‘ನನ್ನ ಹುಟ್ಟುಹಬ್ಬಕ್ಕೆ ಮನೆಯ ಬಳಿ ಯಾರೂ ಬರಬೇಡಿ’ ಅಭಿಮಾನಿಗಳಿಗೆ ಕಿಚ್ಚನ ಮನವಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ. ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ […]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿಲ್ಲ. ಹೀಗಾಗಿ ಜನ ತಮ್ಮ ಎಚ್ಚರಿಕೆಯಲ್ಲೇ ಇರಬೇಕಾದಂತಹ ಪರಿಸ್ಥಿತಿ ಇದೆ. ಈ ನಡುವೆ ಸೆಪ್ಟೆಂಬರ್ 2ರಂದು ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ಮನೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಸೇರುತ್ತಾರೆ. ಹೀಗಾಗಿ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಕಿಚ್ಚ ಸುದೀಪ್ ಬ್ರೇಕ್ ಹಾಕಿದ್ದಾರೆ.
ಹುಟ್ಟುಹಬ್ಬದ ದಿನ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಾವು ಕೋವಿಡ್ ವಿರುದ್ಧ ಹೋರಾಡ್ತಾ ಇದ್ದೇವೆ, ಇನ್ನೂ ಅದರ ವಿರುದ್ಧ ಹೋರಾಡ ಬೇಕಿದೆ. ಕೋವಿಡ್ ಸಮಯದಲ್ಲಿ ಜನರನ್ನು ಒಟ್ಟುಗೂಡಿಸಬಾರದು. ಜನರನ್ನ ಒಟ್ಟುಗೂಡಿಸಿದರೆ ನಾವು 10 ಹೆಜ್ಜೆ ಹಿಂದೆ ಇಟ್ಟಂತೆ. ಹೀಗಾಗಿ ಈ ಸಮಯದಲ್ಲಿ ನಾವು ಸಂಭ್ರಮಿಸುವುದು ಬೇಡ.
ನಿಮ್ಮ ಕುಟುಂಬ, ನನ್ನ ಕುಟುಂಬದಂತೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮನೆ ಬಳಿ ಯಾರೂ ಬರಬೇಡಿ. ನಿಮ್ಮನ್ನು ಭೇಟಿಯಾಗಲು ನನ್ನ ಮನಸ್ಸು ತುಡಿಯುತ್ತಿರುತ್ತದೆ. ಆದರೆ ಈ ಬಾರಿ ಯಾರೂ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ನಟ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.