AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಲ ರಂಗ ಭಾಷಾ’ ಚಿತ್ರದಲ್ಲಿ ಇರಲಿದೆ ಶೇ.90 ಸಿಜಿ, 2027ರ ಅಕ್ಟೋಬರ್​​ಗೆ ರಿಲೀಸ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ 'ಬಿಲ್ಲ ರಂಗ ಭಾಷಾ' ಸಿನಿಮಾದ ಶೂಟಿಂಗ್ ಮತ್ತು ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಮಹತ್ವದ ಅಪ್‌ಡೇಟ್ ನೀಡಿದೆ. ಪ್ರಸ್ತುತ ಶೇ. 40 ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಸಂಪೂರ್ಣ ಶೂಟಿಂಗ್ ಮುಗಿಯಲಿದೆ. ಬರೋಬ್ಬರಿ ಶೇ. 90 ರಷ್ಟು ಗ್ರಾಫಿಕ್ಸ್ ಒಳಗೊಂಡಿರಲಿದೆ.

‘ಬಿಲ್ಲ ರಂಗ ಭಾಷಾ’ ಚಿತ್ರದಲ್ಲಿ ಇರಲಿದೆ ಶೇ.90 ಸಿಜಿ, 2027ರ ಅಕ್ಟೋಬರ್​​ಗೆ ರಿಲೀಸ್
Brb
ರಾಜೇಶ್ ದುಗ್ಗುಮನೆ
|

Updated on:Jul 23, 2026 | 9:31 AM

Share

ಮುಖ್ಯಾಂಶಗಳು

  • ‘ಬಿಲ್ಲ ರಂಗ ಭಾಷಾ’ ಬಗ್ಗೆ ಬಿಗ್ ಅಪ್​​ಡೇಟ್
  • ಡಿಸೆಂಬರ್-ಜನವರಿ ವೇಳೆಗೆ ಶೂಟಿಂಗ್ ಕಂಪ್ಲೀಟ್
  • 2027ರ ಅಕ್ಟೋಬರ್ ಸಿನಿಮಾ ಅದ್ಧೂರಿ ಬಿಡುಗಡೆ

‘ಬಿಲ್ಲ ರಂಗ ಭಾಷಾ’ ಸಿನಿಮಾದ (Billa Ranga Bhasha) ಶೂಟ್ ಭರದಿಂದ ಸಾಗುತ್ತಿದೆ. ಮೊದಲನೆಯ ಶೆಡ್ಯೂಲ್​​ಗೂ ಎರಡನೆಯ ಶೆಡ್ಯೂಲ್​​ಗೂ ಸಾಕಷ್ಟು ಗ್ಯಾಪ್ ಆಯಿತು. ಆದರೆ, ನಟ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಈ ಸಿನಿಮಾದ ಶೂಟಿಂಗ್ ಹಾಗೂ ಬಿಡುಗಡೆಯ ದಿನಾಂಕದ ಬಗ್ಗೆ ಚಿತ್ರತಂಡದಿಂದ ಕೊನೆಗೂ ದೊಡ್ಡ ಅಪ್‌ಡೇಟ್ ಸಿಕ್ಕಿದೆ. ನಿರ್ಮಾಪಕ ನಿರಂಜನ್ ರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶೇಕಡಾ 40 ರಷ್ಟು ಶೂಟಿಂಗ್ ಕಂಪ್ಲೀಟ್

ಸಿನಿಮಾದ ಚಿತ್ರೀಕರಣ ಸದ್ಯ ಬಿರುಸಿನಿಂದ ಸಾಗುತ್ತಿದೆ. ಈಗ ನಡೆಯುತ್ತಿರುವ ಶೆಡ್ಯೂಲ್ ಮುಗಿಯುತ್ತಿದ್ದಂತೆ ಚಿತ್ರದ ಶೇಕಡಾ 40ರಷ್ಟು ಶೂಟಿಂಗ್ ಪೂರ್ಣಗೊಳ್ಳಲಿದೆ. ಇನ್ನುಳಿದ ಚಿತ್ರೀಕರಣವನ್ನು ಇದೇ ವರ್ಷದ ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿ ವೇಳೆಗೆ ಸಂಪೂರ್ಣವಾಗಿ ಮುಗಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

2027ಕ್ಕೆ ರಿಲೀಸ್?

ಚಿತ್ರೀಕರಣ ಮುಗಿಯುತ್ತಿದ್ದಂತೆ ಸಿನಿಮಾವನ್ನು ತೆರೆಗೆ ತರಲು ಸಿದ್ಧತೆಗಳು ನಡೆಯಲಿವೆ. ಸದ್ಯಕ್ಕೆ ಚಿತ್ರತಂಡ 2027ರ ಅಕ್ಟೋಬರ್​ನಲ್ಲಿ ಸಿನಿಮಾವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ತಾತ್ಕಾಲಿಕ ಯೋಜನೆ ಹಾಕಿಕೊಂಡಿದೆ.

90% ಸಿಜಿ ಕೆಲಸ

ಈ ಸಿನಿಮಾ ಪ್ರೇಕ್ಷಕರಿಗೆ ಹೊಸದೊಂದು ದೃಶ್ಯ ವೈಭವವನ್ನು ಉಣಬಡಿಸಲಿದೆ. ಚಿತ್ರದಲ್ಲಿ ಬರೋಬ್ಬರಿ ಶೇಕಡಾ 90 ರಷ್ಟು ಸಿಜಿಐ (Computer Generated Imagery) ಮತ್ತು ವಿಎಫ್‌ಎಕ್ಸ್ ಕೆಲಸಗಳು ಇರಲಿವೆ. ಹೀಗಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚಿನ ಸಮಯ ಮೀಸಲಿಡಲಾಗಿದೆ.

ಇದನ್ನೂ ಓದಿ: ಬಿಡುಗಡೆ ಆಯ್ತು ‘ಬಿಲ್ಲ ರಂಗ ಭಾಷಾ’ ಪೋಸ್ಟರ್, ಖಡಕ್ ಅವತಾರದಲ್ಲಿ ಕಿಚ್ಚ

ವಿಕ್ರಾಂತ್ ರೋಣ ಚಿತ್ರದ ನಂತರ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಫೈ ಫ್ಯಾಂಟಸಿ ಚಿತ್ರದ ಮೇಲೆ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ನಿರೀಕ್ಷೆಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:31 am, Thu, 23 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ