
ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12 ಅನ್ನು ಕಿಚ್ಚ ಸುದೀಪ್ ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರಿಗೆ ಶಾಕ್ ಎದುರಾಗಿದೆ. ಕಿಚ್ಚ ಸುದೀಪ್ ನಿರ್ಮಾಣದ ‘ವಾರಸ್ದಾರ’ ಧಾರಾವಾಹಿ ವಿಷಯವಾಗಿ ನಡೆದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕಿಚ್ಚ ಸುದೀಪ್, ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಣ ಕೊಡೋದಾಗಿ ನಂಬಿಸಿ ಕೇಸ್ ಹಿಂಪಡೆದುಕೊಳ್ಳುವಂತೆ ಸುದೀಪ್-ಚಕ್ರವರ್ತಿ ಚಂದ್ರಚೂಡ್ ಮಾಡಿದ್ದರಂತೆ. ಆ ಬಳಿಕ ಹಣ ಕೊಡದೆ ವಂಚಿಸಿದ್ದಾರೆ ಎನ್ನಲಾಗಿದೆ.
2016ರಲ್ಲಿ ‘ವಾರಸ್ದಾರ’ ಧಾರಾವಾಹಿ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ‘ವಾರಸ್ದಾರ’ ಧಾರಾವಾಹಿ ಶೂಟಿಂಗ್ಗೆ ದೀಪಕ್ ಮಯೂರ್ ಎಂಬುವವರ ಮನೆಯನ್ನು ಬಾಡಿಗೆಗೆ ಪಡೆಯಲಾಗಿತ್ತು. ಆದರೆ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ಕಾಫಿ ತೋಟಕ್ಕೆ ಹಾನಿ ಆಗಿದೆ, ತೋಟದಲ್ಲಿದ್ದ ಮರ, ಗಿಡಗಳನ್ನು ಕಡಿಯಲಾಗಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅಲ್ಲದೆ ಮನೆಗೆ ಬಾಡಿಗೆ ನೀಡುವುದಾಗಿ ಹೇಳಿದ್ದ ಸುದೀಪ್ ಬಾಡಿಗೆ ಹಣದಲ್ಲಿ ಸಹ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಮನೆ ಮಾಲೀಕ ದೀಪಕ್ ಆರೋಪಿಸಿದ್ದರು. ಎರಡು ವರ್ಷದ ಬಳಿಕ ದೀಪಕ್ ಕೋರ್ಟ್ ಮೆಟ್ಟಿಲೇರಿದರು.
95 ಲಕ್ಷ ಹಣ ಪರಿಹಾರ ನೀಡುವಂತೆ ದೀಪಕ್ ಕೇಸ್ ಹಾಕಿದ್ದರು. 2023ರಲ್ಲಿ ಎನ್ ಕುಮಾರ್ ಎಂಬುವವರು ದೀಪಕ್ಗೆ ಕರೆ ಮಾಡಿ ನಮಗೂ ಹಣ ನೀಡದೆ ಸುದೀಪ್ ಅವರಿಂದ ವಂಚನೆ ಆಗಿದೆ ಎಂದಿದ್ದರು. ಆ ಬಳಿಕ ದೀಪಕ್ ಚಕ್ರವರ್ತಿ ಚಂದ್ರಚೂಡ್ಗೆ ಕರೆ ಮಾಡಿದ್ದರು. ಈ ವೇಳೆ ಚೆನ್ನೈಗೆ ಬರುವಂತೆ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದರಂತೆ.
ಕೇಸ್ ವಾಪಸ್ ಪಡೆದರೆ 60 ಲಕ್ಷ ನೀಡುವುದಾಗಿ ಸುದೀಪ್ ಭರವಸೆ ನೀಡಿದ್ದರು ಎಂಬುದು ದೀಪಕ್ ಮಾತು. ಕೇಸ್ ವಾಪಸ್ ಪಡೆಯುವ ಮುನ್ನ ಚಕ್ರವರ್ತಿ 10 ಲಕ್ಷದ ರೂಪಾಯಿ ಚೆಕ್ ನೀಡಿದ್ದರಂತೆ. ಈ ವಿಶ್ವಾಸದಲ್ಲಿ ದೀಪಕ್ ಕೇಸ್ ಹಿಂಪಡೆದಿದ್ದರು.
ಇದನ್ನೂ ಓದಿ: ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ
ಆದರೆ, ಕೇಸ್ ಹಿಂಪಡೆಯುತ್ತಿದ್ದಂತೆ ಚಕ್ರವರ್ತಿ ಅವರು ದೀಪಕ್ ನಂಬರ್ನ ಬ್ಲಾಕ್ ಮಾಡಿದ್ದಾರೆ ಎನ್ನಲಾಗಿದೆ. ಸುದೀಪ್ ಪರವಾಗಿ ದೀಪಕ್ ಮಾತನಾಡಿರುವ ವಿಡಿಯೋಗಳು ಚಕ್ರವರ್ತಿ ಬಳಿ ಇವೆಯಂತೆ. ಇದನ್ನು ಒತ್ತಾಯಪೂರ್ವಕವಾಗಿ ಪಡೆದಿರುವ ಆರೋಪ ದೀಪಕ್ ಮಾಡಿದ್ದಾರೆ. ಈಗ ಬೆಂಗಳೂರು ಕಮಿಷನ್ ಕಚೇರಿಯಲ್ಲಿ ದೀಪಕ್ ದೂರು ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.