ಕಾಯ್ದುಕೊಳ್ಳಲು ಗೀತು ಈ ರೀತಿ ಮಾಡುತ್ತಿದ್ದರು’ ಎಂದು ಕಿಯಾರಾ ನೆನಪಿಸಿಕೊಂಡಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಏಕಕಾಲದಲ್ಲಿ ಇಂಗ್ಲಿಷ್ ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ಚಿತ್ರೀಕರಿಸಲಾಗುತ್ತಿದೆ. ಇದು ತಮಗೆ ದೊಡ್ಡ ಸವಾಲಾಗಿತ್ತು ಎಂದು ಕಿಯಾರಾ ಒಪ್ಪಿಕೊಂಡಿದ್ದಾರೆ. ಮೊದಲಿಗೆ ಇಂಗ್ಲಿಷ್‌ನಲ್ಲಿ ದೃಶ್ಯದ ಶೂಟಿಂಗ್ ನಡೆಯುತ್ತಿತ್ತು. ಅದು ಓಕೆ ಆದ ಬಳಿಕ ಅದೇ ದೃಶ್ಯವನ್ನು ಕನ್ನಡದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಕನ್ನಡ ಭಾಷೆ ಬಾರದ ಕಾರಣ, ಕಿಯಾರಾ ಅವರು ಪ್ರತಿ ದಿನ ಶೂಟಿಂಗ್‌ಗೂ ಮುನ್ನ ಹಿಂದಿನ ರಾತ್ರಿಯೇ ಕುಳಿತು ಡೈಲಾಗ್‌ಗಳನ್ನು ಬಾಯಿಪಾಠ ಮಾಡುತ್ತಿದ್ದರಂತೆ.

ಇದನ್ನೂ ಓದಿ: ‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು 

ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ ಅವರು, ‘ಸಣ್ಣಪುಟ್ಟ ಸಾಂಸ್ಕೃತಿಕ ವ್ಯತ್ಯಾಸಗಳಿರಬಹುದು. ಆದರೆ ಅಂತಿಮವಾಗಿ ನಾವೆಲ್ಲರೂ ಭಾರತೀಯರು. ಹಾಗಾಗಿ ಇಲ್ಲಿನ ಕೆಲಸದ ಶೈಲಿ ನನಗೆ ಹೊಸದೇನೂ ಅನಿಸಲಿಲ್ಲ. ಬಾಲಿವುಡ್ ಹಾಗೂ ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿದಂತೆಯೇ ಇಲ್ಲೂ ಕೂಡ ಒಳ್ಳೆಯ ಅನುಭವ ಸಿಕ್ಕಿದೆ. ಇಲ್ಲಿನ ಸ್ಟಾರ್‌ಡಮ್ ಹಾಗೂ ಮೇಕಿಂಗ್ ಶೈಲಿ ಅದ್ಭುತವಾಗಿದೆ’ ಎಂದು ಹೊಗಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಯಶ್, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಜೂನ್ 4ರಂದು ತೆರೆಕಾಣಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಹೊಸ ದಿನಾಂಕದ ಅಧಿಕೃತ ಪ್ರಕಟಣೆ ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Sat, 30 May 26

Follow Us
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!