AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್-ಪ್ರೇಮ್ ಹೊಸ ಸಿನಿಮಾ ಪೋಸ್ಟರ್​ಗೆ ಎಐ ಬಳಕೆ; ನೆಟ್ಟಿಗರ ಟೀಕೆ

ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಷನ್‌ನ ಹೊಸ ಸಿನಿಮಾದ ಎಐ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳಪೆ ಮಟ್ಟದ ಪೋಸ್ಟರ್ ರಿಲೀಸ್ ಮಾಡಿ ಸಿನಿಮಾದ ಮೇಲಿರುವ ನಿರೀಕ್ಷೆ ಹಾಳುಮಾಡಬೇಡಿ ಎಂದು ಫ್ಯಾನ್ಸ್ ಕಿಡಿಕಾರಿದ್ದಾರೆ. ಅಕ್ಟೋಬರ್ 20ರ ಟೈಟಲ್ ಅನೌನ್ಸ್‌ಮೆಂಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಸುದೀಪ್-ಪ್ರೇಮ್ ಹೊಸ ಸಿನಿಮಾ ಪೋಸ್ಟರ್​ಗೆ ಎಐ ಬಳಕೆ; ನೆಟ್ಟಿಗರ ಟೀಕೆ
ಸುದೀಪ್​-ಪ್ರೇಮ್ Image Credit source: AI
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Sep 16, 2026 | 7:34 AM

Share

ಮುಖ್ಯಾಂಶಗಳು

  • ಪ್ರೇಮ್-ಸುದೀಪ್ ಕಾಂಬಿನೇಷನ್‌ನ ಹೊಸ ಪೋಸ್ಟರ್‌ಗೆ ಎಐ ಬಿಸಿ
  • ಸೋಶಿಯಲ್ ಮೀಡಿಯಾದಲ್ಲಿ ರೊಚ್ಚಿಗೆದ್ದ ಫ್ಯಾನ್ಸ್
  • ಗ್ರಾಫಿಕ್ ಡಿಸೈನರ್ ಇಲ್ವಾ ಎಂದ ನೆಟ್ಟಿಗರು 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಕುರಿತು ಚಿತ್ರಪ್ರೇಮಿಗಳಲ್ಲಿ ಭಾರೀ ನಿರೀಕ್ಷೆ ಸೃಷ್ಟಿಯಾಗಿದೆ. ಗೌರಿ-ಗಣೇಶ ಹಬ್ಬದ ಶುಭಾಶಯ ಕೋರುತ್ತಾ ಚಿತ್ರತಂಡ ಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿ, ಅಕ್ಟೋಬರ್ 20ಕ್ಕೆ ‘ಫಸ್ಟ್ ಲುಕ್ ಹಾಗೂ ಟೈಟಲ್ ಅನೌನ್ಸ್‌ಮೆಂಟ್’ ಮಾಡುವುದಾಗಿ ತಿಳಿಸಿತ್ತು. ಆದರೆ, ಈ ಪೋಸ್ಟರ್ ಇದೀಗ ವಿವಾದ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ನೆಟ್ಟಿಗರ ಅಸಮಾಧಾನಕ್ಕೆ ಕಾರಣವೇನು?

ಬಿಡುಗಡೆಯಾದ ಪೋಸ್ಟರ್‌ನಲ್ಲಿ ಸುದೀಪ್ ಹಾಗೂ ಪ್ರೇಮ್ ಅವರು ಗಣೇಶನ ಮೂರ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ಚಿತ್ರವಿದೆ. ಆದರೆ, ಈ ಪೋಸ್ಟರ್ ಸಂಪೂರ್ಣವಾಗಿ ‘ಆರ್ಟಿಫಿಷಿಯಲ್ ಇಂಟೆಲಿಜೆನ್ಸ್’ (AI) ಬಳಸಿ ಡಿಸೈನ್ ಮಾಡಿದ್ದಾಗಿದ್ದು, ಗುಣಮಟ್ಟದಲ್ಲಿ ತೀರಾ ಕಳಪೆಯಾಗಿದೆ ಎಂಬುದು ಫ್ಯಾನ್ಸ್ ಹಾಗೂ ನೆಟ್ಟಿಗರ ಪ್ರಮುಖ ಆರೋಪ.

ಫ್ಯಾನ್ಸ್ ಎಕ್ಸ್ ಪೋಸ್ಟ್ ವೈರಲ್

‘ದಯವಿಟ್ಟು ಇಂತಹ ಕಳಪೆ ಮಟ್ಟದ ಎಐ ಪೋಸ್ಟರ್‌ಗಳನ್ನು ಹಾಕಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ಹಾಳುಮಾಡಬೇಡಿ. ಪ್ರೊಫೆಷನಲ್ ಗ್ರಾಫಿಕ್ ಡಿಸೈನರ್‌ಗೆ ಕೊಡುವಷ್ಟು ಬಜೆಟ್ ಇಲ್ಲದಿದ್ದರೆ ಪೋಸ್ಟರ್ ರಿಲೀಸ್ ಮಾಡದೇ ಇರುವುದೇ ಒಳಿತು’ ಎಂದು ರೊಚ್ಚಿಗೆದ್ದ ಅಭಿಮಾನಿಯೊಬ್ಬರು ಪ್ರೇಮ್ ಅವರಿಗೆ ಟ್ಯಾಗ್ ಮಾಡಿ ಬರೆದುಕೊಂಡಿದ್ದಾರೆ.

ಎಐ ಮೂಲಕ ಜನರೇಟ್ ಮಾಡಿದ ಮುಖಗಳು, ಹಿನ್ನೆಲೆ ಹಾಗೂ ಗಣೇಶನ ವಿಗ್ರಹದ ಫಿನಿಷಿಂಗ್ ತೀರಾ ಅಸಹಜವಾಗಿ ಕಾಣಿಸುತ್ತಿದೆ. ಪ್ರೇಮ್ ಅವರಂತಹ ದೊಡ್ಡ ನಿರ್ದೇಶಕರಿಂದ ಹಾಗೂ ಸುದೀಪ್ ಅವರಂತಹ ದೊಡ್ಡ ನಟನ ಸಿನಿಮಾದಿಂದ ಈ ರೀತಿಯ ಪೋಸ್ಟರ್ ನಿರೀಕ್ಷಿಸಿರಲಿಲ್ಲ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ.

ಅಕ್ಟೋಬರ್ 20ಕ್ಕೆ ಟೈಟಲ್ ಧಮಾಕ:

ಪೋಸ್ಟರ್ ಕುರಿತು ಇಷ್ಟೆಲ್ಲಾ ಟೀಕೆ-ಟಿಪ್ಪಣಿಗಳು ಬಂದರೂ ಸಹ, ಅಕ್ಟೋಬರ್ 20ರಂದು ಹೊರಬೀಳಲಿರುವ ‘ಫಸ್ಟ್ ಲುಕ್’ ಹಾಗೂ ‘ಆಫೀಶಿಯಲ್ ಟೈಟಲ್’ ಮೇಲಿನ ಕ್ರೇಜ್ ಕಮ್ಮಿಯಾಗಿಲ್ಲ. ಪ್ರೇಮ್-ಸುದೀಪ್ ಕಾಂಬಿನೇಷನ್‌ ‘ದಿ ವಿಲನ್’ ಬಳಿಕ ಮತ್ತೆ ಒಂದಾಗುತ್ತಿರುವುದರಿಂದ ಅಭಿಮಾನಿಗಳು ಆ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ’‘ಓಹ್ ಭ್ರಮೆ‘ ಅಲ್ಲ’’: ಮತ್ತೆ ಒಂದಾದ ಪ್ರೇಮ್-ಸುದೀಪ್

ನೆಟ್ಟಿಗರ ಈ ಟೀಕೆಗೆ ಪ್ರೇಮ್ ಹಾಗೂ ಚಿತ್ರತಂಡ ಹೇಗೆ ಪ್ರತಿಕ್ರಿಯಿಸಲಿದೆ ಹಾಗೂ ಅಕ್ಟೋಬರ್ 20ರಂದು ಬಿಡುಗಡೆಯಾಗುವ ‘ರಿಯಲ್’ ಫಸ್ಟ್ ಲುಕ್ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ