ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕನ್ನಡ ಚಿತ್ರರಂಗದ ಪರವಾಗಿ ವಿಶೇಷ ಬೇಡಿಕೆ ಇಟ್ಟ ಕಿಚ್ಚ ಸುದೀಪ್
ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ.
ಬೆಂಗಳೂರು: ಕೊರೊನಾ ಮತ್ತು ಲಾಕ್ಡೌನ್ ಬಳಿಕ ಥಿಯೇಟರ್ಗಳನ್ನು ತೆರೆಯಲು ಅವಕಾಶ ನೀಡಿದ್ದಕ್ಕೆ ಹಾಗೂ ಸಿನಿಮಾ ಹಾಲ್ಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ್ದಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ವಿಶೇಷ ಬೇಡಿಕೆ ಒಂದನ್ನು ಇಟ್ಟಿದ್ದಾರೆ.
ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಸುದೀಪ್ ಸಿನಿ ಬದುಕಿನ 25ನೇ ವರ್ಷದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದಾರೆ. ಈ ವೇಳೆ ಸುದೀಪ್ ಯಡಿಯೂರಪ್ಪಗೆ ಈ ಮನವಿ ಇಟ್ಟಿದ್ದಾರೆ.
ಸಿನಿಮಾ ಹಾಲ್ಗಳತ್ತ ಜನರು ಬರಲು ಶುರುಮಾಡಿದ್ದರಿಂದ ಚಿತ್ರರಂಗ ಉಸಿರಾಡುವಂತಾಗಿದೆ. ಸಿನಿಮಾ ಕೆಲಸಗಾರರು ಜೀವನ ನಡೆಸುವಂತಾಗಿದೆ. ಈ ಅವಕಾಶವನ್ನು ಕಿತ್ತುಕೊಳ್ಳಬಾರದು. ಸಿನಿಮಾ ಮಂದಿರಗಳಲ್ಲಿ ಪ್ರೇಕ್ಷಕರ ಮಿತಿಯನ್ನು ಶೇ. 50ಕ್ಕೆ ಇಳಿಸಬಾರದು ಎಂದು ಯಡಿಯೂರಪ್ಪ ಬಳಿ ಸುದೀಪ್ ಕೇಳಿಕೊಂಡಿದ್ದಾರೆ.
ಒಂದೆಡೆ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳದ ಕೆಲವು ಪ್ರದೇಶಗಳಲ್ಲಿ ಲಾಕ್ಡೌನ್ನಂಥ ಕಠಿಣ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಜತೆಗೆ, ಕರ್ನಾಟಕದಲ್ಲಿ ಕೊವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಡುವೆ, ಸಿನಿರಂಗಕ್ಕೆ ಯಾವುದೇ ಸಮಸ್ಯೆ ಉಂಟಾಗಬಾರದು. ನನ್ನ ಸಿನಿಮಾ ಹಾಗೂ ಇತರ ಎಲ್ಲಾ ಸಿನಿಮಾಗಳಿಗೂ ತೊಂದರೆ ಆಗಬಾರದು ಎಂದು ಕೇಳಿಕೊಂಡಿದ್ದಾರೆ.
ಕೊರೊನಾ ಸೋಂಕಿತರ ಪ್ರಮಾಣ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಜ್ಞರ ಜೊತೆ ಸಮಾಲೋಚನಾ ಸಭೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿರುವ ಮುಖ್ಯಮಂತ್ರಿಗಳು, ಕಳೆದ 14 ದಿನಗಳಲ್ಲಿ ಪಾಸಿಟಿವ್ ರೇಟ್ ಹೆಚ್ಚಾಗಿದೆ. ದೇವರ ದಯೆಯಿಂದ ಮರಣ ಪ್ರಮಾಣ ಕಡಿಮೆ ಇದೆ. ಆದರೆ, ಯಾವುದೇ ಕಾರಣಕ್ಕೂ ಜನ ಮೈಮರೆಯಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ನೈಟ್ಕರ್ಫ್ಯೂ, ಲಾಕ್ಡೌನ್ ಅಥವಾ ಸೀಲ್ಡೌನ್ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ ಎಂದಿರುವ ಯಡಿಯೂಪ್ಪ, ಜನರು ಸ್ವತಃ ಜಾಗೃತಿ ವಹಿಸಿ ಅಂತಹ ಕಠಿಣ ನಿರ್ಧಾರ ಕೈಗೊಳ್ಳದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ಎರಡನೆ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು, ದೊಡ್ಡ ದೊಡ್ಡ ಅಪಾರ್ಟ್ಮೆಂಟ್ಗಳಲ್ಲಿ ಲಸಿಕೆ ನೀಡುವುದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗೆ ತಕ್ಷಣ ಲಸಿಕೆ ನೀಡುವುದು ಸೇರಿದಂತೆ ಲಸಿಕೆ ವಿತರಣೆ ಕಾರ್ಯವನ್ನು ಚುರುಕುಗೊಳಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್ ಆಫೀಸ್ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್
Kichcha Sudeep: ಉಪ್ಪಿ ಹೇಳಿದ್ದನ್ನು ಗಂಭೀರವಾಗಿ ತೆಗೆದುಕೊಂಡಿದ್ದಕ್ಕೇ ನಾನು ಹೀರೋ ಆದೆ: ಸುದೀಪ್
Published On - 9:41 pm, Mon, 15 March 21