AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ

2019ನೇ ಸಾಲಿನಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನೀಡಲಾಗಿದೆ. ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕೆ ಈ ಪ್ರಶಸ್ತಿ ಸಿಕ್ಕಿದೆ. ಅನುಪಮಾ ಗೌಡ ಅವರು ‘ತ್ರಯಂಬಕಂ’ ಸಿನಿಮಾದಲ್ಲಿನ ಅಭಿನಯಕ್ಕೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ
Kichcha Sudeep, Anupama Gowda
ಮದನ್​ ಕುಮಾರ್​
|

Updated on:Jan 22, 2025 | 5:32 PM

Share

ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ನೀಡಲಾಗಿದೆ. ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

‘ಪೈಲ್ವಾನ್’ ಸಿನಿಮಾಗೆ ಎಸ್​. ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಅವರು ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. 2019ರ ಸೆಪ್ಟೆಂಬರ್​ 12ರಂದು ‘ಪೈಲ್ವಾನ್’ ಚಿತ್ರ ಬಿಡುಗಡೆ ಆಗಿತ್ತು. ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಪಡೆದ ಸುದೀಪ್ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಪಿ. ಶೇಷಾದ್ರಿ ನಿರ್ದೇಶನ ಮಾಡಿದ ‘ಮೋಹನದಾಸ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ಸಿಕ್ಕಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್​ ಮಾಕ್ಟೇಲ್​’ 2ನೇ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ಪಡೆದಿದೆ. ‘ಅರ್ಘ್ಯಂ’ 3ನೇ ಅತ್ಯುತ್ತಮ ಸಿನಿಮಾ ಆಗಿದೆ. ‘ಕನ್ನೇರಿ’ ಚಿತ್ರಕ್ಕೆ ‘ವಿಶೇಷ ಸಾಮಾಜಿಕ ಕಾಳಜಿಯ ಸಿನಿಮಾ’ ಪ್ರಶಸ್ತಿ ನೀಡಲಾಗಿದೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಸಿನಿಮಾಗೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದಲ್ಲಿನ ಅಭಿನಯಕ್ಕೆ ತಬಲಾ ನಾಣಿ ಅವರು ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅನುಷಾ ಕೃಷ್ಣ ಅವರು ‘ಬ್ರಾಹ್ಮಿ’ ಚಿತ್ರದಲ್ಲಿನ ನಟನೆಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸ್ಪೆಷಲ್ ವಿಡಿಯೋ

ದರ್ಶನ್ ನಟನೆಯ ‘ಯಜಮಾನ’ ಚಿತ್ರಕ್ಕಾಗಿ ವಿ. ಹರಿಕೃಷ್ಣ ಅವರು ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಮಿಂಚುಹುಳು’ ಚಿತ್ರಕ್ಕಾಗಿ ಮಾಸ್ಟರ್ ಪ್ರೀತಂ ಅವರಿಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಸಿಕ್ಕಿದೆ. ‘ಸುಗಂಧಿ’ ಸಿನಿಮಾದಲ್ಲಿನ ಅಭಿನಯಕ್ಕೆ ಬೇಬಿ ವೈಷ್ಣವಿ ಅಡಿಗ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ನೀಡಲಾಗಿದೆ.

‘ಲವ್ ಮಾಕ್ಟೇಲ್​’ ಚಿತ್ರದ ಗೀತೆಗಾಗಿ ರಘು ದೀಕ್ಷಿತ್ ಅವರು ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಪಡೆದಿದ್ದಾರೆ. ‘ರಾಗ ಭೈರವಿ’ ಸಿನಿಮಾದಲ್ಲಿನ ಗೀತೆಗಾಗಿ ಜಯದೇವಿ ಜಿಂಗಮ ಶೆಟ್ಟಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಕೊಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:04 pm, Wed, 22 January 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ