Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್

ಉಪೇಂದ್ರ ಅವರು ಕಾರಣಾಂತರಗಳಿಂದ ಇಂದು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಆದಾಗ್ಯೂ ಉಪೇಂದ್ರ ಅವರನ್ನು ನೆನೆಯೋಕೆ ಸುದೀಪ್​​ ಮರೆತಿಲ್ಲ.

Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್
ಸುದೀಪ್​-ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 15, 2021 | 9:21 PM

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದ ಖುಷಿಯಲ್ಲಿದ್ದಾರೆ. ವಿಶೇಷ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ವೇಳೆ ಸುದೀಪ್ ನಾಯಕನಾಗೋಕೆ ಕಾರಣವಾದ ಉಪೇಂದ್ರ ಅವರನ್ನು ನೆನೆದಿದ್ದಾರೆ.

ಉಪೇಂದ್ರ ಅವರು ಕಾರಣಾಂತರಗಳಿಂದ ಇಂದು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಆದಾಗ್ಯೂ ಉಪೇಂದ್ರ ಅವರನ್ನು ನೆನೆಯೋಕೆ ಸುದೀಪ್​​ ಮರೆತಿಲ್ಲ. ಉಪೇಂದ್ರ ಅವರಿಂದ ನಾನು ತುಂಬಾ ಕದಿಯೋದಿದೆ. ಅದು ಗೊತ್ತಾಗಿಯೇ ಅವರು ಬಂದಿಲ್ಲ ಅನಿಸುತ್ತೆ. ನಾನು ಕಲಾವಿದ ಆಗಬಹುದು ಎಂದು ತೋರಿಸಿಕೊಟ್ಟಿದ್ದೇ ಅವರು. ಸಹ ನಿರ್ದೇಶಕ- ನಿರ್ದೇಶಕನಾಗಬೇಕು ಎಂದು ಓಡಾಡುವಾಗ ಉಪೇಂದ್ರ ನೀವು ಇಷ್ಟೆಲ್ಲ ಇಟ್ಟುಕೊಂಡು ನಿರ್ದೇಶಕನಾಗ್ತೀನಿ ಅಂತೀರಲ್ಲ. ಹೋಗಿ ಹೀರೋ ಆಗಿ ಅಂದಿದ್ರು. ಅವತ್ತಿಗೆ ಆ ಮಾತನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದೆ. ನಾನು ನಟನಾಗಬಹುದು ಎಂದು ಮೊದಲು ಗುರುತಿಸಿದ್ದೇ ಅವರು. ನಿರ್ದೇಶನ ಮಾಡೋದಕ್ಕೂ ಅವರ ಸ್ಫೂರ್ತಿ ಇದೆ ಎಂದರು.

ಎಲ್ಲದಕ್ಕೂ ನೀವೇ ಕಾರಣ ನಾನು ಚಿತ್ರರಂಗಕ್ಕೆ ಬಂದು 25 ವರ್ಷ ಆಯ್ತು ಎನಿಸಲೇ ಇಲ್ಲ. ಹಾಗೆ ಅನಿಸೋಕೆ ನೀವು ಬಿಟ್ಟಿಲ್ಲ. ನಾವು ಎಷ್ಟು ಸಿನಿಮಾ ಮಾಡಿದ್ದೇವೆ ಎನ್ನುವುದು ಒಂದು ಲೆಕ್ಕ ಆದರೆ, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆ ಕಲೆಕ್ಷನ್​ ಮಾಡಿದ ಸಿನಿಮಾಗಳೆಷ್ಟು ಎನ್ನುವುದು ಮತ್ತೊಂದು ಲೆಕ್ಕ. ಸಿನಿಮಾ ರಂಗ ಹಾಗೂ ಅಭಿಮಾನಿಗಳು ಕೊಟ್ಟ ಪ್ರೀತಿ ಎದುರಿಗೆ ಬಾಕ್ಸ್​ ಆಫೀಸ್​ ಗಳಿಕೆ ಏನು ಅಲ್ಲ ಎಂದರು.

ಚಿತ್ರರಂಗದಲ್ಲಿ 25 ವರ್ಷ ಕಳೆದ ಸುದೀಪ್​ 1997ರಲ್ಲಿ ತೆರೆಕಂಡ ‘ತಾಯವ್ವ’ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ. ಕಿಚ್ಚ ಸುದೀಪ್​ ನಟನೆಯ ಕೋಟಿಗೊಬ್ಬ 3 ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಮಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್​ ಜನ್ಯಾ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

Published On - 9:20 pm, Mon, 15 March 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ